ಬಿ ವೈ ವಿಜಯೇಂದ್ರ 
ರಾಜಕೀಯ

ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದೆ ಕಾಂಗ್ರೆಸ್‌: ವಿಜಯೇಂದ್ರ

ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.

ಮೈಸೂರು: ವಿಧಾನಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.

ಮೈಸೂರು ಮೈದಾನದಲ್ಲಿ ಆಯೋಜಿಸಿದ್ದ ಭಾರತೀಯ ಜನತಾ ಯುವ ಮೋರ್ಚಾ (ಬಿಜೆವೈಎಂ) ಯುವ ಸಮಾವೇಶದಲ್ಲಿ ಮಾತನಾಡಿದ ವಿಜಯೇಂದ್ರ ಅವರು, "ರಾಜ್ಯಗಳ ಜನರು ಮತ್ತು ಯುವಕರು ಡಬಲ್ ಇಂಜಿನ್ ಸರ್ಕಾರವನ್ನು ನಂಬುತ್ತಾರೆ ಅದು ಅಭಿವೃದ್ಧಿಯನ್ನು ವೇಗಗೊಳಿಸಲು ಸಹಾಯ ಮಾಡುತ್ತದೆ ಎಂದು ಹೇಳಿದರು.

ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಕಾಂಗ್ರೆಸ್, ಲೋಕಾಯುಕ್ತ ಸಂಸ್ಥೆಯನ್ನು ಏಕೆ ವಿಸರ್ಜಿಸಿತು ಎಂಬುದನ್ನು ಸ್ಪಷ್ಟಪಡಿಸಬೇಕು. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ, ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರಚಿಸುವ ಮೂಲಕ ಭ್ರಷ್ಟಾಚಾರಕ್ಕೆ ಉತ್ತೇಜನ ನೀಡಿದ್ದು ಕಾಂಗ್ರೆಸ್ ಎಂದು ಆರೋಪಿಸಿದರು.

ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದೇ ಬಿಡ್ತೀವಿ ಎಂದು ಹಗಲುಗನಸು ಕಾಣುತ್ತಿದ್ದಾರೆ. ಕೇಂದ್ರ ಸರ್ಕಾರ ಕೊಟ್ಟ ಅಕ್ಕಿ ಚೀಲದಲ್ಲಿ ಸಿದ್ದರಾಮಯ್ಯ ಫೋಟೋ ಹಾಕಿಕೊಂಡು ಪುಗಸಟ್ಟೆ ಪ್ರಚಾರ ಪಡೆದರು. ಜಾತಿ ರಾಜಕಾರಣ ಮಾಡುವ ಕಾಂಗ್ರೆಸ್ ಮತ್ತು ಮಂಡ್ಯದಲ್ಲಿ ಬಿಜೆಪಿ ಗೆಲಲ್ಲು ಸಾಧ್ಯವಿಲ್ಲ ಎಂಬ ಕಾಲವಿತ್ತು. ಅಲ್ಲಿ ಬದಲಾವಣೆ ಗಾಳಿ ಬೀಸಿ ಆಗಿದೆ. ಕೆ.ಆರ್.ಪೇಟೆಯಲ್ಲಿ ಕಮಲದ ಹೂ ಅರಳಿದ್ದು, ಅದು ಇತರೆ ಕ್ಷೇತ್ರಗಳಿಗೂ ವಿಸ್ತರಣೆಯಾಗಬೇಕು. ಜಿಲ್ಲೆಯೊಳಗೆ ಬಿಜೆಪಿಗೆ ಠೇವಣಿ ಕೂಡ ಸಿಗುವುದಿಲ್ಲ ಎನ್ನುತ್ತಿದ್ದರು. ಈಗ ಭದ್ರವಾಗಿ ನೆಲೆಯೂರುವಷ್ಟು ಬಲಿಷ್ಟವಾಗಿದೆ.

ಯಾವುದೇ ದುಷ್ಟಶಕ್ತಿಯಿಂದ ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಸಾಧ್ಯವಿಲ್ಲ. ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯೋಧರಂತೆ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸಬೇಕು. ಮಂಡ್ಯದ ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷ ಗೆಲ್ಲುವಂತೆ ದುಡಿಯಬೇಕಿದೆ. ಆ ಮೂಲಕ ಪ್ರಧಾನಿ ಮೋದಿ ಕೈ ಬಲಪಡಿಸುವಂತೆ ಮನವಿ ಮಾಡಿದರು.

ಸಂಸದ ತೇಜಸ್ವಿ ಸೂರ್ಯ ಮಾತನಾಡಿ, ಡಬಲ್ ಇಂಜಿನ್ ಆಡಳಿತವಿರುವ ರಾಜ್ಯಗಳು ಅಭಿವೃದ್ಧಿ ಹೊಂದಿದ್ದು, ಬಿಜೆಪಿಯೇತರ ರಾಜ್ಯಗಳಲ್ಲಿ ಕೇಂದ್ರದ ಅನುದಾನಿತ ಕಾರ್ಯಕ್ರಮ ಅರ್ಹರಿಗೆ ತಲುಪುತ್ತಿಲ್ಲ ಎಂದರು.

ಕೇಂದ್ರ ಸರ್ಕಾರ ಹೆದ್ದಾರಿ, ರೈಲ್ವೆ ಅಭಿವೃದ್ಧಿ, ವೈದ್ಯಕೀಯ ಕಾಲೇಜು ಮಂಜೂರು ಮಾಡಿದೆ, ಎಲ್ಲ ಕಾರ್ಯಕ್ರಮಗಳನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.

ಇದೇ ವೇಳೆ ಜನರು ಉದ್ಯೋಗ ಅರಸಿ ಬೆಂಗಳೂರಿಗೆ ಸಾಮೂಹಿಕವಾಗಿ ಹೋಗುವ ಬದಲು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವ ಮೈಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶ್ಲಾಘಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್