ರಾಜಕೀಯ

ಹಿರಿಯ ನಟ ಅನಂತ್ ನಾಗ್ ಇಂದು ಸಂಜೆ ಬಿಜೆಪಿಗೆ ಸೇರ್ಪಡೆ

Sumana Upadhyaya

ಬೆಂಗಳೂರು: ಜೆ.ಎಚ್. ಪಟೇಲ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ, ಶಾಸಕ, ಪರಿಷತ್​ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದ ಹಿರಿಯ ನಟ ಅನಂತ್ ನಾಗ್ ಇಂದು ಬುಧವಾರ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ.

ಇಂದು ಸಂಜೆ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್​ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಸಚಿವ ಮುನಿರತ್ನ, ಡಾ‌. ಸುಧಾಕರ್ ಹಾಗೂ ಇತರ ನಾಯಕರು ಕಾರ್ಯಕ್ರದಲ್ಲಿ ಹಾಜರಿರಲಿದ್ದಾರೆ.

ಇವರ ಜೊತೆಗೆ ಇಂದು ಕೆಲವರು ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಇನ್ನು ಎರಡು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಖ್ಯಾತನಾಮರು, ಗಣ್ಯರು, ಕಲಾವಿದರು, ಮತ್ತು ಬೇರೆ ಪಕ್ಷದ ಅಸಂತುಷ್ಟ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ರಾಜ್ಯದ ಮೂರು ಪ್ರಮುಖ ಪಕ್ಷಗಳು ಪ್ರಯತ್ನಿಸುತ್ತಿವೆ. 

SCROLL FOR NEXT