ಎಸ್ಸಿ ಸಮುದಾಯಗಳನ್ನು ಕಾಂಗ್ರೆಸ್ ತನ್ನ ಮತ ಬ್ಯಾಂಕ್ ಎಂದು ಪರಿಗಣಿಸಿದೆ: ಬಿಜೆಪಿ
ಪರಿಶಿಷ್ಟ ಜಾತಿ ಸಮುದಾಯಗಳನ್ನು ಕಾಂಗ್ರೆಸ್ ತನ್ನ ಮತ ಬ್ಯಾಂಕ್ ಎಂದು ಪರಿಗಣಿಸಿದೆ ಎಂದು ರಾಜ್ಯ ಬಿಜೆಪಿ ಶನಿವಾರ ಕಿಡಿಕಾರಿದೆ.
ಮೈಸೂರು: ಪರಿಶಿಷ್ಟ ಜಾತಿ ಸಮುದಾಯಗಳನ್ನು ಕಾಂಗ್ರೆಸ್ ತನ್ನ ಮತ ಬ್ಯಾಂಕ್ ಎಂದು ಪರಿಗಣಿಸಿದೆ ಎಂದು ರಾಜ್ಯ ಬಿಜೆಪಿ ಶನಿವಾರ ಕಿಡಿಕಾರಿದೆ.
ಬಿಜೆಪಿ ಎಸ್ಸಿ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ರಾಜಕೀಯ ನಿರ್ಣಯವನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಂಭುಪ್ರಸಾದ್ ತುಂಡಿಯಾ ಶನಿವಾರ ಲಲಿತ್ ಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ಬಿಡುಗಡೆ ಮಾಡಿದರು.
ಸಭೆಯಲ್ಲಿ ಕೈಗೊಂಡ ರಾಜಕೀಯ ನಿರ್ಣಯದ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ತುಂಡಿಯಾ ಅವರು, ಪ್ರಧಾನಿ ಮೋದಿ ಅವರು 'ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಔರ್ ಸಬ್ಕಾ ಪ್ರಯಾಸ್' ಎಂಬ ಧ್ಯೇಯವಾಕ್ಯದೊಂದಿಗೆ ಪರಿಶಿಷ್ಟ ಜಾತಿಗಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಕಳೆದ 8 ವರ್ಷಗಳಿಂದ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. “ಕಾಂಗ್ರೆಸ್ ಪಕ್ಷವು ಕೇಂದ್ರದಲ್ಲಿ 57 ವರ್ಷಗಳ ಕಾಲ ಆಡಳಿತ ನಡೆಸಿತು, ಆದರೆ ಎಸ್‌ಸಿಗಳ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಯಾವುದೇ ಪ್ರಯತ್ನ ಮಾಡಲಿಲ್ಲ. ಕಾಂಗ್ರೆಸ್‌ನ ಪಿತೂರಿ ಮನಸ್ಥಿತಿಯು ಎಸ್‌ಸಿಗಳನ್ನು ಮಾನವ ಘನತೆ ಮತ್ತು ಮೂಲ ಸೌಕರ್ಯಗಳಿಂದ ವಂಚಿತಗೊಳಿಸಿತು. ಕಾಂಗ್ರೆಸ್ ಎಸ್‌ಸಿಗಳನ್ನು ಕೇವಲ ಮತಬ್ಯಾಂಕ್ ಎಂದು ಪರಿಗಣಿಸಿದೆ ಎಂದು ತಿಳಿಸಿದ್ದಾರೆ.
ಬಳಿಕ ಕಾಂಗ್ರೆಸ್ ಮತ್ತು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ವಿರುದ್ಧ ವಾಗ್ದಾಳಿ ಮುಂದುವರಿಸಿದ ಅವರು, 1952 ರಲ್ಲಿ ಬಾಂಬೆಯಿಂದ ಲೋಕಸಭೆ ಚುನಾವಣೆಯಲ್ಲಿ ಬಿಆರ್ ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು. ನೆಹರು 1953 ರಲ್ಲಿ ಭಂಡಾರದಿಂದ ಲೋಕಸಭೆ ಉಪಚುನಾವಣೆಯಲ್ಲಿ ಅಂಬೇಡ್ಕರ್ ವಿರುದ್ಧ ಪ್ರಚಾರ ಮಾಡಿದ್ದರು. ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಅಂಬೇಡ್ಕರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಲು ಅಥವಾ ಅವರ ಭಾವಚಿತ್ರವನ್ನು ಹಾಕಲು ಕಾಂಗ್ರೆಸ್ ವಿಫಲವಾಯಿತು ಎಂದು ಕಿಡಿಕಾರಿದರು. ಈ ವೇಳೆ ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷ ರಾಷ್ಟ್ರೀಯ ಕಾರ್ಯದರ್ಶಿ ಉಪಸ್ಥಿತರಿದ್ದರು.