ಜಮೀರ್ ಅಹಮದ್, ಹೆಚ್ ಡಿಕೆ ಸಾಂದರ್ಭಿಕ ಚಿತ್ರ 
ರಾಜಕೀಯ

ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್: ಜೆಡಿಎಸ್ ತೀವ್ರ ಆಕ್ರೋಶ

ಶಾಸಕ ಜಮೀರ್ ಅಹಮದ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ? ಎಂದು ಪ್ರಶ್ನಿಸಿದೆ.

ಬೆಂಗಳೂರು: ಶಾಸಕ ಜಮೀರ್ ಅಹಮದ್ ವಿರುದ್ಧ ಜೆಡಿಎಸ್ ತೀವ್ರ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ನಾಲಗೆಯ ಮೇಲೆ ಸದಾ ಕಂಡವರ ಎಂಜಲು ಚಪ್ಪರಿಸುವ ಜಮೀರ್ ಅಹಮದ್, ನಿಮಗೆ ಮುಸ್ಲಿಂ ಸಮುದಾಯದ ಬಗ್ಗೆ ಮಾತನಾಡುವ ನೈತಿಕತೆ ಎಲ್ಲಿದೆ?ರಾಜಕಾರಣಕ್ಕಾಗಿ ನೀವು ಆ ಸಮುದಾಯವನ್ನು ಹೇಗೆ ನಡೆಸಿಕೊಂಡಿದ್ದಿರಿ?ಹೆಚ್.ಡಿ.ದೇವೇಗೌಡರ ಕುಟುಂಬ ಹೇಗೆ ನಡೆಸಿಕೊಳ್ಳುತ್ತಿದೆ ಎನ್ನುವುದು ದೇಶಕ್ಕೇ ಗೊತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಚೆನ್ನಾಗಿರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ. 

ಅರಮನೆಯಂಥ ವಿಲಾಸಿ ಭವನದಲ್ಲಿ ಐಷಾರಾಮಿ ಜೀವನ ನಡೆಸುವ ನಿಮಗೆ, ನಿಮ್ಮದೇ ಕ್ಷೇತ್ರದ ಗೌರಿಪಾಳ್ಯ, ಪಾದರಾಯನಪುರದ ಬಡ ಮುಸ್ಲಿಂ ಬಂಧುಗಳು ಎಂಥ ಕಷ್ಟದ ಸ್ಥಿತಿಯಲ್ಲಿ ಇದ್ದಾರೆ ಎನ್ನುವುದು ಗೊತ್ತಾ? ಕಾಮಾಲೆ ಕಣ್ಣಲ್ಲಿ ಮುಸ್ಲಿಂ ಸಮುದಾಯದ ಬಗ್ಗೆ ಮೊಸಳೆ ಕಣ್ಣೀರು ಹಾಕುವ ನಿಮಗೆ ಮುಸ್ಲಿಮರ ನೈಜಸ್ಥಿತಿಯ ಬಗ್ಗೆ ಅರಿವಿದೆಯಾ? ಎಂದು ಪ್ರಶ್ನಿಸಿದೆ. 

ಹರಕಲು ನಾಲಿಗೆಯ ಜಮೀರ್, ಮುಸ್ಲಿಂ ಸಮುದಾಯಕ್ಕೆ ಸೇರಿದ ನಿಮಗೆ ರಾಜಕೀಯ ಜನ್ಮಕೊಟ್ಟಿದು ಇದೇ ಕುಮಾರಣ್ಣ.ವಿಧಾನ ಸಭೆಯ ಮಾರ್ಷಲ್ ಗಳು ಕುತ್ತಿಗೆಪಟ್ಟಿ ಹಿಡಿದು ಹೊರದಬ್ಬಿದಾಗ ಇದೇ ಕುಮಾರಣ್ಣ ನಿಮ್ಮ ಮಾನ ಕಾಪಾಡಿದ್ದು. ಅಂದು ಶಪಥಗೈದ ಕುಮಾರಣ್ಣ ನಿಮ್ಮನ್ನು ಶಾಸಕರನ್ನಾಗಿ ಮಾಡಿದ್ದು ನೆನಪಿಲ್ಲವೇ? ನಿಯತ್ತಿಲ್ಲದ ನಿಮಗೆ ಇದೆಲ್ಲಾ ಅರ್ಥವಾದೀತೆ? ಉಂಡ ಮನೆಯ ಗಳ ಇರಿಯುವ ಜಮೀರ್, ಸಿಎಂ ಇಬ್ರಾಹಿಂ ಅವರ ರಾಜಕೀಯ ಹಿತದ ಬಗ್ಗೆ ಈಗ ನೆನಪು ಬಂತಾ ನಿಮಗೆ? ಹಿಂದೆ, ಇದೇ ಸಿಎಂ ಇಬ್ರಾಹಿಂ ಅವರನ್ನು ಅದೇ ನಿಮ್ಮ ನಾಯಕ ಶಿಕಾಮಣಿ ಸಿದ್ದರಾಮಯ್ಯ ತಮ್ಮ ಸಂಪುಟಕ್ಕೆ ಯಾಕೆ ಸೇರಿಸಿಕೊಳ್ಳಲಿಲ್ಲ? ಹೋಗಲಿ, ಪ್ರತಿಪಕ್ಷ ನಾಯಕರನ್ನಾಗಿ ಮಾಡುವ ಅವಕಾಶವೂ ಇತ್ತು. ಅದನ್ನು ಮಾಡಲಿಲ್ಲ ಯಾಕಪ್ಪಾ ಜಮೀರ್? ಎಂದು ತರಾಟೆಗೆ ತೆಗೆದುಕೊಂಡಿದೆ. 

ಇಬ್ರಾಹಿಂ ಅವರನ್ನು ನಾವು ಅತ್ಯಂತ ಗೌರವಯುತವಾಗಿ ನಡೆಸಿಕೊಂಡಿದ್ದೇವೆ. ಪಕ್ಷಕ್ಕೆ ಬಂದಾಗ ಪ್ರೀತಿಯಿಂದ ಬರ ಮಾಡಿಕೊಂಡಿದ್ದೇವೆ. ಈಗ ಅವರು ನಮ್ಮ ಅಧ್ಯಕ್ಷರು. ನಿಮ್ಮ ಗಂಜಿ ಕೇಂದ್ರವಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಓರ್ವ ಮುಸ್ಲಿಂ ನಾಯಕ ಪಕ್ಷದ ಅಧ್ಯಕ್ಷರಾಗುವುದು ಸಾಧ್ಯವೇ? ಕಾಮಾಲೆ ಕಣ್ಣಲ್ಲಿ ಕೆಂಡ ಸುರಿದುಕೊಂಡರೆ ಯಾರಿಗೆ ನಷ್ಟ ಜಮೀರ್? ಇಬ್ರಾಹಿಂ ಪುತ್ರನ ಬಗ್ಗೆ ವಿಷಕಾರುವ ಕೆಟ್ಟ ಪ್ರಯತ್ನ ಮಾಡಿದ್ದೀರಿ. ಹುಮನಾಬಾದ್ ನಲ್ಲಿ ಯುವಕ ಸಿಎಂ ಫಯಾಜ್ ಗೆದ್ದೇ ಗೆಲ್ಲುತ್ತಾರೆ. ನಿಮಗೂ ಈ ವಿಷಯ ಚೆನ್ನಾಗಿ ಗೊತ್ತು. ಪಂಚರತ್ನ ರಥಯಾತ್ರೆ ಈ ಕ್ಷೇತ್ರದಲ್ಲಿ ಹೇಗೆ ಅಬ್ಬರಿಸಿತು ಎನ್ನುವ ಮಾಹಿತಿ ಪಡೆದುಕೊಳ್ಳಿ. ನಿಮ್ಮದೆ ಸಮುದಾಯದ ತರುಣನ ಮೇಲೆ ಈ ಪರಿಯ ಮತ್ಸರ ಏಕೆ ಜಮೀರ್? ಎಂದು ಪ್ರಶ್ನಿಸಿದೆ. 

ಇಬ್ರಾಹಿಂ ಅವರನ್ನು ಕಾಂಗ್ರೆಸ್ ಪಕ್ಷದಲ್ಲಿ ಮುಗಿಸಲು ಹೊರಟಿದ್ದು ಸುಳ್ಳಾ? ನಿಮ್ಮ ರೀತಿ ಇಬ್ರಾಹಿಂ ರಾಜಕೀಯದಲ್ಲಿ ಸಭ್ಯತೆಯ ಎಲ್ಲೆ ಮೀರಿದವರಲ್ಲ. ಆದರೆ, ಸಭ್ಯತೆಯ ಗಂಧಗಾಳಿ ಗೊತ್ತಿಲ್ಲದ ನಿಮಗೆ ರಾಜಕೀಯ ಜನ್ಮಕೊಟ್ಟ ಮಾತೃಪಕ್ಷದ ಬಗ್ಗೆ ಇರುವ ಮತ್ಸರ ನಿಮ್ಮ ಕೊಳಕು ಮನಃಸ್ಥಿತಿಗೆ ಹಿಡಿದ ಕನ್ನಡಿ. ಇಬ್ರಾಹಿಂ ಅವರನ್ನು ಕಾಂಗ್ರೆಸ್ ನಲ್ಲಿ ಮುಗಿಸಲು ಷಡ್ಯಂತ್ರ ರೂಪಿಸಿದಂತೆ, ಈಗ ಅವರ ಮಗನ ವಿಷಯದಲ್ಲೂ ದುಷ್ಟತಂತ್ರ ಹೂಡಲು ಹೊರಟಿದ್ದೀರಿ. ಸಿದ್ದಹಸ್ತನ ಜತೆ ಸೇರಿ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಮುಗಿಸಿದ ಮಿಸ್ಟರ್ ಜಮೀರ್, ಮುಸ್ಲಿಂ ಸಮುದಾಯಕ್ಕೆ ನಿಮಗಿಂತ ದೊಡ್ಡ ಶತ್ರು ಬೇರೆ ಯಾರೂ ಇಲ್ಲ. ಸಮುದಾಯಕ್ಕೆ ಈ ಸತ್ಯ ಅರ್ಥವಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT