ಬಿಜೆಪಿ ಲೋಗೋ 
ರಾಜಕೀಯ

ರಾಜ್ಯದ ನಾಲ್ಕು ದಿಕ್ಕಿನಿಂದಲೂ ರಥ ಯಾತ್ರೆ ಆರಂಭಿಸಲು ಬಿಜೆಪಿ ಸಜ್ಜು; ಡೀಟೆಲ್ಸ್ ಇಲ್ಲಿದೆ...

ಆಡಳಿತಾರೂಢ ಬಿಜೆಪಿಯು ವಿಧಾನಸಭೆ ಚುನಾವಣೆಗೆ ಮುನ್ನ ಬಜೆಟ್ ಅಧಿವೇಶನದ ನಂತರ ರಾಜ್ಯದಲ್ಲಿ 'ರಥಯಾತ್ರೆ' ನಡೆಸಲು ಸಜ್ಜಾಗಿದೆ. ಎಲ್ಲಾ ಜನರನ್ನು ತಲುಪಲು ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆ ಕೈಗೊಳ್ಳಲಾಗುವುದು ಎಂದು ಬಿಜೆಪಿ ತಿಳಿಸಿದೆ.

ಬೆಂಗಳೂರು: ಆಡಳಿತಾರೂಢ ಬಿಜೆಪಿಯು ವಿಧಾನಸಭೆ ಚುನಾವಣೆಗೆ ಮುನ್ನ ಬಜೆಟ್ ಅಧಿವೇಶನದ ನಂತರ ರಾಜ್ಯದಲ್ಲಿ 'ರಥಯಾತ್ರೆ' ನಡೆಸಲು ಸಜ್ಜಾಗಿದೆ.

ಎಲ್ಲಾ ಜನರನ್ನು ತಲುಪಲು ರಾಜ್ಯದ ನಾಲ್ಕು ದಿಕ್ಕುಗಳಿಂದ ರಥಯಾತ್ರೆ ಕೈಗೊಳ್ಳಲಾಗುವುದು ಎಂದು ಬಿಜೆಪಿ ತಿಳಿಸಿದೆ.

ಸೋಮವಾರ ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಬಗ್ಗೆ ವಿವರಗಳನ್ನು ಅಂತಿಮಗೊಳಿಸಬೇಕಿದೆ ಎಂದು ಹೇಳಿದ್ದರು. ದೆಹಲಿಯಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗವಹಿಸುತ್ತಿದ್ದಾರೆ.

ಸಭೆಯಲ್ಲಿ ಹಲವು ರಾಜಕೀಯ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಬೂತ್ ಮಟ್ಟದಿಂದ ಪಕ್ಷ ಸಂಘಟನೆಯವರೆಗೂ ಮಾಹಿತಿ ನೀಡಲಾಗಿತ್ತು  ಎಂದು ತಿಳಿಸಿದರು.

ಪಕ್ಷದ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರಗೆ ಸಂಬಂಧಿಸಿದಂತೆ ಹೈಕಮಾಂಡ್ ಕರೆ ಮಾಡುವ ಸಾಧ್ಯತೆ ಇದೆ. ಇತ್ತೀಚೆಗೆ ರಾಷ್ಟ್ರೀಯ ಯುವಜನೋತ್ಸವ ಉದ್ಘಾಟಿಸಲು ಹುಬ್ಬಳ್ಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿ ನೀಡಿದ್ದ ಸಂದರ್ಭದಲ್ಲಿ ಪಕ್ಷ ಅವರನ್ನು ದೂರವಿಟ್ಟಿತ್ತು.

ಒಬಿಸಿ ಕೋಟಾದಡಿ ಪಂಚಮಸಾಲಿ ಉಪಪಂಗಡಕ್ಕೆ ಮೀಸಲಾತಿ ನೀಡುವ ಕುರಿತು ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಹಾಗೂ ಸಂಪುಟದ ಸಚಿವರ ಮೇಲೂ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯಿಂದ ಶಾಸಕ ಯತ್ನಾಳ್ ಅವರನ್ನು ಉಚ್ಚಾಟಿಸಿದರೆ ಪಂಚಮಸಾಲಿ ಸಮಾಜ ಅವರ ಜೊತೆ ನಿಲ್ಲಲಿದೆ ಎಂದೂ ಧರ್ಮಗುರುಗಳು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಕುರಿತು ಹೈಕಮಾಂಡ್ ಗಮನಕ್ಕೆ ತರಲಾಗಿದ್ದು, ರಾಷ್ಟ್ರೀಯ ಕಾರ್ಯಕಾರಿಣಿ ನಂತರ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಮರ್ಥಿಸಿಕೊಂಡರು.

ಕೇಸರಿ ಪಕ್ಷವು ಹಿಂದುತ್ವದ ಅಜೆಂಡಾ ಮತ್ತು ಪಿಎಂ ಮೋದಿ ಹೆಸರಿನಲ್ಲಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಎಲ್ಲಾ ಪ್ರಯತ್ನಗಳನ್ನು ಗಂಭೀರವಾಗಿ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Idre Nemdiyaag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT