ಯತೀಂದ್ರ ಸಿದ್ದರಾಮಯ್ಯ 
ರಾಜಕೀಯ

ಕೋಲಾರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ: ಊಹಾಪೋಹಗಳಿಗೆ ಯತೀಂದ್ರ ತೆರೆ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದಲೇ ಸ್ಪರ್ಧೆಗಿಳಿಯುತ್ತಿದ್ದಾರೆಂದು ವರಣಾ ಶಾಸಕ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಸ್ಪಷ್ಟಪಡಿಸಿದ್ದು, ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಮೈಸೂರು: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರದಿಂದಲೇ ಸ್ಪರ್ಧೆಗಿಳಿಯುತ್ತಿದ್ದಾರೆಂದು ವರಣಾ ಶಾಸಕ ಹಾಗೂ ಸಿದ್ದರಾಮಯ್ಯ ಅವರ ಪುತ್ರ ಸ್ಪಷ್ಟಪಡಿಸಿದ್ದು, ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಯತೀಂದ್ರ ಅವರು, ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವುದು ಖಚಿತವಾಗಿದ್ದು, ಹಾಗಾಗಿ ವರುಣಾ ಕ್ಷೇತ್ರಕ್ಕೆ ನಾನೇ ಅಭ್ಯರ್ಥಿ ಎಂದು ಹೇಳಿದ್ದಾರೆ.

ನಮ್ಮ ತಂದೆಯವರು ಈಗಾಗಲೇ ಕೋಲಾರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತೇನೆ ಎಂದಿದ್ದಾರೆ. ಅವರು ಅಲ್ಲಿಂದ ಸ್ಪರ್ಧೆ ಮಾಡುವುದು ಖಚಿತ. ಹೀಗಾಗಿ ವರುಣಾ ಕ್ಷೇತ್ರದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎಂಬುದರ ಬಗ್ಗೆ ನನಗೆ ಚಿಂತೆಯಿಲ್ಲ, ಚುನಾವಣೆಯಲ್ಲಿ ಗೆಲ್ಲಲು ಎಲ್ಲರೂ ತಂತ್ರ ರೂಪಿಸುತ್ತಾರೆ. ಕಳೆದ 15 ವರ್ಷಗಳಿಂದ ತಂದೆ ಹಾಗೂ ನಾನು ಮಾಡಿರುವ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ವರುಣಾದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. "ಭವಿಷ್ಯದಲ್ಲಿಯೂ ನಾನು ನನ್ನ ಅತ್ಯುತ್ತಮ ಕಾರ್ಯಗಳನ್ನು ಮುಂದುವರಿಸುತ್ತೇನೆಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!