ರಾಜಕೀಯ

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ರಾಜೀನಾಮೆ, ಕಾಂಗ್ರೆಸ್ ಸೇರಲು ಸಜ್ಜು

Nagaraja AB

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರದಲ್ಲಿರುವಂತೆಯೇ, ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಕೆಎಸ್ ಕಿರಣ್ ಕುಮಾರ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಗೆ ಹಿನ್ನಡೆಯಾಗಿದ್ದು, ಸೋಮವಾರ ಅವರು ಕಾಂಗ್ರೆಸ್ ಸೇರಲಿದ್ದಾರೆ. ಕಿರಣ್ ಕುಮಾರ್ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಸಲ್ಲಿಸಿದ್ದಾರೆ. 

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧು ಸ್ವಾಮಿ ಪ್ರತಿನಿಧಿಸುವ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಕಡಿಮೆ ಎಂಬ ಸುಳಿವು ಸಿಕ್ಕ ನಂತರ ಕಿರಣ್ ಪಕ್ಷ ತೊರೆಯಲು ನಿರ್ಧರಿಸಿದ್ದಾರೆ. ಅವರು ಉನ್ನತ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದು, ಟಿಕೆಟ್ ಭರವಸೆ ನೀಡಿದ್ದು, ಸೋಮವಾರ ಬೆಳಿಗ್ಗೆ 9.30 ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ ಎಂದು ಮೂಲಗಳು  ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿವೆ.

ಸಾದರ್ ಲಿಂಗಾಯಿತ ಸಮುದಾಯದ ಕಿರಣ್ ಕುಮಾರ್, ಯಡಿಯೂರಪ್ಪ ಅವರ ಕಟ್ಟಾ ನಿಷ್ಠರಾಗಿದ್ದರು. ಯಡಿಯೂರಪ್ಪ ಅವರ ಸಲಹೆಯಂತೆ 2018 ರಲ್ಲಿ ಚಿಕ್ಕನಾಯಕನಹಳ್ಳಿ ಸ್ಥಾನವನ್ನು ಜೆ.ಸಿ. ಮಾಧುಸ್ವಾಮಿಗೆ ತ್ಯಾಗ ಮಾಡಿದ್ದರು.

SCROLL FOR NEXT