ಡಿ ಕೆ ಶಿವಕುಮಾರ್ 
ರಾಜಕೀಯ

ಸಂಕ್ರಾಂತಿ ನಂತರ ನಿಗಮ-ಮಂಡಳಿ ನೇಮಕಾತಿ; ಶಾಸಕರಷ್ಟೆ ಕಾರ್ಯಕರ್ತರಿಗೂ ಸ್ಥಾನಮಾನ: ಡಿಕೆ ಶಿವಕುಮಾರ್

ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಬೆಂಗಳೂರು: ನಿಗಮ ಮಂಡಳಿಗಳಲ್ಲಿ ಶಾಸಕರಷ್ಟೇ ಸಂಖ್ಯೆಯಲ್ಲಿ ಕಾರ್ಯಕರ್ತರಿಗೂ ಸ್ಥಾನಮಾನ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ವ್ಯವಸ್ಥೆ ಮಾಡಲಾಗುವುದು. ಅದಕ್ಕಾಗಿ ಎಲ್ಲಾ ನಾಯಕರು ಕುಳಿತು ಚರ್ಚೆ ಮಾಡುತ್ತೇವೆ. ನೇಮಕದ ಪಟ್ಟಿ ಒಂದು ಹಂತಕ್ಕೆ ಬಂದಿದೆ. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ಕೊಟ್ಟಿರುತ್ತಾರೆ. ಅದಕ್ಕಾಗಿ ಎಲ್ಲರ ಜತೆ ಚರ್ಚೆ ಮಾಡಬೇಕು. ಸಂಕ್ರಾಂತಿ ಹಬ್ಬದ ವೇಳೆಗೆ ನೇಮಕ ಆಗಬಹುದು ಎನ್ನುವ ನಿರೀಕ್ಷೆ ಇದೆ ಎಂದರು

ಜನರ ಬಳಿಗೆ ಸರ್ಕಾರ ಕೊಂಡೊಯ್ಯಲು ಎಂಬ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮುಂದಿನ ತಿಂಗಳು ದಿನಕ್ಕೆ ಎರಡು ಅಥವಾ ಮೂರು ವಿಧಾನಸಭಾ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಈ ಮಧ್ಯೆ ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಮಾಡುವ ವೇಳೆ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗಿದೆ ಎಂದು ಹೇಳಿದರು.

ಲೋಕಸಭೆ ಚುನಾವಣೆ ಅಭ್ಯರ್ಥಿಗಳ ವಿಚಾರವಾಗಿ ಕೆಲವು ಸಚಿವರು ವರದಿ ನೀಡಿದ್ದಾರೆ. ಅವರ ಬಗ್ಗೆ ಸಮೀಕ್ಷೆ ನಡೆಸಬೇಕಿದೆ. ಈ ವಿಚಾರವಾಗಿ ಚರ್ಚಿಸಲು ಜ.4 ರಂದು ದೆಹಲಿಗೆ ದೆಹಲಿಗೆ ಹೋಗುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಜತೆಗೆ ಲೋಕಸಭೆ ಚುನಾವಣೆ ಸಿದ್ಧತೆ ವಿಚಾರವಾಗಿ ಜ. 10 ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆ ಸಭೆ ಮಾಡುತ್ತೇವೆ ಎಂದು ಹೇಳಿದರು.

ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ನೀಡಬೇಕು. ಅದಕ್ಕಾಗಿ ಎಲ್ಲ ನಾಯಕರೂ ಕುಳಿತು ಚರ್ಚೆ ಮಾಡುತ್ತೇವೆ. ಕೇಂದ್ರ ನಾಯಕರೂ ಕೆಲವರಿಗೆ ಅಧಿಕಾರ ನೀಡುವ ಮಾತು ಕೊಟ್ಟಿರುತ್ತಾರೆ. ಎಲ್ಲ ಮುಗಿದು ಸಂಕ್ರಾಂತಿ ವೇಳೆಗೆ ನೇಮಕ ಆಗಬಹುದು ಎಂಬ ನಿರೀಕ್ಷೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT