ರಾಜಕೀಯ

ಕಾಂಗ್ರೆಸ್ ಸೇರಲು ವೈಎಸ್ ವಿ ದತ್ತಾ ಸಜ್ಜು, ಜೆಡಿಎಸ್ ಟೀಕಾ ಪ್ರಹಾರ

Nagaraja AB

ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮಾನಸ ಪುತ್ರ ಎಂದೇ ಖ್ಯಾತರಾಗಿರುವ ವೈಎಸ್ ವಿ ದತ್ತಾ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರುತ್ತಿದ್ದಾರೆ. ಜನವರಿ 15 ರಂದು ಬೆಂಗಳೂರಿನಲ್ಲಿ ಕೈ ಹಿಡಿಯುವುದಾಗಿ ಅವರು ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ವೈಎಸ್ ವಿ ದತ್ತಾ ವಿರುದ್ದ ಟೀಕಾ ಪ್ರಹಾರ ನಡೆಸಿದೆ. ಮಾನಸಪುತ್ರನನ್ನು ಇನ್ನೊಬ್ಬ ಪುತ್ರನೆಂದೇ ನಂಬಿದ್ದರು ದೇವೇಗೌಡರು. ನಂಬಿ ಪಕ್ಕದಲ್ಲಿ ಇಟ್ಟುಕೊಂಡರು. ಕೇಳಿದ್ದೆಲ್ಲಾ ಕೊಟ್ಟರು, ಕೇಳದಿದ್ದರೂ ಕೊಟ್ಟರು. ಪ್ರೀತಿ, ವಿಶ್ವಾಸ ಎಲ್ಲವನ್ನೂ ಧಾರೆ ಎರೆದರು. ಆದರೆ ಇವತ್ತು ಮಾನಸಪುತ್ರ ಎಲ್ಲವನ್ನೂ ಮರೆತು ಕೃತಜ್ಞತಾಹೀನರಾಗಿ ಅದೇ ಗೌಡರಿಗೆ ಬೆನ್ನಿಗೆ ಚೂರಿ ಹಾಕಿದ ಕಾಂಗ್ರೆಸ್ ಸೇರುತ್ತಿದ್ದಾರ ಎಂದು ಕಿಡಿಕಾರಿದೆ. 

ಮಾನಸಪುತ್ರನಿಗೆ ನಂಬಿಕೆ ಎಂದರೆ ವ್ಯಾಪಾರ, ಪ್ರೀತಿ ಎಂದರೆ ಲಾಭದ ದಾರಿ, ವಿಶ್ವಾಸ ಎಂದರೆ ರಾಜಕೀಯ ಹಕೀಕತ್ತಿನ ರಾಜಮಾರ್ಗ. ಅಂಥ ಮಾನಸಪುತ್ರನ ಬಗ್ಗೆ ಗೌಡರು ಕೊರಗುವುದಿಲ್ಲ. ಏಕೆಂದರೆ, ಪಕ್ಷದ ಎಲ್ಲಾ ನಾಯಕರು, ಕಟ್ಟ ಕಡೆಯ ಕಾರ್ಯಕರ್ತನೂ ಮಾಜಿ ಪ್ರಧಾನಿಗಳ ಮಾನಸಪುತ್ರರೇ.. ಢೋಂಗಿ ಮಾನಸಪುತ್ರರನ್ನು ಮರೆ ಲೇಸು. ಅಲ್ಲವೇ? ಎಂದು ಟೀಕಿಸಿದೆ.

SCROLL FOR NEXT