ಆರ್.ಅಶೋಕ್ 
ರಾಜಕೀಯ

ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಆರ್ ಅಶೋಕ್ ಮುಕ್ತ- ಸಿಎಂ ಬಸವರಾಜ ಬೊಮ್ಮಾಯಿ; ಗೋ ಬ್ಯಾಕ್ ಅಭಿಯಾನಕ್ಕೆ ಬೆಚ್ಚಿದ್ರಾ ಸಾಮ್ರಾಟ್!

ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಸಚಿವ ಆರ್.ಅಶೋಕ್ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಮಂಡ್ಯ ಜಿಲ್ಲಾ ಉಸ್ತುವಾರಿಯಿಂದ ಸಚಿವ ಆರ್.ಅಶೋಕ್ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ತಮ್ಮನ್ನು ಉಸ್ತುವಾರಿಯಿಂದ ಮುಕ್ತಗೊಳಿಸುವಂತೆ ಆಶೋಕ್ ತಮಗೆ ಪತ್ರ ಬರೆದಿದ್ದರು ಎಂದು ಬೊಮ್ಮಾಯಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಉಸ್ತುವಾರಿ ಬದಲಾಯಿಸಲಾಗಿದ್ದು, ಇನ್ನು ಯಾರನ್ನೂ ನೇಮಕ ಮಾಡಿಲ್ಲ ಎಂದು ಹೇಳಿದ್ದಾರೆ.

ಅಶೋಕ್ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿಯಾಗಿ ನೇಮಕ ಮಾಡಿದ ಮೇಲೆ  ಸ್ವಪಕ್ಷೀಯರಿಂದಲೇ ತೀವ್ರ ವಿರೋಧ ವ್ಯಕ್ತವಾಗಿತ್ತು. ಮಂಡ್ಯದಲ್ಲಿ ಗೋ ಬ್ಯಾಕ್ ಅಶೋಕ್ ಅಭಿಯಾನ ನಡೆದಿತ್ತು. ಜಿಲ್ಲೆಯಲ್ಲಿ ಹೊತ್ತಿಕೊಂಡಿರುವ ಅಸಮಾಧಾನ ಹೊಗೆ ಹೊತ್ತಿಕೊಂಡ ಹಿನ್ನೆಲೆಯಲ್ಲಿ. ಪಕ್ಷದ ಸಂಘಟನೆಗೆ ವ್ಯತಿರಿಕ್ತ ಪರಿಣಾಮ ಬೀರಬಹುದೆಂಬ ಮುನ್ನೆಚ್ಚರಿಕೆಯಿಂದ ಅಶೋಕ್ ಅವರನ್ನು ಬದಲಾಯಿಸಲಾಗಿದೆ ಎನ್ನಲಾಗಿದೆ.

ಸಚಿವ ಆರ್ ಅಶೋಕ್ ಅವರು ಮೂಲತಃ ಬೆಂಗಳೂರು ನಗರದವರಾಗಿದ್ದು, ಪದ್ಮನಾಭ ನಗರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಅವರಿಗೆ ಮಂಡ್ಯ ಜಿಲ್ಲೆಯ ಉಸ್ತುವಾರಿ ನೀಡಿರುವುದರಿಂದ ಅತ್ತ ಮಂಡ್ಯಕ್ಕೂ ಹೋಗದೆ, ಇತ್ತ ಪದ್ಮನಾಭ ನಗರ ಕ್ಷೇತ್ರಕ್ಕೂ ಹೋಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸಚಿವ ಆರ್ ಅಶೋಕ್ ಅವರಿಗೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?