ಸಾಂದರ್ಭಿಕ ಚಿತ್ರ 
ರಾಜಕೀಯ

ಧಾವಂತದಲ್ಲಿ ನಂದಿನಿ-ಅಮುಲ್‌ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳು ಹೇಳಿ, ಉಳಿದಿರುವ ಅಲ್ಪ ಸ್ವಲ್ಪ ಮರ್ಯಾದೆ ತೆಗೆದುಕೊಳ್ಳಬೇಡಿ!

ಧಾವಂತದಲ್ಲಿ ನಂದಿನಿ - ಅಮುಲ್‌ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ.

ಬೆಂಗಳೂರು: ಧಾವಂತದಲ್ಲಿ ನಂದಿನಿ - ಅಮುಲ್‌ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ ಎಂದು ಬಿಜೆಪಿ ಲೇವಡಿ ಮಾಡಿದೆ.

ಟೂಲ್‌ಕಿಟ್‌ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಬಿಜೆಪಿ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡಲು ಧಾರಾಳವಾಗಿ ಪ್ರಯತ್ನಿಸಬಹುದು’ ಎಂದು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದೆ.

‘ಈಗಾಗಲೇ ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆಯ 24ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವನ್ನು ಭದ್ರಪಡಿಸಿಕೊಳ್ಳುತ್ತಿರುವ ಬಿಜೆಪಿಯನ್ನು ತಡೆಯಬೇಕಾದ್ದು ವಿರೋಧ ಪಕ್ಷಗಳು ಅಗತ್ಯವಾಗಿ ಮಾಡಬೇಕಾದ ಕೆಲಸವಾಗಿದೆ. ಆದರೆ, ಇದು ಅವರ ವಿಫಲಯತ್ನವಾಗುವುದಂತೂ ಕಟ್ಟಿಟ್ಟ ಬುತ್ತಿ’ ಎಂದು ಬಿಜೆಪಿ ಕಿಚಾಯಿಸಿದೆ.

‘ಕಾಂಗ್ರೆಸ್‌ ಮತ್ತು ಜೆಡಿಎಸ್‌ನವರ ಟೂಲ್‌ಕಿಟ್‌ಗಳು ಸಹಜವಾಗಿ ಪ್ರಾದೇಶಿಕತೆ, ಭಾಷೆ, ಜಾತಿ, ಧರ್ಮಗಳನ್ನು ಅವಲಂಬಿಸಿದ್ದು, ಇಂಥದ್ದೇ ಯಾವುದಾದರೂ ಸುಳ್ಳು ಸುದ್ದಿಗಳನ್ನು ಹರಿಬಿಡುವುದನ್ನೇ ನಾವು ಎದುರು ನೋಡುತ್ತಿದ್ದೇವೆ. ಆದರೆ, ಅವೆಲ್ಲಕ್ಕೂ ನಮ್ಮ ಒಂದೇ ಉತ್ತರವಾಗಿ ನಾವು ಮಾತಾಡಲ್ಲ, ರಾಜ್ಯದ ಅಭಿವೃದ್ಧಿ ಮಾತಾಡುತ್ತದೆ’ ಎಂದು ಬಿಜೆಪಿ ಗುಡುಗಿದೆ.

‘ಸ್ಮಾರ್ಟ್‌ ಸಿಟಿ ಯೋಜನೆಯಡಿ ದಾವಣಗೆರೆ, ತುಮಕೂರಿನಲ್ಲಿ ಆಗಿರುವ ಅಭಿವೃದ್ಧಿಯನ್ನು ಕಾಂಗ್ರೆಸ್‌ ಕನಸ್ಸಲ್ಲೂ ಕಾಣುವುದಕ್ಕಾಗುವುದಿಲ್ಲ. ಹಾಗೇ ಚಿತ್ರದುರ್ಗದಲ್ಲಿ 1,96,093 ಮನೆಗಳಿಗೆ ಕುಡಿಯುವ ನೀರು ಪೂರೈಕೆ ಎಂಬುದೆಲ್ಲ ಏನೆಂದೂ ಜಾತಿಹುಳು ಜೆಡಿಎಸ್‌ನ ಜಡಮಂಡೆಗೆ ಅರ್ಥವೂ ಆಗುವುದಿಲ್ಲ’ ಎಂದು ಬಿಜೆಪಿ ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT