ಬಿಎಸ್ ಯಡಿಯೂರಪ್ಪ 
ರಾಜಕೀಯ

ಬಿಜೆಪಿಯನ್ನು ಬೆಂಬಲಿಸಿ, ಕರ್ನಾಟಕದಲ್ಲಿ ಪಕ್ಷವನ್ನು ಗೆಲ್ಲಿಸಿ: ವೀರಶೈವ-ಲಿಂಗಾಯತರಿಗೆ ಯಡಿಯೂರಪ್ಪ ಮನವಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಮ್ಮ ಬೆಂಬಲವನ್ನು ಮುಂದುವರಿಸಲು ಮತ್ತು ರಾಜ್ಯದಲ್ಲಿ ಅದರ ಗೆಲುವನ್ನು ಖಚಿತಪಡಿಸಿಕೊಳ್ಳಲು ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರದಂದು ತಾವು ಸೇರಿರುವ ಪ್ರಬಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಮನವಿ ಮಾಡಿದರು.

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ತಮ್ಮ ಬೆಂಬಲವನ್ನು ಮುಂದುವರಿಸಲು ಮತ್ತು ರಾಜ್ಯದಲ್ಲಿ ಅದರ ಗೆಲುವನ್ನು ಖಚಿತಪಡಿಸಿಕೊಳ್ಳಲು ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಶನಿವಾರದಂದು ತಾವು ಸೇರಿರುವ ಪ್ರಬಲ ವೀರಶೈವ-ಲಿಂಗಾಯತ ಸಮುದಾಯಕ್ಕೆ ಮನವಿ ಮಾಡಿದರು.

79 ವರ್ಷದ ಲಿಂಗಾಯತ ಪ್ರಬಲ ವ್ಯಕ್ತಿ ಚುನಾವಣಾ ರಾಜಕೀಯದಿಂದ ನಿವೃತ್ತಿಯ ನಂತರವೂ ಸಮುದಾಯವು ಬಿಜೆಪಿಯನ್ನು ಬೆಂಬಲಿಸುತ್ತದೆಯೇ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಯಡಿಯೂರಪ್ಪ ಅವರು ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ, ವಿಧಾನಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಮತ ಯಾಚಿಸಲು ರಾಜ್ಯದಾದ್ಯಂತ ಪ್ರವಾಸ ಮಾಡುವುದಾಗಿ ಹೇಳಿದರು.

ವೀರಶೈವ-ಲಿಂಗಾಯತ ಸಮುದಾಯಕ್ಕೆ ನಾನು ಕೈ ಜೋಡಿಸಿ ಪ್ರಾರ್ಥಿಸುತ್ತೇನೆ, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನನಗೆ ಇಲ್ಲಿಯವರೆಗೆ ಎಲ್ಲಾ ರೀತಿಯ ಅವಕಾಶಗಳನ್ನು ನೀಡಿದ್ದಾರೆ. ಫೆಬ್ರುವರಿ 27 ರಂದು ನನಗೆ 80 ವರ್ಷ ತುಂಬುವ ಕಾರಣ ನಾನು ಸ್ವಯಂಪ್ರೇರಿತವಾಗಿ (ಚುನಾವಣಾ ರಾಜಕೀಯದಿಂದ) ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹೇಳಿದರು.

ಹೀಗಾಗಿ ವೀರಶೈವ-ಲಿಂಗಾಯತ ಬಂಧುಗಳು ಯಾವುದೇ ತಪ್ಪು ತಿಳುವಳಿಕೆಯಿಲ್ಲದೆ ಹಿಂದಿನಂತೆ ನನಗೆ ಬೆಂಬಲ ನೀಡಿ ಬಿಜೆಪಿಯನ್ನು ಗೆಲ್ಲಿಸುವಂತೆ ಮಾಡಬೇಕು, ಇದು ನನ್ನ ಮನವಿ ಎಂದು ಯಡಿಯೂರಪ್ಪ ಹೇಳಿದರು.

ಯಡಿಯೂರಪ್ಪ ಅವರನ್ನು ಬಿಜೆಪಿ ಕಡೆಗಣಿಸುತ್ತಿದೆ ಎನ್ನುವ ಮೂಲಕ ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್, ಆ ಮೂಲಕ ಸಂಖ್ಯಾಬಲ ಮತ್ತು ರಾಜಕೀಯವಾಗಿ ಪ್ರಬಲ ಸಮುದಾಯದ ಮತಗಳನ್ನು ತಮ್ಮ ಪರವಾಗಿ ಸೆಳೆಯಲು ಪ್ರಯತ್ನಿಸುತ್ತಿರುವ ನಡುವೆಯೇ ಈ ಹೇಳಿಕೆ ಬಂದಿದೆ.

ವೀರಶೈವ-ಲಿಂಗಾಯತರು ರಾಜ್ಯದ ಜನಸಂಖ್ಯೆಯ ಶೇ 17 ರಷ್ಟಿದ್ದಾರೆ ಎಂದು ಅಂದಾಜಿಸಲಾಗಿದೆ ಮತ್ತು ಅವರು ಬಿಜೆಪಿಯ ಬಲಿಷ್ಠ ವೋಟ್ ಬ್ಯಾಂಕ್ ಆಗಿದ್ದಾರೆ. ಯಡಿಯೂರಪ್ಪ ಅವರು ಸಮುದಾಯದ ಪ್ರಬಲ ನಾಯಕನೆಂದೇ ಪರಿಗಣಿಸಲಾಗಿದೆ ಮತ್ತು ಸಮುದಾಯದ ಮೇಲೆ ಹಿಡಿತ ಹೊಂದಿದ್ದಾರೆ.

ನಾಲ್ಕು ಬಾರಿ ಮುಖ್ಯಮಂತ್ರಿ ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಯಡಿಯೂರಪ್ಪ ಅವರು ಶುಕ್ರವಾರ ಕರ್ನಾಟಕ ವಿಧಾನಸಭೆಯಲ್ಲಿ ತಮ್ಮ ವಿದಾಯ ಭಾಷಣ ಮಾಡಿದ್ದರು. 

ಈಗ ಬಿಜೆಪಿಯ ಉನ್ನತ ಸಂಸದೀಯ ಮಂಡಳಿಯ ಸದಸ್ಯರಾಗಿರುವ ಅವರು, ವಿಧಾನಸಭೆಯಿಂದ ಹೊರಗೆ ಉಳಿದುಕೊಂಡು ರಾಜ್ಯದಾದ್ಯಂತ ಪ್ರವಾಸ ಮಾಡುವ ಮೂಲಕ ಪಕ್ಷವನ್ನು ಕಟ್ಟಲು ಮತ್ತು ಬಲಪಡಿಸಲು ಶ್ರಮಿಸುವುದನ್ನು ಮುಂದುವರಿಸುವುದಾಗಿ ಇಂದು ಹೇಳಿದರು.

ರಾಜ್ಯದ ಅಭಿವೃದ್ಧಿಗೆ ಸಾಧ್ಯವಿರುವ ಎಲ್ಲವನ್ನೂ ಮಾಡಿದ್ದೇನೆ ಎಂಬ ತೃಪ್ತಿ ಮತ್ತು ಸಮಾಧಾನ ನನಗಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಲು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದು ಈಗಾಗಲೇ ಹೇಳಿರುವಂತೆ ಸುಮಾರು ಐದಾರು ದಿನಗಳಲ್ಲಿ ಪ್ರವಾಸ ಕಾರ್ಯಕ್ರಮ ಆರಂಭವಾಗಲಿದೆ. ಮನೆಯಲ್ಲಿ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ, ಕರ್ನಾಟಕದಲ್ಲಿ ನೂರಕ್ಕೆ ನೂರು ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದರು.

ಮೋದಿ ಮತ್ತು ಅಮಿತ್ ಶಾ ಅವರ ನಾಯಕತ್ವವು ನಮಗೆ ಆನೆಯ ಬಲವನ್ನು ನೀಡಿದೆ. ಆದರೆ, ಇತರ ಪಕ್ಷಗಳಿಗೆ ಪ್ರಬಲ ನಾಯಕತ್ವದ ಕೊರತೆಯಿದೆ. ಆದ್ದರಿಂದ ಬಿಜೆಪಿಗೆ ಉತ್ತಮ ಫಲಿತಾಂಶಗಳು ಖಚಿತ. ಫೆಬ್ರುವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣವನ್ನು ಮೋದಿ ಉದ್ಘಾಟಿಸಲಿದ್ದು, ನನ್ನ ಬಹುಕಾಲದ ಕನಸು ನನಸಾಗುತ್ತಿದೆ ಎಂದು ಯಡಿಯೂರಪ್ಪ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT