ವೀರಪ್ಪ ಮೊಯ್ಲಿ 
ರಾಜಕೀಯ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ನಾನಾಗಲಿ, ನನ್ನ ಮಗನಾಗಲಿ ಸ್ಪರ್ಧಿಸುವುದಿಲ್ಲ: ವೀರಪ್ಪ ಮೊಯ್ಲಿ

ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುವುದಿಲ್ಲ. ನನ್ನ ಮಗ ಹರ್ಷ ಮೊಯಿಲಿಯೂ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಎಂ. ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದರು.

ಮಂಗಳೂರು: ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನೂ ಸ್ಪರ್ಧಿಸುವುದಿಲ್ಲ. ನನ್ನ ಮಗ ಹರ್ಷ ಮೊಯಿಲಿಯೂ ಸ್ಪರ್ಧಿಸುವುದಿಲ್ಲ ಎಂದು ಕಾಂಗ್ರೆಸ್‌ ಮುಖಂಡ ಎಂ. ವೀರಪ್ಪ ಮೊಯಿಲಿ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಕಾರ್ಕಳ ಕ್ಷೇತ್ರದಲ್ಲಿ ಒಳ್ಳೆಯ ಕಾರ್ಯಕರ್ತರಿಗೆ ಪಕ್ಷ ಟಿಕೆಟ್‌ ನೀಡಲಿದೆ. ಈ ಚುನಾವಣೆಯಲ್ಲಿ ಹರ್ಷ ಮೊಯಿಲಿ ಕಾರ್ಕಳದಲ್ಲಿ ಮಾತ್ರವಲ್ಲ, ಬೇರೆ ಕ್ಷೇತ್ರದಿಂದಲೂ ಸ್ಪರ್ಧಿಸುವುದಿಲ್ಲ ಎಂದರು.

ಮುಂಬರುವ ವಿಧಾನಸಭೆ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಏನು ಕಾರ್ಯತಂತ್ರ ರೂಪಿಸಬೇಕು ಎಂಬ ಬಗ್ಗೆ ಹೈಕಮಾಂಡ್‌ಗೆ ವರದಿ ಸಲ್ಲಿಸಿದ್ದೇನೆ. ಕೆಲವೊಂದು ವಿಚಾರದಲ್ಲಿ ಎಚ್ಚರವಹಿಸಿದ್ದೇ ಆದರೆ, ಹಿಮಾಚಲ ಪ್ರದೇಶದಲ್ಲಿ ಗೆಲುವು ಸಾಧಿಸಿ ದಂತೆ ರಾಜ್ಯದಲ್ಲೂ ಗೆಲುವು ಸಾಧಿಸಬಹುದು. ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದೇಶವನ್ನು ಗಲಭೆಯ ಕೂಪಕ್ಕೆ ತಳ್ಳಲು ಎನ್‌ಡಿಎ ಪ್ರಯತ್ನಿಸುತ್ತಿದೆ. ಜನರ ಮನಸುಗಳನ್ನು ಗೊಂದಲಗೊಳಿಸಿ ಕದಡಿದ ನೀರಿನಲ್ಲಿ ಮೀನು ಹಿಡಿಯುವ ಪ್ರಯತ್ನ ಮಾಡುತ್ತಿದೆ. ಹಾಗಾಗಿಯೇ ದೇಶದಲ್ಲಿ ಕೊಲೆ, ಮತೀಯ ಗಲಭೆಗಳು ಹೆಚ್ಚುತ್ತಿವೆ. ಅವರ ಪ್ರಚೋದನೆಗೆ ನಮ್ಮ ನಾಯಕರು ಪ್ರತಿಕ್ರಿಯಿಸಬಾರದು. ರಾಷ್ಟ್ರೀಯ ಸಂವಾದದಿಂದ ವಿಚಲಿತ‌ ಆಗದಂತೆ ಎಚ್ಚರವಹಿಸಬೇಕು ಎಂದರು.

ಕಾಂಗ್ರೆಸ್‌ಗೆ ರಾಷ್ಟ್ರೀಯ ಹಿತ ಚಿಂತನೆ ಮುಖ್ಯ. ನಾವು ಜಾತಿ, ಮತ ಹಾಗೂ ಪ್ರಾದೇಶಿಕತೆಯನ್ನು ಆಧರಿಸಿ ಆಲೋಚಿ ಸಲು ಬರುವುದಿಲ್ಲ. ಜನರ ಆಲೋಚನೆ ಗಳನ್ನೂ ಸರಿಯಾದ ದಿಕ್ಕಿನಲ್ಲಿ ಕೊಂಡೊ ಯ್ಯುವ ಮೂಲಕ ಸಾಮಾಜಿಕ ಸುಸ್ಥಿರತೆ ಕಾಪಾಡುವ ಹೊಣೆ ನಮ್ಮ ಮೇಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಥೂ ನಿಮ್ ಯೋಗ್ಯತೆಗೆ ಬೆಂಕಿ ಹಾಕಾ.., ಲೇ ಅರೆಸ್ಸೆಸ್ಸು.. ನಿಂಗೆ ಮಾನ ಮರ್ಯಾದೆ ಇದ್ಯಾ..': ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ; Video

ಚುನಾವಣೆಗೂ ಮುನ್ನ SIRಗೆ ಆತುರ ಏಕೆ?: ಸುಪ್ರೀಂ ಕೋರ್ಟ್‌ನಲ್ಲಿ ಖುದ್ದು ವಾದ ಮಂಡಿಸಿದ ಮಮತಾ; ಹೊಸ ದಾಖಲೆ

ಹುಡುಗರು ಒಪ್ತಿಲ್ಲ.. ಮದುವೆ ವಿಳಂಬ, ತಾಯಿ ಅನಾರೋಗ್ಯ: ಹುಸೇನ್ ಸಾಗರ್ ಗೆ ಹಾರಿ ಮಹಿಳಾ ಟೆಕ್ಕಿ ಆತ್ಮಹತ್ಯೆ!

ಬೆಂಗಳೂರಿನ ವಸತಿ ಪ್ರದೇಶದಲ್ಲಿ ಭಾರೀ ಸ್ಫೋಟಕ ಪತ್ತೆ; ಬಾಂಬ್ ನಿಷ್ಕ್ರಿಯ ದಳದಿಂದ ಪರಿಶೀಲನೆ!

ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕೊಲೆ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

SCROLL FOR NEXT