ಸಿದ್ದರಾಮಯ್ಯ 
ರಾಜಕೀಯ

ನ್ಯಾಯ ಕೊಡಿ ಮೋದಿಯವರೇ ಎಂದು ಪ್ರಧಾನಿಗಳ ಮುಂದೆ 12 ಪ್ರಶ್ನೆಗಳನ್ನು ಮುಂದಿಟ್ಟ ವಿಪಕ್ಷ ನಾಯಕ ಸಿದ್ದರಾಮಯ್ಯ

ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿಗಳ ಮುಂದೆ ರಾಜ್ಯದ ಜನರು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಮುಂದಿಟ್ಟಿದ್ದಾರೆ. ಪ್ರಧಾನಿಗಳ ಮುಂದೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. 

ಬೆಂಗಳೂರು: ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ವಿವಿಧ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಧಾನಿಗಳ ಮುಂದೆ ರಾಜ್ಯದ ಜನರು ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಮುಂದಿಟ್ಟಿದ್ದಾರೆ. ಪ್ರಧಾನಿಗಳ ಮುಂದೆ 12 ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. 

ಪಿಎಸ್‌ಐ ನೇಮಕಾತಿ ಹಗರಣದಿಂದ, ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಹಗರಣವೂ ಸೇರಿ ಮೊನ್ನೆ ನಡೆದ PWD ಸಹಾಯಕ ಎಂಜಿನಿಯರ್ ನೇಮಕಾತಿ ಹಗರಣದಲ್ಲಿ ಕೆಲಸದಿಂದ ವಂಚಿತರಾದ ಎಲ್ಲಾ ಅರ್ಹರಿಗೆ ನ್ಯಾಯ ಕೊಡಿಸಿ ಮೋದಿಯವರೇ?,

ಕೆ.ಆರ್ ಪುರಂನ ಇನ್ಸ್ಪೆಕ್ಟರ್ ನಂದೀಶ್ 80 ಲಕ್ಷ ಲಂಚ ಕೊಟ್ಟು ವರ್ಗಾವಣೆ ಪಡೆದು ಬಂದ ಕಾರಣಕ್ಕೆ ಒತ್ತಡದಿಂದ ಸತ್ತಿದ್ದಾರೆ ಎಂದು ಸ್ವತಃ ಬಿಜೆಪಿ ಸಚಿವ ಎಂಟಿಬಿ ನಾಗರಾಜ್ ಹೇಳಿದ್ದಾರೆ. ಇತರರಿಗೆ ರಕ್ಷಣೆ ನೀಡುವ ಪೊಲೀಸರಿಗೇ ಹೀಗಾದರೆ ಸಾಮಾನ್ಯರ ಗತಿ ಏನು ಮೋದಿ ಅವರೇ?,

ಕೋವಿಡ್ ಸಂದರ್ಭದಲ್ಲಿ ಅಗತ್ಯ ಸಲಕರಣೆ ಪೂರೈಕೆ ಮಾಡಿದ್ದ ಗುತ್ತಿಗೆದಾರ ಬಸವರಾಜ ಅಮರಗೋಳ ಅವರಿಗೆ ರಾಜ್ಯ ಸರ್ಕಾರ ಬಿಲ್‌ ಹಣ ನೀಡದೆ ಇರುವುದರಿಂದ ಬೇಸತ್ತು ದಯಾಮರಣ ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ಈತನಿಗೆ ನ್ಯಾಯ ಕೊಡಿಸಿ, ಪ್ರಾಣ ಉಳಿಸಬೇಕಾದವರು ನೀವಲ್ಲವೇ ಮೋದಿ ಅವರೇ?

ಕೊರೊನಾ ಕಾಲದಲ್ಲಿ ಸ್ಯಾನಿಟೈಸರ್‌, ಮಾಸ್ಕ್ ನಿಂದ ಹಿಡಿದು ವೆಂಟಿಲೇಟರ್ ವರೆಗೆ ಎಲ್ಲದರಲ್ಲೂ ರಾಜ್ಯ ಸರ್ಕಾರ ಲೂಟಿ ಮಾಡಿದ್ದರಿಂದ ಕನಿಷ್ಠ 3,000 ಕೋಟಿ ರೂ. ಅವ್ಯವಹಾರ ನಡೆದಿದೆ. ಕೊರೊನಾದಿಂದ ಹಾದಿಯಲ್ಲಿ ಬೀದಿಯಲ್ಲಿ ಸತ್ತವರ ಆತ್ಮಗಳು ನ್ಯಾಯಕ್ಕಾಗಿ ನಿಮ್ಮ ಹಾದಿಯನ್ನೇ ಕಾಯುತ್ತಿವೆ ಮೋದಿ ಅವರೇ.

ಕಾಲುಬಾಯಿರೋಗ ಮತ್ತು ಚರ್ಮಗಂಟು ರೋಗದಿಂದ ಒಂದೂವರೆ ಲಕ್ಷದಷ್ಟು ಜಾನವಾರುಗಳು ಮರಣಹೊಂದಿವೆ. ರೋಗಕ್ಕೆ ಲಸಿಕೆ ಮತ್ತು ಜೀವನಾಧಾರದ ರಾಸುಗಳನ್ನು ಕಳೆದುಕೊಂಡ ರೈತ ಕುಟುಂಬಗಳಿಗೆ ಪರಿಹಾರ ಕೊಡಿಸಿ ಪ್ರಧಾನ ಮಂತ್ರಿಗಳ ಎಂದು ಹೀಗೆ 12 ಪ್ರಶ್ನೆಗಳನ್ನು ಕೇಳಿದ್ದಾರೆ. 

ಅನುದಾನ ನಮ್ದು, ಇವತ್ತು ಬಿಜೆಪಿಯವರು ಪ್ರಚಾರ ತಗೊಳ್ತಿದ್ದಾರೆ: ತಾಂಡಾ ನಿವಾಸಿಗಳಿಗೆ ಮೋದಿಯಿಂದ ಹಕ್ಕುಪತ್ರ ವಿತರಣೆ ವಿಚಾರಕ್ಕೆ ಸಂಬಂಧಿಸಿ ಕಂದಾಯ ಗ್ರಾಮ ಮಾಡಬೇಕೆಂದು ಮಲ್ಲಿಕಾರ್ಜುನ ಖರ್ಗೆ ಪ್ರಯತ್ನ ಮಾಡಿದ್ದರು ಎಂದು ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. 

ಕಾಗೋಡು ತಿಮ್ಮಪ್ಪ ಮಂತ್ರಿ ಆಗಿದ್ದಾಗ ಕಾನೂನು ಜಾರಿ ಮಾಡಿದ್ದರು. ನರಸಿಂಹಯ್ಯನವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಿದ್ದೆ. ಬಿಜೆಪಿಯವರು ನಾವು ಅಡುಗೆ ಮಾಡಿದ್ದನ್ನು ಊಟ ಮಾಡುತ್ತಿದ್ದಾರೆ.

ಮೋದಿಗೆ ತಪ್ಪು ಸಂದೇಶ ಕೊಟ್ಟು ನಾವೇ ಮಾಡಿದ್ದು ಎಂದು ಹೇಳುತ್ತಿದ್ದಾರೆ. ಲಂಬಾಣಿ ಅಭಿವೃದ್ಧಿ ನಿಗಮಕ್ಕೆ ಅನುದಾನ ನೀಡಿದ್ದು ನಾವು. ಇವತ್ತು ಮೋದಿ ಕರೆಸಿ ಪ್ರಚಾರ ಗಿಟ್ಟಿಸಿಕೊಳ್ಳಲು ಪ್ರಯತ್ನ ಮಾಡ್ತಿದ್ದಾರೆ. ನಾವ ಹಕ್ಕು ಪತ್ರ ರೆಡಿ ಮಾಡಿದ್ದೆವು, ಇವರು ಹಂಚೋಕೆ ಬಂದಿದ್ದಾರೆ. ಬಿಜೆಪಿಯವರು ಮೋದಿಯಿಂದ ಸುಳ್ಳು ಹೇಳಿಸುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT