ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ನಮ್ಮಪ್ಪನ ಜೀವ ಈ ಮಣ್ಣಿಗೆ ಹೋಗೋದರೊಳಗೆ...? ದೇವೇಗೌಡರ ಕೊನೆ ಆಸೆ ಬಿಚ್ಚಿಟ್ಟು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಕಣ್ಣೀರು!

ಮುಂಬರುವ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ ಭಾವುಕರಾದರು.

ರಾಮನಗರ: ಮುಂಬರುವ ವಿಧಾನಸಭಾ ಚುನಾವಣೆ ಕೊನೆಯ ಚುನಾವಣೆ ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯಿಸಿ ಭಾವುಕರಾದರು.

ಚನ್ನಪಟ್ಟಣದಲ್ಲಿ ಮಾತಾಡಿದ ಹೆಚ್.ಡಿ. ಕುಮಾರಸ್ವಾಮಿ.. ನಾನು ರಾಜಕೀಯ ವಿದಾಯ ಹೇಳ್ತಿಲ್ಲ. 2028ರ ವಿಧಾನಸಭೆಗೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನು ನಿಲ್ಲಿಸ್ತೀನಿ. ಆಗ ಬೇರೆ ಕ್ಷೇತ್ರದಲ್ಲಿ ನಿಲ್ಲಬೇಕಾಗಬಹುದು. ನಾನು ಯಾವುದೇ ಕಾರಣಕ್ಕೂ ರಾಜಕೀಯ ಬಿಡಲ್ಲ. 2028ಕ್ಕೆ ಚನ್ನಪಟ್ಟಣದಿಂದ ಕಾರ್ಯಕರ್ತರನ್ನ ನಿಲ್ಲಿಸಿ ಗೆಲ್ಲಿಸುತ್ತೇನೆ ಎಂದರು.

ನಾನು ನಮ್ಮ ಕುಟುಂಬ ಜನರನ್ನೇ ನಂಬಿ ಬಂದಿದ್ದೇವೆ. ನಮ್ಮ ತಂದೆ ಕಾಲದಿಂದಲೂ ಅಷ್ಟೇ. ದೇವೇಗೌಡರನ್ನು ಇಲ್ಲಿಗೆ ಕರೆಸಿ ಸನ್ಮಾನ ಮಾಡಬೇಕು ಅನ್ನೋ ಆಸೆ ನಿಮ್ಮದು. ಆದರೆ ಇಂದು ಅವರು ಇಲ್ಲಿಗೆ ಬರುವ ಪರಿಸ್ಥಿತಿಯಲ್ಲಿ ಇಲ್ಲ. ಅವರು ಮಣ್ಣಿಗೆ ಹೋಗೋದರೊಳಗೆ ಜೆಡಿಎಸ್ ಪಕ್ಷವನ್ನು ಸ್ವತಂತ್ರ್ಯವಾಗಿ ಅಧಿಕಾರಕ್ಕೆ ತರಬೇಕು ಎಂಬ ಆಸೆ ದೇವೇಗೌಡರಿಗಿದೆ ಎಂದು ಹೇಳುತ್ತಾ ಕುಮಾರಸ್ವಾಮಿ ಭಾವುಕರಾದರು.

ನಮ್ಮ ಪಂಚರತ್ನ ಯಾತ್ರೆ ಬಗ್ಗೆ, ಅಲ್ಲಿ ಸೇರುವ ಜನರ ಬಗ್ಗೆ ಮಾಧ್ಯಮಗಳು ವರದಿ ಮಾಡುತ್ತಿಲ್ಲ, ಬದಲಾಗಿ ದಿನದಲ್ಲಿ ಸುಮಾರು 1ಗಂಟೆಗೂ ಮೇಲೆ ಹಾಸನ ಟಿಕೆಟ್ ಸುದ್ಧಿಯ ಬಗ್ಗೆ ಪ್ರಸಾರ ಮಾಡುತ್ತಾರೆ, ಟಿವಿಯಲ್ಲಿ ಜ್ಯೋತಿಷ್ಯ ಕಾರ್ಯಕ್ರಮವನ್ನು ನಿಲ್ಲಿಸಿ ಅದರ  ಬದಲಿಗೆ, ಹಾಸನ, ಭವಾನಿ ರೇವಣ್ಣ, ಕುಮಾರಸ್ವಾಮಿ ಮತ್ತು ಎಚ್.ಡಿ ದೇವೇಗೌಡರ ವಿಷಯದ ಬಗ್ಗೆ ಸುದ್ದಿ ಹಾಕುತ್ತಿದ್ದಾರೆ. ನಮ್ಮ ಪಂಚರತ್ನ ಕಾರ್ಯಕ್ರಮದ ಬಗ್ಗೆ ಸುದ್ದಿ ಪ್ರಸಾರ ಮಾಡುತ್ತಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT