ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದವರು ಯಾರು? ರಕ್ತದಲ್ಲೇ ಬ್ರಾಹ್ಮಣ ವಿರೋಧಿತನ ಇದೆ; 3 ಜಿಲ್ಲೆ ಇಟ್ಟುಕೊಂಡು ಸಿಎಂ ಆಗುವ ಕನಸೇತಕೆ?

ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದವರು ಯಾರು? ಅವರ ರಕ್ತದಲ್ಲೇ ಬ್ರಾಹ್ಮಣ ವಿರೋಧಿತನ ಇದೆ. ರಾಮಕೃಷ್ಣ ಹೆಗಡೆಯವರ ಕಾಲದಿಂದಲೇ ದಾಳಿ ಮಾಡುತ್ತಾ ಬಂದವರು. ಈಗ ಬಾಯಲ್ಲಿ ನೇರವಾಗಿ ಹೇಳಿದ್ದಾರೆ .

ಭಟ್ಕಳ: ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರಿಗೆ ಕಲ್ಲು ಹೊಡೆದವರು ಯಾರು? ಅವರ ರಕ್ತದಲ್ಲೇ ಬ್ರಾಹ್ಮಣ ವಿರೋಧಿತನ ಇದೆ. ರಾಮಕೃಷ್ಣ ಹೆಗಡೆಯವರ ಕಾಲದಿಂದಲೇ ದಾಳಿ ಮಾಡುತ್ತಾ ಬಂದವರು. ಈಗ ಬಾಯಲ್ಲಿ ನೇರವಾಗಿ ಹೇಳಿದ್ದಾರೆ ಎಂದು ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರಿಹಾಯ್ದಿದ್ದಾರೆ.

ಭಟ್ಕಳದಲ್ಲಿ ಮಾತನಾಡಿದ ಅವರು, ಇಷ್ಟು ದಿನ ಕಲ್ಲಲ್ಲಿ ಹೊಡೆಯುತ್ತಿದ್ದರು. ಬ್ರಾಹ್ಮಣ ಸಮುದಾಯವನ್ನ ಕೀಳಾಗಿ ನೋಡುವ, ಸಮುದಾಯಕ್ಕೆ ಅಪಮಾನ ಮಾಡುವ, ತುಚ್ಛವಾಗಿ ಕಾಣುವುದು ಒಬ್ಬ ಮಾಜಿ ಮುಖ್ಯಮಂತ್ರಿಗೆ ಶೋಭೆಯಲ್ಲ ಎಂದರು.

‘ಎಚ್‌ಡಿಕೆ ಅವರಿಗೆ ಮೂರು ಜಿಲ್ಲೆಯಲ್ಲಷ್ಟೆ ಪ್ರಭಾವವಿದೆ. ಮತ್ತೆ ಸಿ.ಎಂ ಆಗುವ ಕನಸು ಹೊತ್ತು ತಿರುಗಾಡುತ್ತಿದ್ದಾರೆ. ಅಧಿಕಾರಕ್ಕೆ ಏರಲಾಗದು ಎಂಬುದು ಅರಿವಾಗುತ್ತಿದ್ದಂತೇ ಜಾತಿ ಹೇಳಿಕೆ ನೀಡುತ್ತಿದ್ದಾರೆ’  ಈ ಬಾರಿ ಕಳೆದ ಬಾರಿಯಷ್ಟೂ ಅವರು ಗೆಲ್ಲಲ್ಲ. ಕಳೆದ ಬಾರಿ ಯಾರ್ಯಾರದ್ದೋ ಸಹಾಯದಿಂದ ಗೆದ್ದಿದ್ದಾರೆ. ಈ ಬಾರಿ 20ಕ್ಕಿಂತ ಮೇಲೆ ಅವರು ಹೋಗಲ್ಲ. ಸರ್ವೆ ರಿಪೋರ್ಟ್ ನಲ್ಲಿ ಅವರಿಗೆ 20 ಸ್ಥಾನವನ್ನೂ ಮುಟ್ಟಲ್ಲ ಎನ್ನುವುದು ಅವರಿಗೆ ಗೊತ್ತಾಗಿದೆ. ಹೀಗಾಗಿ ಮಾನಸಿಕ ಚಂಚಲತೆಯಿಂದ ಮಾತನಾಡುತ್ತಿದ್ದಾರೆ ಎಂದರು‌.

ಈ ಬಾರಿ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಅಲ್ಲ. ಬದಲಿಗೆ, ಸಾರ್ವಕರ್ ಹಾಗೂ ಟಿಪ್ಪು ಸಿದ್ಧಾಂತಗಳ ನಡುವೆ ನಡೆಯಲಿದೆ. ದೇಶಭಕ್ತ ಸಾವರ್ಕರ್ ಬೇಕಾ ಅಥವಾ ಮತಾಂಧ ಟಿಪ್ಪು ಬೇಕಾ ಎಂದು ಜನ ತೀರ್ಮಾನಿಸುತ್ತಾರೆ’ ಎಂದು ಕಟೀಲ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT