ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಜನವರಿ 16 ರಂದು ಕಾಂಗ್ರೆಸ್'ನಿಂದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಜನವರಿ 16 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ್ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ ನೀಡುವ ಮುನ್ನ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ರಸ್ತೆ ಗುಡಿಸಿದರು.
Manjula VN
Updated On : 13 Jan 2023, 12:24 pm

ಮೈಸೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಜನವರಿ 16 ರಂದು ಬೆಂಗಳೂರಿನಲ್ಲಿ ನಡೆಸಲು ಉದ್ದೇಶಿಸಿರುವ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ರಾಜ್ಯದ ಮಹಿಳೆಯರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ದ್ರುವನಾರಾಯಣ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ದ್ರುವನಾರಾಯಣ್ ಅವರು, ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಮೀಸಲಾತಿ ನೀಡಿದ್ದು, ಇಷ್ಟು ವರ್ಷ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕಳೆದ ಚುನಾವಣೆಯಲ್ಲೂ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದ್ದನ್ನು ಸ್ಮರಿಸಿದರು.

ಇದನ್ನೂ ಓದಿ: ಹುಬ್ಬಳ್ಳಿಗೆ ಪ್ರಧಾನಿ; ನಿಮ್ಮ ಪಕ್ಷದ 'ಸ್ಯಾಂಟ್ರೋ ಸಾಧನೆ' ಬಗ್ಗೆ ಮಾತನಾಡಿ #ModiMouna ಅವರೇ ಎಂದ ಕಾಂಗ್ರೆಸ್

Advertisement

Advertisement

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ 12 ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿದ್ದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಟ್ಟಣಕ್ಕೆ ಎರಡು ಬಾರಿ ಮಾತ್ರ ಭೇಟಿ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ಯಾವುದೇ ಪರಿಶೀಲನಾ ಸಭೆ ನಡೆಸಿಲ್ಲ, ಯಾವುದೇ ಕಾರ್ಯಕ್ರಮವನ್ನು ಘೋಷಿಸಿಲ್ಲ.

ಚಾಮರಾಜನಗರದಲ್ಲಿ ನಡೆಯಲಿರುವ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಗೆ 40 ಸಾವಿರಕ್ಕೂ ಹೆಚ್ಚು ಜನರು ಆಗಮಿಸುವ ನಿರೀಕ್ಷೆಯಿದೆ, ಅಲ್ಲಿ ಪಕ್ಷವು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುತ್ತದೆ ಎಂದು ಹೇಳಿದರು.

ಬಸ್ ಯಾತ್ರೆ ಕುರಿತು ಬಿಜೆಪಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕುರಿತ ಪ್ರಶ್ನೆಗೆ ಉತ್ತರಿಸಿ ಕೇಸರಿ ಪಕ್ಷಕ್ಕೆ ಕಾಂಗ್ರೆಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ, ಆಡಳಿತಾರೂಢ ಬಿಜೆಪಿ ಪಕ್ಷವು ಮೊದಲು ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸಲಿ ಎಂದು ಸವಾಲು ಹಾಕಿದರು.

ಇದನ್ನೂ ಓದಿ: ಸುರಕ್ಷಿತ ಕ್ಷೇತ್ರವೆಂದು ಕೋಲಾರದತ್ತ ಮುಖ ಮಾಡಿದ ಸಿದ್ದರಾಮಯ್ಯ: ಅದೇ ಹಾದಿಯಲ್ಲಿ ಕಾಂಗ್ರೆಸ್ ಘಟಾನುಘಟಿ ನಾಯಕರು!

ಈ ನಡುವೆ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಪಕ್ಷದ ನಾಯಕತ್ವಕ್ಕೆ ಮನವಿ ಮಾಡಲು ಮಹಿಳಾ ಕಾಂಗ್ರೆಸ್ ಮುಖಂಡರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

109 ಮಹಿಳಾ ಮುಖಂಡರು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಹೆಚ್ಚಿನ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರಿಗೆ ಮನವಿ ಮಾಡುವುದಾಗಿ ಮಾಜಿ ಸಚಿವೆ ಉಮಾಶ್ರೀ ಹೇಳಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಪಕ್ಷವು ಹೆಚ್ಚಿನ ಮಹಿಳೆಯರಿಗೆ ಟಿಕೆಟ್ ನೀಡಿತ್ತು. 'ನಾ ನಾಯಕಿ' ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲು ಪ್ರಿಯಾಂಕಾ ಸೋಮವಾರ ಬೆಂಗಳೂರಿಗೆ ಬರಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments