ರಾಜಕೀಯ

ಬಿಜೆಪಿ 'ಹಿಂಸಾಚಾರ ರಾಜಕೀಯ'ವನ್ನು ಅಳವಡಿಸಿಕೊಂಡಿದೆ: ರಣದೀಪ್ ಸುರ್ಜೇವಾಲಾ

Manjula VN

ಬೆಳಗಾವಿ: ಮೋದಿ ಸರ್ಕಾರ ಮತ್ತು ಬೊಮ್ಮಾಯಿ ಸರ್ಕಾರ ಹಿಂಸಾಚಾರ ರಾಜಕಾರಣ ಮಾಡಿದ್ದು, ಕಾಂಗ್ರೆಸ್ ನಾಯಕರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರು ಭಾನುವಾರ ಆರೋಪಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಸೋಲಿನ ಭೀತಿಯಲ್ಲಿ ಬಿಜೆಪಿ ಸರ್ಕಾರ ಇದ್ದು, ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಅವರನ್ನು ಮುಗಿಸುವ ಬೆದರಿಕೆ ಹಾಕುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ ಸೇರಿದಂತೆ ನಮ್ಮಲ್ಲಿ ಯಾರನ್ನಾದರೂ ಕೊಲ್ಲುವುದಾದರೆ ಹೇಳಿ...ಅವರು ಹೇಳಿದ ಜಾಗಕ್ಕೆ ಯಾವಾಗ ಬೇಕಾದರೂ ಬರುತ್ತೇವೆ ಎಂದು ಸವಾಲು ಹಾಕಿದರು.

ಕಾಂಗ್ರೆಸ್ ಪಕ್ಷವು ದೇಶದ ಜನರ ಕಲ್ಯಾಣಕ್ಕೆ ಬದ್ಧವಾಗಿದೆ. ನಮ್ಮ ಮಹಾತ್ಮಾ ಗಾಂಧಿ, ಇಂದಿರಾ ಗಾಂಧಿ ಮತ್ತು ರಾಜೀವ್ ಗಾಂಧಿಯಂತಹ ನಾಯಕರು ಈ ರೀತಿಯ 'ಹಿಂಸಾತ್ಮಕ ರಾಜಕೀಯ'ದಿಂದಾಗಿ ಕೊಲ್ಲಲ್ಪಟ್ಟರು. ಆದರೆ ಕಾಂಗ್ರೆಸ್ ತನ್ನ ತತ್ವಗಳಿಗೆ ಬದ್ಧವಾಗಿದೆ ಮತ್ತು ನಮ್ಮ ನಾಯಕರು ದೇಶಕ್ಕಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಿದ್ದಾರೆ ಬ್ರಾಂಡ್ ಕರ್ನಾಟಕ'ವನ್ನು ಉಳಿಸಲು ಕರ್ನಾಟಕದಲ್ಲಿ ಕಾಂಗ್ರೆಸ್ ಹೋರಾಟ ನಡೆಸಲಿದೆ ಎಂದು ಹೇಳಿದರು.

ಬಳಿಕ ಅಭ್ಯರ್ಥಿಗಳ ಘೋಷಣೆ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, 15 ದಿನಗಳ ನಂತರ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು. ಪಾರದರ್ಶಕತೆ ಕಾಯ್ದುಕೊಳ್ಳಲು ಆಕಾಂಕ್ಷಿ ಅಭ್ಯರ್ಥಿಗಳಿಂದ ಬಹಿರಂಗವಾಗಿ 2 ಲಕ್ಷ ದೇಣಿಗೆ ಸಂಗ್ರಹಿಸಿದ್ದೇವೆ ಎಂದು ತಿಳಿಸಿದರು.

SCROLL FOR NEXT