ಸಿದ್ದರಾಮಯ್ಯ 
ರಾಜಕೀಯ

ನಾನಾಗಲಿ, ಎಂ.ಬಿ.ಪಾಟೀಲ್ ಆಗಲಿ ನಯಾ ಪೈಸೆ ಹಣ ಪಡೆದಿಲ್ಲ, ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ ಸವಾಲು

ನಾನಾಗಲೀ ಅಥವಾ ಎಂ.ಬಿ.ಪಾಟೀಲ್ ಆಗಲೀ ಎಲ್​ಒಸಿ ಬಿಡುಗಡೆ ಮಾಡಲು ಐದು ಪೈಸೆ ಲಂಚ ತೆಗೆದುಕೊಂಡಿದ್ದರೆ ರಾಜಕೀಯ ನಿವೃತ್ತಿ ಪಡೆದು, ಸನ್ಯಾಸತ್ವ ತೆಗೆದುಕೊಳ್ಳುವುದಾಗಿ ಮಾಜೀ ಸಿಎಂ ಸಿದ್ದರಾಮಯ್ಯ  ಸವಾಲು ಹಾಕಿದರು.‌

ವಿಜಯಪುರ: ನಾನಾಗಲೀ ಅಥವಾ ಎಂ.ಬಿ.ಪಾಟೀಲ್ ಆಗಲೀ ಎಲ್​ಒಸಿ ಬಿಡುಗಡೆ ಮಾಡಲು ಐದು ಪೈಸೆ ಲಂಚ ತೆಗೆದುಕೊಂಡಿದ್ದರೆ ರಾಜಕೀಯ ನಿವೃತ್ತಿ ಪಡೆದು, ಸನ್ಯಾಸತ್ವ ತೆಗೆದುಕೊಳ್ಳುವುದಾಗಿ ಮಾಜೀ ಸಿಎಂ ಸಿದ್ದರಾಮಯ್ಯ  ಸವಾಲು ಹಾಕಿದರು.‌

ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯನ್ನು ಉದ್ಘಾಟಿಸಿ ಮಾತನಾಡಿದ ಅವರು,  ರಾಜ್ಯ ಬಿಜೆಪಿಯ 40 ಪರ್ಸೆಂಟ್ ಸರ್ಕಾರ ಲೂಟಿ ಹೊಡೆಯುತ್ತಿದೆ. ಈ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಪ್ರಧಾನಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.

ಸ್ವಚ್ಛ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರಿಂದ ಒಂದು ಪೈಸೆ ಕೂಡ ವಸೂಲಿ ಮಾಡದೆ ಅವರ ಎಲ್ಲಾ ಬಿಲ್‌ಗಳನ್ನು ತೆರವುಗೊಳಿಸುತ್ತಿದ್ದೆವು. ಆದರೆ ಇಂದು ಬೊಮ್ಮಾಯಿ ಸರಕಾರ ಬಿಲ್‌ ಕ್ಲಿಯರ್‌ ಮಾಡಲು ಶೇ.40ರಷ್ಟು ಕಮಿಷನ್‌ ವಸೂಲಿ ಮಾಡುತ್ತಿದೆ ಎಂದು ಗುತ್ತಿಗೆದಾರರೇ ಆರೋಪ ಮಾಡುತ್ತಿದ್ದಾರೆ,’’ ಎಂದರು.

ಗುತ್ತಿಗೆದಾರರ ಸಂಘವು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದರೂ, ಇಂತಹ ಗಂಭೀರ ವಿಷಯದ ಬಗ್ಗೆ ಬೊಮ್ಮಾಯಿ ಸರ್ಕಾರದಿಂದ ಸ್ಪಷ್ಟೀಕರಣವನ್ನೂ ಕೇಳಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ನೀರಾವರಿ ಯೋಜನೆಗಳ ಬಗ್ಗೆ ಪ್ರಸ್ತಾಪಿಸಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಐದು ವರ್ಷಗಳಲ್ಲಿ 2 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಡುವುದಾಗಿ ಭರವಸೆ ನೀಡಿದರು.

2013ರಲ್ಲಿ ಅಧಿಕಾರಕ್ಕೆ ಬರುವ ಮುನ್ನ 2015ರಲ್ಲಿ ರೂ. ನೀರಾವರಿ ಯೋಜನೆಗಳಿಗೆ ಐದು ವರ್ಷಗಳಲ್ಲಿ 50,000 ಕೋಟಿ ರೂ ನೀಡಿದ್ದೇವು. ಆದರೆ ವಾಸ್ತವದಲ್ಲಿ ನಾವು ಐದು ವರ್ಷಗಳಲ್ಲಿ ಸುಮಾರು 56,000 ಕೋಟಿ ರೂ. ಖರ್ಚು ಮಾಡಿದ್ದೇವು. ಇನ್ನೊಂದೆಡೆ ನೀರಾವರಿಗೆ ಸುಮಾರು 1.5 ಲಕ್ಷ ಕೋಟಿ ಖರ್ಚು ಮಾಡುವುದಾಗಿ ಭರವಸೆ ನೀಡಿದ ಬಿಜೆಪಿ 50 ಸಾವಿರ ಕೋಟಿ ರೂ.  ಮಾತ್ರ ವ್ಯಯಿಸಿದೆ, ಇದೇ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ವ್ಯತ್ಯಾಸ ಎಂದರು.

ಜಾನುವಾರುಗಳಿಗೆ  ಚರ್ಮಗಂಟು ರೋಗ ಕಾಣಿಸಿಕೊಂಡಿರುವುದರಿಂದ ಹೈನುಗಾರಿಕೆಗೆ ಭಾರೀ ಹೊಡೆತ ಬಿದ್ದಿದೆ ಎಂದ ಸಿದ್ದರಾಮಯ್ಯ, ವೈರಸ್‌ನಿಂದಾಗಿ ಹಾಲಿನ ಉತ್ಪಾದನೆ ದಿನಕ್ಕೆ 18 ಲಕ್ಷ ಲೀಟರ್‌ಗಳಷ್ಟು ಕಡಿಮೆಯಾಗಿದೆ ಎಂದು ಹೇಳಿದರು.  ವೈರಸ್‌ನಿಂದ ಜಾನುವಾರುಗಳು ಸಾವನ್ನಪ್ಪುವುದರಿಂದ ರಾಜ್ಯ ಸರ್ಕಾರವು ಪ್ರತಿದಿನ 6.66 ಕೋಟಿ ರೂಪಾಯಿ ನಷ್ಟವನ್ನು ಎದುರಿಸುತ್ತಿದೆ, ಆದರೆ ಸರ್ಕಾರವು ರೈತರಿಗೆ ಯಾವುದೇ ಆರ್ಥಿಕ ಸಹಾಯವನ್ನು ನೀಡಿಲ್ಲ ಅಥವಾ ವೈರಸ್ ಹರಡುವುದನ್ನು ತಡೆಯಲು ಯಾವುದೇ ಲಸಿಕೆ ಕಾರ್ಯಕ್ರಮವನ್ನು ಪ್ರಾರಂಭಿಸಿಲ್ಲ ಎಂದು ಅವರು ಹೇಳಿದರು.

200 ಯೂನಿಟ್‌ ಉಚಿತ ವಿದ್ಯುತ್‌, 2000 ರೂ.ಗಳಂತಹ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಘೋಷಣೆ ಮಾಡುತ್ತಾ ಬಂದಿರುವ ಪಕ್ಷವು ಅಧಿಕಾರಕ್ಕೆ ಬಂದರೆ ಕುಟುಂಬದ ಮಹಿಳಾ ಮುಖ್ಯಸ್ಥರಿಗೆ 2,000 ರೂ., ನೀಡಲಿದೆ.  ಅಧಿಕಾರಕ್ಕೆ ಬಂದರೆ ಈಗಿನ ಐದು ಕೆಜಿಯಿಂದ 10 ಕೆಜಿ ಅಕ್ಕಿಯನ್ನು ಪಿಡಿಎಸ್ ಅಡಿಯಲ್ಲಿ ವಿತರಿಸುವುದಾಗಿ ಘೋಷಿಸಿದರು.

ಈ ಸಂದರ್ಭದಲ್ಲಿ ಜಲಸಂಪನ್ಮೂಲ ಸಚಿವರಾಗಿ ಎಂ ಬಿ ಪಾಟೀಲ್ ಅವರ ಕಾರ್ಯವೈಖರಿಯನ್ನು ಶ್ಲಾಘಿಸಿದ ಅವರು, ಅವರು ತಮ್ಮ ಸರ್ಕಾರದ ಅತ್ಯುತ್ತಮ ಮಂತ್ರಿಗಳಲ್ಲಿ ಒಬ್ಬರು ಎಂದು ಹೇಳಿದರು. ನಿಮಗೆ ಇದೇ ರೀತಿಯ ಮಂತ್ರಿಗಳು ಮತ್ತು ಉತ್ತಮ ಆಡಳಿತ ಬೇಕಾದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಭ್ರಷ್ಟ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಿರಿ ಎಂದು ಅವರು ಹೇಳಿದರು. ಇದಕ್ಕೂ ಮುನ್ನ ಸಿದ್ದರಾಮಯ್ಯ ಹಾಗೂ ಇತರ ನಾಯಕರಿಗೆ ವಿಶೇಷವಾಗಿ ಒಣದ್ರಾಕ್ಷಿ ಹಾರ ಹಾಕಿ ಸನ್ಮಾನಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT