ಜಿ.ಪರಮೇಶ್ವರ್ 
ರಾಜಕೀಯ

ನಾಮಕವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಏಕಿರಬೇಕು? ಅಸಮಾಧಾನಗೊಂಡ ಪರಮೇಶ್ವರ್ ರಾಜಿನಾಮೆ ನಿರ್ಧಾರ; ಕಂಗೆಟ್ಟ ರಾಜ್ಯ ಕಾಂಗ್ರೆಸ್!

ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಣಾಳಿಕೆ ಕಮಿಟಿಯಲ್ಲಿ ಚರ್ಚಿಸದೇ, ಭರವಸೆಗಳನ್ನು ವೇದಿಕೆಯಲ್ಲಿ ಘೋಷಣೆ ಮಾಡುತ್ತಿದ್ದಾರೆ. ನಾಮಕವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಇರುವುದಿಲ್ಲ ಎಂದು ಜಿ ಪರಮೇಶ್ವರ್ ರಾಜೀನಾಮೆ ಪತ್ರ ಬರೆದು ನೀಡಿದ್ದಾರೆ .

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೊಮ್ಮೆ ಅಸಮಾಧಾನ ಸ್ಫೋಟಗೊಂಡಿದೆ. ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರಣಾಳಿಕೆ ಕಮಿಟಿಯಲ್ಲಿ ಚರ್ಚಿಸದೇ, ಭರವಸೆಗಳನ್ನು ವೇದಿಕೆಯಲ್ಲಿ ಘೋಷಣೆ ಮಾಡುತ್ತಿದ್ದಾರೆ. ನಾಮಕವಾಸ್ತೆ ಪ್ರಣಾಳಿಕೆ ಸಮಿತಿಯಲ್ಲಿ ಇರುವುದಿಲ್ಲ ಎಂದು ಜಿ ಪರಮೇಶ್ವರ್ ರಾಜೀನಾಮೆ ಪತ್ರ ಬರೆದು ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ಈ ಹಿಂದೆ ಹಲವು ಬಾರಿ ಅಸಮಾಧಾನ ತೋಡಿಕೊಂಡರು ರಾಜ್ಯ ನಾಯಕರಿಂದ ಯಾವುದೇ ಪ್ರತಿಕ್ರಿಯೆ ಬಂದಿರಲ್ಲ. ಹೀಗಾಗಿ ಜಿ ಪರಮೇಶ್ವರ್ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ. ಇದು ಕಾಂಗ್ರೆಸ್ ಕಂಗೆಡಿಸಿದೆ.

ಪ್ರಣಾಳಿಕೆ ಘೋಷಣೆ ಸಂದರ್ಭದಲ್ಲಿ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂಬುದು ಪರಮೇಶ್ವರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ತಮ್ಮ ಆಪ್ತರ ಬಳಿಯೂ ಬೇಸರ ಹೊರ ಹಾಕಿದ್ದಾರೆ ಎಂಬುದು ಮಾಹಿತಿ. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ.‌ ಅಷ್ಟೇ ಏಕೆ, ಡಿಸಿಎಂ, ಪ್ರಬಲ ಖಾತೆಗಳನ್ನೂ ನಿಭಾಯಿಸಿದ್ದೇನೆ. ಪಕ್ಷ ಸಂಘಟನೆಯಲ್ಲಿ ನನ್ನದೆ ಆದ ಕೊಡುಗೆ ಇದೆ. ಪ್ರಸ್ತುತ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಸಹ ಆಗಿದ್ದೇನೆ. ಆದರೂ ತನ್ನನ್ನ ಕಡೆಗಣಿಸಿ ಉಚಿತ ಯೋಜನೆಗಳ ಘೋಷಣೆ ಮಾಡುತ್ತಿದ್ದಾರೆಂದು ಬೇಸರ ತೋಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದ ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಂದರ್ಭದಲ್ಲಿ ನನ್ನನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ ಎಂಬುದು ಪರಮೇಶ್ವರ್ ಅಸಮಾಧಾನಕ್ಕೆ ಕಾರಣವಂತೆ. ಈ ನಡುವೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.   ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಸದಾಶಿವನಗರ ದಲ್ಲಿರುವ ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ. ಭೇಟಿ ವೇಳೆಯಲ್ಲಿ ಎಲ್ಲವೂ ಸರಿಪಡಿಸುವ ಭರವಸೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT