ರಾಜಕೀಯ

ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಸಮಿತಿ ರಚಿಸಿದ ಕಾಂಗ್ರೆಸ್

Manjula VN

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಗೆ ಕಾಂಗ್ರೆಸ್ ವೇಗ ನೀಡಿದೆ. ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಎಐಸಿಸಿ ಮಟ್ಟದಲ್ಲಿ ಸ್ಕ್ರೀನಿಂಗ್ ಸಮಿತಿಯನ್ನು ರಚಿಸಿ ಆದೇಶ ಹೊರಡಿಸಿದೆ.

ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಆಪ್ತರಾಗಿರುವ, ರಾಜಸ್ಥಾನ ಮೂಲದ 73 ವರ್ಷದ ಹಿರಿಯ ರಾಜಕಾರಣಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮೋಹನ್ ಪ್ರಕಾಶ್ ಅಧ್ಯಕ್ಷತೆಯಲ್ಲಿ ಸ್ಕ್ರೀನಿಂಗ್ ಸಮಿತಿಯನ್ನು ರಚನೆ ಮಾಡಲಾಗಿದೆ.

ಉಳದಂತೆ ಒಡಿಶಾ ಮೂಲದ ಸಂಸದ ಸಪ್ತಗಿರಿ ಉಳಕ, ರಾಜಸ್ಥಾನದ ರಾಜ್ಯಸಭಾ ಸದಸ್ಯ ನೀರಜ್ ಡಾಂಗಿ, ಬಿಹಾರದ ಸಂಸದ ಮೊಹಮ್ಮದ್ ಜಾವೇದ್ ಅವರನ್ನು ಸಮಿತಿ ಸದಸ್ಯರನ್ನಾಗಿ ಮಾಡಲಾಗಿದೆ.

ಅಧಿಕೃತ ಸದಸ್ಯರನ್ನಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಪರಿಷತ್ ಪ್ರತಿಪಕ್ಷ ನಾಯಕ ಬಿಕೆ. ಹರಿಪ್ರಸಾದ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ರಾಜ್ಯ ಉಸ್ತುವಾರಿಯಲ್ಲಿರುವ ಎಐಸಿಸಿ ಕಾರ್ಯದರ್ಶಿಗಳನ್ನು ನೇಮಿಸಲಾಗಿದೆ. ಚುನಾವಣಾ ಸಮಿತಿಯ ಶಿಫಾರಸುಗಳನ್ನು ಈ ಕಮಿಟಿ ಸ್ಕ್ರೀನಿಂಗ್ ಮಾಡಲಿದೆ.

SCROLL FOR NEXT