ರಾಜಕೀಯ

ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಇಲ್ಲ ಎಂದರೆ ರಾಜ್ಯದ ಜನರ ಪರಿಸ್ಥಿತಿಯೇನಿರಬಹುದು?; ಡಿ.ಕೆ.ಶಿವಕುಮಾರ್

Manjula VN

ಬೆಂಗಳೂರು: ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಿಂದಾಗಿ ಪುತ್ತೂರಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ರದ್ದು ಮಾಡಲಾಗಿದೆ. ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ ಎಂದರೆ, ರಾಜ್ಯಜ ಜನರ ಪರಿಸ್ಥಿತಿ ಹೇಗಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಶನಿವಾರ ಪ್ರಶ್ನಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹ ಸಚಿವರಿಗೆ ರಕ್ಷಣೆ ಇಲ್ಲ ಎಂದರೆ ಜನರ ಪರಿಸ್ಥಿತಿ ಏನಿರಬಹುದು? ಕಾನೂನಿಲ್ಲದ ಸರ್ಕಾರ ಇಲ್ಲಿಗೆ ಕೊನೆಯಾಗಬೇಕು. ರಾಜ್ಯದಲ್ಲಿ ಜನಪರವಾದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. ನಾವು ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿ ಮಾಡ್ತೀವಿ. ಉಡುಪಿ, ದಕ್ಷಿಣ ಕನ್ನಡದಲ್ಲಿ ನಾವು ಹತ್ತು ಸ್ಥಾನ ಗೆಲ್ಲುತ್ತೇವೆ ಎಂದು ಹೇಳಿದರು.

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಕರಾವಳಿಯಲ್ಲಿ ಕಾಂಗ್ರೆಸ್  10 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಬಂದಿದೆ. ಕರಾವಳಿ ಭಾಗದಲ್ಲಿ ಕಾಂಗ್ರೆಸ್ ಪಕ್ಷ ತನ್ನದೇ ಆದ ಕಾರ್ಯಕ್ರಮ ರೂಪಿಸಿದೆ. ಪಕ್ಷ ಸಂಘಟನೆ ಮಾಡಲಾಗುತ್ತಿದೆ. ಈ ಭಾಗದ ಹಿಂದುಳಿದ ವರ್ಗಗಳಾದ ಮೊಗವೀರರು, ಬಂಟರು, ಬಿಲ್ಲವರು, ಕುಲಾಲ ಸಮುದಾಯಗಳಿಗೆ ಪ್ರತ್ಯೇಕ ನಿಗಮ ಮಾಡಿ, ಈ ಭಾಗಕ್ಕೆ ಪ್ರತ್ಯೇಕ ಪ್ರಣಾಳಿಕೆ ಪ್ರಕಟ ಮಾಡಿ, ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಿ ಉದ್ಯೋಗ ಸೃಷ್ಟಿಗೆ ಉತ್ತೇಜನ ನೀಡಲಾಗುವುದು ಎಂದು ತಿಳಿಸಿದರು.

ಈ ಭಾಗದಲ್ಲಿ ಹತ್ಯೆ ನಡೆದಾಗ ಬಿಜೆಪಿ ಕಾರ್ಯಕರ್ತರು ಮಂತ್ರಿ ಹಾಗೂ ಬಿಜೆಪಿ ಅಧ್ಯಕ್ಷರ ವಿರುದ್ಧ ಹೇಗೆ ಪ್ರತಿಭಟನೆ ನಡೆಸಿದರು ಎಂದು ನಿಮಗೆ ಗೊತ್ತೇ ಇದೆ. ಹಿಂದುತ್ವದ ಹೆಸರಿನ ಹೋರಾಟದಲ್ಲಿ ಬಿಜೆಪಿ ನಾಯಕರ ಮಕ್ಕಳು ಬಲಿಯಾಗಿಲ್ಲ. ಬಡವರ ಮಕ್ಕಳನ್ನು ಬಲಿ ಪಡೆಯುತ್ತಿದ್ದಾರೆ. ಈ ಬಗ್ಗೆ ಜನರಿಗೆ ಉತ್ತರ ನೀಡುವ ಜವಾಬ್ದಾರಿಯನ್ನು ಮುಖ್ಯಮಂತ್ರಿಗಳಿಗೆ ಬಿಡುತ್ತೇನೆ ‘ ಎಂದರು.

SCROLL FOR NEXT