ವಿಶ್ವನಾಥ್ 
ರಾಜಕೀಯ

ಕೋಲಾರದಲ್ಲಿ ಸಿದ್ದರಾಮಯ್ಯ ಗೆಲ್ಲುತ್ತಾರೆ, ನಾನೂ ಅವರ ಪರ ಪ್ರಚಾರ ಮಾಡುತ್ತೇನೆ: ಎಚ್.ವಿಶ್ವನಾಥ್

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೆಲ್ಲುತ್ತಾರೆ...

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು, ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಬಾರಿ ಕೋಲಾರದಿಂದ ಸ್ಪರ್ಧಿಸಲು ನಿರ್ಧರಿಸಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೆಲ್ಲುತ್ತಾರೆ ಮತ್ತು ನಾನೂ ಅವರ ಪರವಾಗಿ ಪ್ರಚಾರ ಮಾಡುತ್ತೇನೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಶ್ವನಾಥ್ ಅವರು, ಸಿದ್ದರಾಮಯ್ಯ ಕೋಲಾರದಲ್ಲಿ ಗೆಲ್ಲುತ್ತಾರೆ. ಕೋಲಾರದಲ್ಲಿ ಸಿದ್ದರಾಮಯ್ಯಗೆ ಸಿದ್ದರಾಮಯ್ಯನವರೇ ಪ್ಲಸ್ ಪಾಯಿಂಟ್ ಎಂದರು.

ಇದೇ ವೇಳೆ ತಾವು ಕಾಂಗ್ರೆಸ್ ಸೇರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ವಿಶ್ನನಾಥ್ ಅವರು, ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಕೆಲವು ತಾಂತ್ರಿಕ ದೋಷಗಳಿವೆ. ನಾನು ಸ್ವತಂತ್ರ, ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ ಆದರೆ ನಾನು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇನೆ ಎಂದು ಹೇಳಿದರು.

ಈಗಾಗಲೇ ನಾನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೇನೆ. ನಾನು ಕಾಂಗ್ರೆಸ್ ಗೆ ಬೆಂಬಲ ಕೊಡುತ್ತೇನೆ ಎಂದರು.

ಇನ್ನು ಸಿದ್ದರಾಮಯ್ಯ ಮುಂದಿನ ಸಿಎಂ ಆಗ್ತಾರಾ ಎಂಬ ಪ್ರಶ್ನೆಗೆ,‌ ಇನ್ನೂ ಚುನಾವಣೆ ಆಗಿಲ್ಲ. ಚುನಾವಣೆ ಆದಮೇಲೆ ಗೊತ್ತಾಗುತ್ತದೆ ಎಂದು ವಿಶ್ವನಾಥ್ ಜಾರಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT