ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ; ಅಶ್ವಥ್-ನಿಖಿಲ್ ವಿರುದ್ಧ, ಅಶೋಕ್-ಡಿಕೆಶಿ ವಿರುದ್ಧ ಗೆದ್ದು ತೋರಿಸಲಿ: ಯೋಗೇಶ್ವರ್ ಆಡಿಯೋ ಲೀಕ್!

ಕೇಂದ್ರ ಗೃಹ ಸಚಿವ ನಮ್ಮ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ ಕಣಯ್ಯ, ಪಾರ್ಟಿ ವಿರುದ್ಧ ಯಾರಾದ್ರೂ ಮಾತನಾಡಿದ್ರೆ ಅಷ್ಟೆ ಅವರ ಕಥೆ ಎಂದು ಬಿಜೆಪಿ ಎಂಎಲ್ ಸಿ ಯೋಗೇಶ್ವರ್ ಮಾತನಾಡಿರುವ ಆಡಿಯೋವೊಂದು ಲೀಕ್ ಆಗಿದೆ

ಸಿ.ಪಿ ಯೋಗೇಶ್ವರ್
Shilpa D
Updated On : 14 Jan 2023, 3:14 pm

ರಾಮನಗರ: ಕೇಂದ್ರ ಗೃಹ ಸಚಿವ ನಮ್ಮ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ ಕಣಯ್ಯ,  ಪಾರ್ಟಿ ವಿರುದ್ಧ ಯಾರಾದ್ರೂ ಮಾತನಾಡಿದ್ರೆ ಅಷ್ಟೆ ಅವರ ಕಥೆ ಎಂದು  ಬಿಜೆಪಿ ಎಂಎಲ್ ಸಿ ಯೋಗೇಶ್ವರ್  ಮಾತನಾಡಿರುವ  ಆಡಿಯೋವೊಂದು ವೈರಲ್ ಆಗಿದೆ.

ರಾಜ್ಯ ವಿಧಾನ ಸಭಾ ಚುನಾವಣೆಯ​ ಹೊತ್ತಲ್ಲೇ ಕರ್ನಾಟಕದಿಂದ ದೆಹಲಿ ರಾಜಕಾರಣದವರೆಗೂ ಮಾತನಾಡಿರೋ ಸ್ಫೋಟಕ ಆಡಿಯೋವನ್ನು ಖಾಸಗಿ ಚಾನೆಲ್ ವೊಂದು ಬಿತ್ತರಿಸಿದೆ.

ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಮಾತನಾಡಿದ್ದಾರೆ ಎನ್ನಲಾದ ಆಡಿಯೋದಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಬಿಸಿ ಬಿಸಿ ಚರ್ಚೆ​ ಆಗಿದೆ. ಅದರಲ್ಲೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ ಕಣಯ್ಯ ಎಂದು ಯೋಗೇಶ್ವರ್​ ಹೇಳಿರೋದು ಸಂಚಲನ ಸೃಷ್ಟಿಸಿದೆ.

Advertisement

Advertisement

ಅಮಿತ್ ಶಾ ಹೊಂದಾಣಿಕೆ ರಾಜಕೀಯ ಬಿಜೆಪಿಗೆ ಬೇಡ ಅಂತಾರೆ. ಹೊಂದಾಣಿಕೆ ಅನ್ನೋದು ತಾಯಿಗೆ ದ್ರೋಹ ಮಾಡಿದಂತೆ ಅಂತಾರೆ. ನಮ್ಮ ಅಮಿತ್ ಶಾ ಅವರದ್ದು ಒಂಥರಾ ರೌಡಿಸಂ. ಪಾರ್ಟಿ ವಿರುದ್ಧ ಯಾರಾದ್ರೂ ಮಾತನಾಡಿದ್ರೆ ಅಷ್ಟೆ ಅವರ ಕಥೆ ಎಂದು ಯೋಗೇಶ್ವರ್ ಮಾತನಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಪಾಪ, ನಿಖಿಲ್ ಒಂದು ಕ್ಷೇತ್ರದಲ್ಲಿ ಗೆದ್ದು ತಮ್ಮ ಸಾಮರ್ಥ್ಯ ತೋರಿಸಲಿ; ಅವರಿಗೂ ಚನ್ನಪಟ್ಟಣಕ್ಕೂ ಸಂಬಂಧವಿಲ್ಲ: ಯೋಗೇಶ್ವರ್ ತಿರುಗೇಟು

ಸಚಿವರಾದ ಅಶ್ವತ್ಥ್ ನಾರಾಯಣ್, ಆರ್‌.ಅಶೋಕ್‌ಗೆ ಖಡಕ್ ಸವಾಲ್ ಹಾಕಿದ್ದಾರೆ. ನಾನು ಕುಮಾರಸ್ವಾಮಿ ವಿರುದ್ಧ ಸ್ಪರ್ಧೆ ಮಾಡ್ತೀನಿ. ರಾಮನಗರದಲ್ಲಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ ಸಚಿವ ಅಶ್ವತ್ಥ್​ ನಾರಾಯಣ​, ಕನಕಪುರದಲ್ಲಿ ಡಿ.ಕೆ.ಶಿವಕುಮಾರ್​ ವಿರುದ್ಧ ಆರ್​.ಅಶೋಕ್​ ಗೆದ್ದು ತೋರಿಸಲಿ ಎಂದು ಸವಾಲು ಹಾಕಿದ್ದಾರೆ. ಈ ಬಾರಿ ಜನಾಭಿಪ್ರಾಯದ ಮೂಲಕ ಬಿಜೆಪಿ ಸರ್ಕಾರ ಬರೋದಿಲ್ಲ ಎಂದು ಯೋಗೇಶ್ವರ್ ಆಡಿಯೋದಲ್ಲಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments