ಸಾಂದರ್ಭಿಕ ಚಿತ್ರ 
ರಾಜಕೀಯ

ಪಕ್ಷದ ಹೆಸರಿನಲ್ಲಿ ನಕಲಿ ವೆಬ್ ಸೈಟ್: ಪೊಲೀಸರಿಗೆ ಕಾಂಗ್ರೆಸ್ ದೂರು

ಪಕ್ಷದ ಹೆಸರಿನಲ್ಲಿ ಕೆಲವು ಅಪರಿಚಿತರು ನಕಲಿ ವೆಬ್ ಸೈಟ್ ತೆರೆದಿರುವುದಾಗಿ ರಾಜ್ಯ ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಸಿದೆ.

ಬೆಂಗಳೂರು: ಪಕ್ಷದ ಹೆಸರಿನಲ್ಲಿ ಕೆಲವು ಅಪರಿಚಿತರು ನಕಲಿ ವೆಬ್ ಸೈಟ್ ತೆರೆದಿರುವುದಾಗಿ ರಾಜ್ಯ ಕಾಂಗ್ರೆಸ್ ಪೊಲೀಸರಿಗೆ ದೂರು ಸಲ್ಲಿಸಿದೆ.

ನಕಲಿ ವೆಬ್ ಸೈಟ್ ನಲ್ಲಿ ಪಕ್ಷ ಹಾಗೂ ಅದರ ನಾಯಕರಿಗೆ ಅಗೌರವ ತರುವಂತಹ ಹೇಳಿಕೆಗಳನ್ನು ಫೋಸ್ಟ್ ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಕಾನೂನು ವಿಭಾಗದ ಕಾರ್ಯಕಾರಿ ಸಮಿತಿ ಸದಸ್ಯ ಶತಭಾಷ್ ಶಿವಣ್ಣ ಸೈಬರ್ ಕ್ರೈಮ್ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.

ನಕಲಿ ವೆಬ್ ಸೈಟ್ ತೆರೆದಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಪೊಲೀಸರು ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರಿಗೂ ದೂರು ಸಲ್ಲಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಟ್ವೀಟರ್ ನಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

IPL 2026: ರೋಹಿತ್ ಶರ್ಮಾ ದಾಖಲೆ ಧೂಳಿಪಟ ಮಾಡಿದ Virat Kohli; ಮತ್ತೆ ನಂಬರ್ 1 ಪಟ್ಟ!

IPL 2026: ಕೊನೆಗೂ ಗೆದ್ರಲ್ಲಪ್ಪಾ..; SRH ವಿರುದ್ಧ LSGಗೆ ಭರ್ಜರಿ ಜಯ, ಮೈದಾನದಲ್ಲೇ ನಾಯಕ Rishabh Pant ಬಿಗಿದಪ್ಪಿದ Sanjiv Goenka

IPL 2026: ಕೊನೆಗೂ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದ ಲಖನೌ, ಕಣ್ಣೀರು ಹಾಕಿದ ಸಂಜೀವ್ ಗೋಯೆಂಕಾ, Video!

SCROLL FOR NEXT