ಸಚಿವ ಸುನೀಲ್ ಕುಮಾರ್ ಟ್ವೀಟ್ 
ರಾಜಕೀಯ

'ಸಿಎಂ ಆಗಿದ್ದಾಗ ಎಲ್ಲ ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರಿಂದ 200 ಯುನಿಟ್ ಉಚಿತ ವಿದ್ಯುತ್ ಭರವಸೆ'

ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ  ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ.

ಬೆಂಗಳೂರು: ತಾವು ಮುಖ್ಯಮಂತ್ರಿಯಾಗಿದ್ದಾಗ ರಾಜ್ಯದ ಎಲ್ಲ  ಎಸ್ಕಾಂಗಳನ್ನು ದಿವಾಳಿ ಅಂಚಿಗೆ ತಳ್ಳಿದ್ದ ಮಹಾನ್ ಆರ್ಥಿಕ ತಜ್ಞರೊಬ್ಬರು ಈಗ ೨೦೦ ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದಾರೆ. ಇದು ಜನಹಿತ ಹೇಳಿಕೆಯಲ್ಲ. ಇದರ ಹಿಂದಿರುವ ಉದ್ದೇಶ ಏನು ಗೊತ್ತೆ ಎಂದು ಇಂಧನ ಸಚಿವ ಸುನೀಲ್ ಕುಮಾರ್ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಸುನೀಲ್ ಕುಮಾರ್,  ಎಸ್ಕಾಂಗಳನ್ನು ಖಾಸಗಿಕರಣ ಮಾಡುವುದೇ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರ ಅಂತಿಮ ಗುರಿ‌. ಉಚಿತ ವಿದ್ಯುತ್ ನಿಂದ ಎಸ್ಕಾಂಗಳ ಮೇಲೆ ಇನ್ನಷ್ಟು ಹೊರೆಯಾಗುತ್ತದೆ. ಆಗ ನಷ್ಟದಲ್ಲಿರುವ ಎಸ್ಕಾಂಗಳನ್ನು ಖಾಸಗಿಕರಣ ಮಾಡುವ ಸಂಚು ಈ ಘೋಷಣೆಯ ಹಿಂದೆ ಇದೆ ಎಂದು ಆರೋಪಿಸಿದ್ದಾರೆ.

ತಾವು ಮುಖ್ಯಮಂತ್ರಿಯಾಗಿದ್ದಾಗ ಕತ್ತಲೆಯಲ್ಲಿ ಬಜೆಟ್ ಓದಿದ್ದನ್ನು ಸಿದ್ದರಾಮಯ್ಯ ಮರೆತಿರಬೇಕು. ನಿಮ್ಮ ಕಾಲದಲ್ಲಿ‌ ಇಂಧನ ಇಲಾಖೆ ಹೇಗೆ ಕಾರ್ಯ ನಡೆಸಿತ್ತು ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ. ನೀವು ಎಸ್ಕಾಂಗಳನ್ನು ನಷ್ಟಕ್ಕೆ ದೂಡಿದ್ದಿರಿ ಆದರೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ೯೦೦೦ ಕೋಟಿ ರೂ.ನ್ನು ಎಸ್ಕಾಂಗಳಿಗೆ ನೀಡಿ ನೀವು ಮಾಡಿದ್ದ ಆಡಳಿತ ವೈಫಲ್ಯ ಸರಿಪಡಿಸಿದ್ದೇವೆ. ಮತಕ್ಕಾಗಿ ಇಂಧನ ಇಲಾಖೆ ಮಾರಾಟ ಮಾಡಬೇಡಿ ಎಂದು ಸುನೀಲ್ ಕುಮಾರ್ ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್