ಸಿ.ಟಿ ರವಿ 
ರಾಜಕೀಯ

ಮಂಡ್ಯ ಜನ ವಂಶವಾಹಿ ರಾಜಕಾರಣ ವಿರೋಧಿಸಿ; ಸಾರ್ವಜನಿಕವಾಗಿ ಕಣ್ಣೀರು ಹಾಕುವ ನಾಯಕರ ನಂಬುವುದನ್ನು ಬಿಡಿ: ಸಿ.ಟಿ ರವಿ

ಡಿ.ಕೆ ಶಿವಕುಮಾರ್ ಅವರು ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?, ಒಂದು ಸಮುದಾಯದ ಬೆಂಬಲದಿಂದ ಗೆಲ್ಲಲು ಸಾಧ್ಯವಿಲ್ಲಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

ಮೈಸೂರು: ಕರ್ನಾಟಕದಲ್ಲಿ ಕೇಸರಿ ಪಕ್ಷದ ಪರವಾಗಿ ಪ್ರಬಲ ಅಲೆ ಇದೆ, ಹೆಚ್ಚಿನ ಸಂಖ್ಯೆಯಲ್ಲಿ ಯುವಕರು ಬಿಜೆಪಿ ಸೇರುತ್ತಿದ್ದು, ರಾಜ್ಯಾದ್ಯಂತ ಬಿಜೆಪಿ ಪರ ಧ್ರುವೀಕರಣ ಮುಂದುವರಿಯಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ರವಿ, ಮಂಡ್ಯ ಜಿಲ್ಲೆಯ ಜನರು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಲ್ಲುತ್ತಾರೆ ಮತ್ತು ಜೆಡಿಎಸ್ ಭದ್ರಕೋಟೆ ಎಂದು ಪರಿಗಣಿಸಲಾದ ಜಿಲ್ಲೆಯಿಂದ ಅತಿ ಹೆಚ್ಚು ಬಿಜೆಪಿ ಶಾಸಕರನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಒಂದು ಸಮುದಾಯವನ್ನು ಅವಲಂಬಿಸಿ ಯಾರಾದರೂ ರಾಜಕೀಯ ಮಾಡಲು ಹೇಗೆ ಸಾಧ್ಯ? ಡಿ.ಕೆ ಶಿವಕುಮಾರ್ ಅವರು ಒಕ್ಕಲಿಗರ ಸಂಘದ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆಯೇ?, ಒಂದು ಸಮುದಾಯದ ಬೆಂಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲಾ ಸಮುದಾಯಗಳ ಬೆಂಬಲ ಬೇಕು ಎಂದು ಸಿಟಿ ರವಿ ಹೇಳಿದ್ದಾರೆ.

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಹಾಗೂ ಅವರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ಸಿ.ಟಿ ರವಿ, ಮಂಡ್ಯದ ಜನತೆ ವಂಶಾಡಳಿತ ರಾಜಕಾರಣವನ್ನು ವಿರೋಧಿಸಬೇಕು. ಸಾರ್ವಜನಿಕ ಸಮಾರಂಭಗಳಲ್ಲಿ ಕಣ್ಣೀರು ಹಾಕುವ ನಾಯಕರನ್ನು ನಂಬುವುದನ್ನು ಬಿಡಬೇಕು ಎಂದು ಒತ್ತಾಯಿಸಿದರು.

ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಭೇಟಿ ನೀಡಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಮಾಂಸಾಹಾರಿ ಸೇವಿಸುವ ಸಮುದಾಯದಲ್ಲಿ ಜನಿಸಿದವನು, ಆದರೆ ಮಾಂಸಾಹಾರ ಸೇವಿಸಿದ ನಂತರ ಯಾವುದೇ ದೇವಸ್ಥಾನಕ್ಕೆ ಭೇಟಿ ನೀಡಿಲ್ಲ ನಾನು ಧಾರ್ಮಿಕ ವ್ಯಕ್ತಿ ಎಂದು ಸಮರ್ಥಿಸಿಕೊಂಡರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT