ರಾಜಕೀಯ

ಕಮಿಷನ್ ದಂಧೆ ಬಿಜೆಪಿಯ ಸಂಸ್ಕೃತಿ, ನಡವಳಿಕೆಯನ್ನು ಬಯಲು ಮಾಡಿದೆ: ಹೆಚ್‌ಡಿ. ಕುಮಾರಸ್ವಾಮಿ

Manjula VN

ಹುಬ್ಬಳ್ಳಿ: ಗುತ್ತಿಗೆದಾರರಿಂದ ಕಮಿಷನ್ ಪಡೆಯುವ ವಿಚಾರದಲ್ಲಿ ಬಿಜೆಪಿ ನಾಯಕರು ಕೆಸರೆರಚಾಟ ನಡೆಸುತ್ತಿರುವುದು ಪಕ್ಷದ ಸಂಸ್ಕೃತಿ ಮತ್ತು ನಡವಳಿಕೆಯನ್ನು ಬಯಲು ಮಾಡಿದೆ ಎಂದು ಜೆಡಿಎಸ್ ಹಿರಿಯ ಮುಖಂಡ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ಹೇಳಿದ್ದಾರೆ.

ಪಕ್ಷದ ಮೂರನೇ ಹಂತದ ಪಂಚರತ್ನ ಯಾತ್ರೆಗೆ ಚಾಲನೆ ನೀಡಲು ನಿನ್ನೆಯಷ್ಟೇ ಕುಮಾರಸ್ವಾಮಿಯವರು ವಿಜಯಪುರ ಜಿಲ್ಲೆಗೆ ಭೇಟಿ ನೀಡಿದ್ದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ಉತ್ತೇಜಿತವಾಗಿರುವ ಭ್ರಷ್ಟಾಚಾರವನ್ನು ಜನರು ನೋಡಿದ್ದಾರೆ. ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಕಮಲ ಪಕ್ಷವನ್ನು ಅಧಿಕಾರದಿಂದ ದೂರವಿಡಲು ನಿರ್ಧರಿಸಿದ್ದಾರೆಂದು. ಹೀಗಾಗಿಯೇ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಜನರು ಸ್ವಯಂಪ್ರೇರಿತರಾಗಿ ಯಾತ್ರೆಗೆ ಆಗಮಿಸುತ್ತಿದ್ದಾರೆ ಎಂದರು.

ಬಳಿಕ ಉನ್ನತ ರಾಜಕಾರಣಿಗಳು ಮತ್ತು ಅಧಿಕಾರಿಗಳೊಂದಿಗೆ 'ಸ್ಯಾಂಟ್ರೋ' ರವಿಯ ಸಂಪರ್ಕದ ಹೊಂದಿರುವ ಕುರಿತ ಪ್ರಶ್ನೆಗೆ ಉತ್ತರಿಸಿ, ತನಿಖೆಯಿಂದ ಸಿಐಡಿ ಏನನ್ನು ಕಂಡುಕೊಳ್ಳುತ್ತದೆ ಎಂಬುದನ್ನು ಕಾದು ನೋಡೋಣ ಎಂದು ತಿಳಿಸಿದರು.

ಜೆಡಿಎಸ್'ನ ನಾಲ್ಕನೇ ಹಂತದ ವ್ಯಾಪ್ತಿಗೆ ಪಂಚರತ್ನ ಯಾತ್ರೆಯಲ್ಲಿ ಕಿತ್ತೂರು ಕರ್ನಾಟಕದ ಜಿಲ್ಲೆಗಳು ಬರಲಿವೆ ಎಂದು ತಿಳಿದುಬಂದಿದೆ.

ಈ ಮಧ್ಯೆ, ಕುಮಾರಸ್ವಾಮಿ ಅವರು ಬಿಜೆಪಿ ಮತ್ತು ಕಾಂಗ್ರೆಸ್‌ನ ಅತೃಪ್ತ ನಾಯಕರನ್ನು ಭೇಟಿ ಮಾಡಿರುವುದು ಧಾರವಾಡ ಜಿಲ್ಲೆಯ ರಾಜಕೀಯ ವಲಯಗಳಲ್ಲಿ ಊಹಾಪೋಹಗಳಿಗೆ ಕಾರಣವಾಗಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಯಾವೆಲ್ಲಾ ನಾಯಕರಿಗೆ ರಾಷ್ಟ್ರೀಯ ಪಕ್ಷಗಳು ಟಿಕೆಟ್ ನಿರಾಕರಿಸಲಿದೆಯೋ ಅಂತಹ ನಾಯಕರನ್ನು ಕುಮಾರಸ್ವಾಮಿಯವರು ಭೇಟಿಯಾಗಿದ್ದಾರೆಂದು ತಿಳಿದುಬಂದಿದೆ.

SCROLL FOR NEXT