ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಯಾರವರು..? ಸುಮಲತಾ, ಅವರ ಪರಿಚಯ ನನಗಿಲ್ಲ: ಮಂಡ್ಯ ಒಳ ಒಪ್ಪಂದ ಕುರಿತು ಸಂಸದೆ ಹೇಳಿಕೆಗೆ ಎಚ್ ಡಿಕೆ ಸಿಡಿಮಿಡಿ

ಯಾರವರು..? ಸುಮಲತಾ, ಅವರ ಪರಿಚಯವೇ ನನಗಿಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಕಲಬುರಗಿ: ಯಾರವರು..? ಸುಮಲತಾ, ಅವರ ಪರಿಚಯವೇ ನನಗಿಲ್ಲ ಎಂದು ಮಾಜಿ ಸಿಎಂ ಎಚ್ .ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂಬ ಸುಮಲತಾ ಹೇಳಿಕೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ,  ಆ ಹೇಳಿಕೆ ನೀಡಿದವರು ನನಗೆ ಗೊತ್ತೆ ಇಲ್ಲ. ಅವರಿಗೂ ನನಗೆ ಸಂಬಂಧವೇ ಇಲ್ಲ ಎಂದು ಕಿಡಿ ಕಾರಿದರು.

ಒಳ ಒಪ್ಪಂದ, ಹೊರ ಒಪ್ಪಂದ ನಾನು ಮಾಡಿಕೊಂಡಿದ್ದೀನಾ? ಅವರ ಆತ್ಮಕ್ಕೆ ಅವರು ಮುಟ್ಟಿಕೊಂಡು ನೋಡಲಿ. ಲೋಕಸಭಾ ಚುನಾವಣೆಯಲ್ಲಿ ಯಾರ‍್ಯಾರು ಒಪ್ಪಂದ ಮಾಡಿಕೊಂಡಿದ್ದರು? ಏನು ನಡೆಯಿತು ಎಂದು ಜನತೆಗೆ ಗೊತ್ತಿದೆ‌ ಎಂದರು.

ಈ ದೇಶದಲ್ಲಿ ಯಾರು ಬೇಕಾದರೂ, ಎಲ್ಲಿ ಬೇಕಾದರೂ ಚುನಾವಣೆಯನ್ನು ನಿಲ್ಲಬಹುದು ಎಂದು ಸುಮಲತಾ ಅವರು ಮಂಡ್ಯದಲ್ಲಿ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಪ್ರತಿಕ್ರಿಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಷರತ್ತು ಒಪ್ಪದ ಹೊರತು ಹಾರ್ಮುಜ್ ಜಲಸಂಧಿ ತರೆಯಲ್ಲ ಎಂದ ಇರಾನ್; ದಿಗ್ಬಂಧನ ಮತ್ತಷ್ಟು ಬಿಗಿಗೊಳಿಸಿದ ಅಮೆರಿಕ..!

ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡ: ‘ದೊಡ್ಡ ಘಟನೆ ನಡೆಯಲಿದೆ’ ಎಂದ ಟ್ರಂಪ್; ಇರಾನ್ ವಿರುದ್ಧ ಅಮೆರಿಕಾ ನಡೆಸಿರುವ ಗೇಮ್‌ಪ್ಲ್ಯಾನ್ ಏನು..?

ಇಂದಿನಿಂದ ವಿಧಾನಮಂಡಲ ವಿಶೇಷ ಅಧಿವೇಶನ: ಕಸ್ತೂರಿರಂಗನ್ ವರದಿ ತಿರಸ್ಕರಿಸಲು ಒಕ್ಕೊರಲ ತೀರ್ಮಾನ ಸಾಧ್ಯತೆ, ಕೇಂದ್ರಕ್ಕೆ ಶಾಕ್ ಕೊಡಲು ರಾಜ್ಯ ಸರ್ಕಾರ ಸಜ್ಜು..!

ಅಮೆರಿಕಾ ವಿರುದ್ಧ ಯುದ್ಧವಿಲ್ಲ, ಸೌದಿ ವಿರುದ್ಧ ಸಮರ ನಿಲ್ಲಲ್ಲ: ಟ್ರಂಪ್‌ಗೆ ಹೌತಿಗಳ ಖಡಕ್ ಸಂದೇಶ, ಮಧ್ಯಪ್ರಾಚ್ಯದಲ್ಲಿ ಮತ್ತೊಂದು ಯುದ್ಧದ ಆತಂಕ..!

ಕಸ್ತೂರಿರಂಗನ್ ವರದಿ ವಿರುದ್ಧ ರೈತರ ರಣಕಹಳೆ: 10 ಕಿ.ಮೀ. ನಡೆದು ಬಂದ ಸಾವಿರಾರು ಅನ್ನದಾತರು, ಸಿಎಂ ಭೇಟಿಗೆ ಪಟ್ಟು: ಬಿಸಿಲಲ್ಲೇ ಕುಳಿತು ಧರಣಿ..!