ಕಾಂಗ್ರೆಸ್ ಟ್ವೀಟ್ 
ರಾಜಕೀಯ

ಭ್ರಷ್ಟಾಚಾರದಲ್ಲಿ ಕರ್ನಾಟಕವನ್ನು ನಂ.1 ಮಾಡಿದ್ದಕ್ಕೆ ಧನ್ಯವಾದಗಳು: 'ThankYouModi' ಹ್ಯಾಷ್ ಟ್ಯಾಗ್ ಬಳಸಿ ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡುವ ಸಲುವಾಗಿ ರಾಜ್ಯಕ್ಕೆ ಭೇಟಿ ನೀಡಿರುವ ನಡುವಲ್ಲೇ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡುವ ಸಲುವಾಗಿ ರಾಜ್ಯಕ್ಕೆ ಭೇಟಿ ನೀಡಿರುವ ನಡುವಲ್ಲೇ ಮೋದಿ ವಿರುದ್ಧ ರಾಜ್ಯ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ 'ThankYouModi' ಎಂಬ ಹ್ಯಾಷ್ ಟ್ಯಾಗ್ ಬಳಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.

ಶೇ.40 ಕಮಿಷನ್ ದೂರುಗಳಿಗೆ ಪ್ರಧಾನಿಯಿಂದ ಕನಿಷ್ಠ ಸ್ಪಂದನೆಯೂ ಇಲ್ಲ, ಕ್ರಮವೂ ಇಲ್ಲ. ಹಿಂದೆ ಪ್ರಧಾನಿ ಭೇಟಿಗಾಗಿ ಹಾಕಿದ್ದ ರಸ್ತೆ ಕಿತ್ತು ಬಂದಿದ್ದಕ್ಕೆ ವರದಿ ಕೇಳಿದ್ದರು, ಆ ಲೂಟಿಯ ಬಗ್ಗೆ ತನಿಖೆಯೇ ಇಲ್ಲ. ಸಂತೋಷ್ ಪಾಟೀಲ್ ಪತ್ರಕ್ಕೆ ಪ್ರಧಾನಿಯ ಉತ್ತರವಿಲ್ಲ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ1 ಮಾಡಿದ್ದಕ್ಕೆ ಧನ್ಯವಾದಗಳು ಮೋದಿ ಎಂದು ಹೇಳಿದೆ.

ಮೋದಿ ಸರ್ವಶಕ್ತ, ಸರ್ವಾಂತರ್ಯಾಮಿ ಎನ್ನುವ ಬಿಜೆಪಿ ಸರ್ವಶಕ್ತ ಮೋದಿಗೆ ಬೆಲೆ ಏರಿಕೆ ನಿಯಂತ್ರಿಸಲು ಸಾಧ್ಯವಾಗಿಲ್ಲವೇಕೆ ಎಂದರೆ ಪಾಕಿಸ್ತಾನದ ಕಡೆ ಕೈ ತೋರಿಸುತ್ತಾರೆ. ಗ್ಯಾಸ್ ಬೆಲೆಯನ್ನು ರೂ.1000 ದಾಟಿಸಿ, ಪೆಟ್ರೋಲ್ ಬೆಲೆಯನ್ನು ರೂ.100 ದಾಟಿಸಿ, ಜನರ ಬದುಕಿನ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿರುವ ಮೋದಿಗೆ ಧನ್ಯವಾದಗಳು.

ಕರ್ನಾಟಕದಲ್ಲಿ ಭ್ರಷ್ಟಾಚಾರವು ಡಬಲ್ ವೇಗದಲ್ಲಿ ಮುನ್ನುಗ್ಗುತ್ತಿದೆ. ನರೇಂದ್ರ ಮೋದಿ  ಅವರೇ, ಭ್ರಷ್ಟಾಚಾರಕ್ಕೆ ಯಾವುದೇ ತಡೆಯಿಲ್ಲದೆ, ಯಾವುದೇ ಅಂಜಿಕೆ, ಅಳುಕಿಲ್ಲದೆ ಶೇ.40 ಕಮಿಷನ್ ಸರ್ಕಾರ ನಡೆಸಿದ್ದಕ್ಕೆ ತಮಗೆ ಧನ್ಯವಾದಗಳು. "ಮೋದಿ ಹೈ ತೊ ಮುಮ್ಕಿನ್ ಹೈ" ಎನ್ನುವಂತೆ ಇದು ಸಾಧ್ಯವಾಗಿದ್ದು ನಿಮ್ಮಿಂದಲೇ ಅಲ್ಲವೇ ಎಂದು ಟೀಕಿಸಿದೆ.

ಪಿಎಸ್‌ಐನಿಂದ ಹಿಡಿದು ಪೌರ ಕಾರ್ಮಿಕರ ನೇಮಕಾತಿಯವರೆಗೂ ಪ್ರತಿ ಹುದ್ದೆಗಳನ್ನೂ ರೇಟ್ ಕಾರ್ಡ್ ಹಾಕಿ ಮಾರಾಟ ಮಾಡುತ್ತಿರುವ ಬಿಜೆಪಿ ಸರ್ಕಾರದ ಸಾಧನೆ ಅಮೋಘವಾದುದು! ಅರ್ಹತೆಯ ಆಧಾರದಲ್ಲಿ ಸಿಗುತ್ತಿದ್ದ ಉದ್ಯೋಗಗಳನ್ನ ಸುಲಭವಾಗಿ ಹಣ ಕೊಟ್ಟು ಕೊಳ್ಳುವಂತ ವ್ಯವಸ್ಥೆ ನಿರ್ಮಾಣವಾಗಿದ್ದರಲ್ಲಿ ಮೋದಿಯವರ ಪಾತ್ರ ದೊಡ್ಡದಿದೆ!.

ಉಡುವ ಬಟ್ಟೆಯಿಂದ ತಿನ್ನುವ ಅನ್ನದವರೆಗೂ GST ತೆರಿಗೆ ಹಾಕಿ ಜನಸಾಮಾನ್ಯರ ಬದುಕನ್ನು ದುರ್ಭರಗೊಳಿಸಿದ ಮೋದಿಯವರಿಗೆ ಅನಂತಾನಂತ ಧನ್ಯವಾದಗಳು! ಇಂತಹ ಕಠೋರ, ಅಮಾನವೀಯ ನಿರ್ಧಾರಗಳನ್ನು ತೆಗೆದುಕೊಳ್ಳಲು ಮೋದಿಯಿಂದ ಮಾತ್ರ ಸಾಧ್ಯ. ದರೋಡೆಗೆ ಜಿಎಸ್'ಟಿ ಎಂದು ಹೆಸರಿಟ್ಟು ಕಾನೂನುಬದ್ಧಗೊಳಿಸಿದ್ದಕ್ಕೆ ಧನ್ಯವಾದಗಳು ಮೋದಿ.

ಕರ್ನಾಟಕವು ಪ್ರತಿ ವರ್ಷ ನಿರಂತರ ಪ್ರವಾಹ ಎದುರಿಸಿದಾಗ, ಜನರ ಬದುಕು ಮುಳುಗಿದಾಗ, ಅಪಾರ ಆಸ್ತಿಪಾಸ್ತಿ ಹಾನಿಯಾದಾಗ ಕರ್ನಾಟಕದತ್ತ ತಿರುಗಿಯೂ ನೋಡದ ಮೋದಿ ಅವರೇ, ತಾವು ಕರ್ನಾಟಕಕ್ಕೆ ನಯಾಪೈಸೆ ನೆರವು ನೀಡದೆ ಈಗ ಚುನಾವಣೆ ಸಂದರ್ಭದಲ್ಲಿ ಕರ್ನಾಟಕ ಟೂರಿಸ್ಟ್ ಆಗಿದ್ದೀರಿ. ತಮ್ಮ ಈ ದ್ರೋಹಕ್ಕೆ ಧನ್ಯವಾದಗಳು.

ಬೆಂಗಳೂರು ಗಾರ್ಡನ್ ಸಿಟಿ, ಐಟಿ ಸಿಟಿ ಎಂಬ ಖ್ಯಾತಿ ಗಳಿಸಿತ್ತು. ಆದರೆ ಈಗ ರಸ್ತೆಗುಂಡಿಗಳಿಗೆ ದಿನಕ್ಕೊಂದು ಜೀವ ಬಲಿಯಾಗುತ್ತಿವೆ, ಇಂದು ಹಾಕಿದ ಡಾಂಬಾರು ನಾಳೆ ಕೀಳುತ್ತದೆ. ವಿಲೇವಾರಿಯಾಗದ ಕಸದಿಂದ ಬೆಂಗಳೂರು ಗೊಬ್ಬರದ ಗುಂಡಿಯಾಗಿದೆ. ಬೆಂಗಳೂರಿಗೆ ಇಂತಹ ಅಪಖ್ಯಾತಿ ಅಂಟಿಸಿದ ಕೀರ್ತಿ ಮೋದಿಯವರಿಗೆ ಸಲ್ಲಬೇಕು ಎಂದು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT