ಸಿ.ಟಿ ರವಿ 
ರಾಜಕೀಯ

ರಾಜ್ಯ ಗೆಲ್ಲಲು ಗುಜರಾತ್‌ ಮಾದರಿ ಪ್ರಯೋಗ; ಕಾಂಗ್ರೆಸ್‌ಗೆ 160 ಸ್ಥಾನ ಪಾಕಿಸ್ತಾನದ ವರದಿಯಿರಬೇಕು: ಸಿ.ಟಿ.ರವಿ ವ್ಯಂಗ್ಯ

ಕಾಂಗ್ರೆಸ್‌ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಸಮೀಕ್ಷೆಯ ಪ್ರಕಾರ ಚುನಾವಣೆಯಲ್ಲಿ 160 ಸ್ಥಾನ ಸಿಗುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಹೇಳಿಕೊಂಡಿದ್ದಾರೆ. ಬಹುಶಃ ಅವರು ಪಾಕಿಸ್ತಾನದಿಂದ ವರದಿ ಪಡೆದಿರಬೇಕು’ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪ್ರಮುಖ ನಾಯಕರ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ಪಾಕಿಸ್ತಾನದ ಈಗಿನ ಸರ್ಕಾರ ಪತನ ಆಗುತ್ತದೆ ಎಂಬ ಮಾಹಿತಿ ಇದೆ. ಬಹುಶಃ ಅಲ್ಲಿಂದ ವರದಿ ತರಿಸಿಕೊಂಡಿರಬೇಕು ಎಂದರು. ಕರ್ನಾಟಕದಲ್ಲೂ ಉತ್ತರ ಪ್ರದೇಶ, ಗೋವಾ ಮತ್ತು ಗುಜರಾತ್‌ ಮಾದರಿಯ ಫಲಿತಾಂಶವೇ ಬರುತ್ತದೆ. ಕಾಂಗ್ರೆಸ್‌ನವರು 160 ರ ಹಗಲುಗನಸು ಕಾಣುತ್ತಿರಲಿ ಎಂದರು.

ಚುನಾವಣೆಯಲ್ಲಿ ಗೆಲ್ಲಲೇಬೇಕಾದರೆ ಮೊದಲಿಗೆ ಫಲಾನುಭವಿಗಳ ಮನಸ್ಸು ಗೆಲ್ಲಬೇಕಾಗಿದೆ. ಆದ್ದರಿಂದ ಫಲಾನುಭವಿಗಳ ಜತೆ ನಿಕಟ ಸಂಪರ್ಕ ಹೊಂದಲು ಎಲ್ಲ ಜಿಲ್ಲೆಗಳಲ್ಲೂ ಫಲಾನುಭವಿಗಳ ಸಮಾವೇಶ ನಡೆಸಬೇಕು ಎಂದು ಶುಕ್ರವಾರ ರಾತ್ರಿ ನಡೆದ ಪ್ರಮುಖ ನಾಯಕರ ಸಭೆಯಲ್ಲಿ ನಿರ್ಧರಿಸಲಾಯಿತು ರವಿ ತಿಳಿಸಿದ್ದಾರೆ.

ಗುಜರಾತ್ ಮತ್ತು ಉತ್ತರ ಪ್ರದೇಶ ರಾಜ್ಯಗಳ ಚುನಾವಣೆಗಳ ಸಂದರ್ಭದಲ್ಲೂ ಫಲಾನುಭವಿಗಳ ಸಮಾವೇಶಗಳನ್ನು ವ್ಯಾಪಕವಾಗಿ ನಡೆಸಲಾಗಿತ್ತು. ಅದರಿಂದಾಗಿ ಆ ರಾಜ್ಯಗಳ ಚುನಾವಣೆಗಳಲ್ಲಿ ಭರ್ಜರಿ ಗೆಲುವು ಪಡೆಯಲು ಸಾಧ್ಯವಾಯಿತು. ಅದೇ ಪ್ರಯೋಗವನ್ನು ಇಲ್ಲೂ ನಡೆಸಲಾಗುವುದು ಎಂದು ಹೇಳಿದರು.

ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಕೇಂದ್ರ ಅಥವಾ ರಾಜ್ಯ ಸರ್ಕಾರಗಳ ಒಂದಲ್ಲ ಒಂದು ಕಾರ್ಯಕ್ರಮಗಳ ಫಲಾನುಭವಿಗಳು ಶೇ 70‌ ರಷ್ಟು ಇದ್ದಾರೆ. ಅವರನ್ನು ಬಿಜೆಪಿ ಮತದಾರರನ್ನಾಗಿ ಪರಿವರ್ತಿಸಲು ಪ್ರಯತ್ನಿಸುತ್ತೇವೆ ಎಂದು ರವಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT