ಮೈಸೂರು: 2023 ರ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಈಗಾಗಲೇ ತಮ್ಮ ಪಕ್ಷದ ಕಾರ್ಯಕರ್ತರಿಗೆ ಏಕತಾ ಮಂತ್ರವನ್ನು ಬೋಧಿಸಿದೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ತಂತ್ರದಿಂದಾಗಿ ಜೆಡಿಎಸ್ ನ ಜಿಟಿ ದೇವೇಗೌಡರ ಪರ ಬಿಜೆಪಿ ಮತಗಳನ್ನು ವರ್ಗಾವಣೆ ಮಾಡಲು ಅನುಕೂಲವಾಯಿತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಆಂತರಿಕ ಕಚ್ಚಾಟದಿಂದ ಕಾಂಗ್ರೆಸ್ ಸೋಲುವುದನ್ನು ಗಮನಿಸಿದ ಅವರು, ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಜನರು ಬಯಸುತ್ತಿರುವಂತೆ ಎಲ್ಲರೂ ತಮ್ಮ ಭಿನ್ನಾಭಿಪ್ರಾಯಗಳನ್ನು ತೊರೆದು ಪಕ್ಷದ ಅಭ್ಯರ್ಥಿಗಾಗಿ ಕೆಲಸ ಮಾಡಬೇಕು ಎಂದರು.
ಜೆಡಿಎಸ್‌ಗೆ ಯಾವುದೇ ಸಿದ್ಧಾಂತವಿಲ್ಲ, ಬಿಜೆಪಿ ಅಥವಾ ಕಾಂಗ್ರೆಸ್‌ನೊಂದಿಗೆ ಕೈಜೋಡಿಸಿ ಅಧಿಕಾರ ಅನುಭವಿಸಲು ಮಾತ್ರ ಬಯಸುತ್ತಿದೆ ಎಂದು ಆರೋಪಿಸಿದರು. ಇದೆಲ್ಲಾ ಇದ್ದರೂ ಬಿಜೆಪಿ ಮತ್ತು ಜೆಡಿಎಸ್ ಎರಡನ್ನೂ ಸೋಲಿಸಲು ಪಕ್ಷ ಸಿದ್ಧವಾಗಿದೆ ಎಂದು ಹೇಳಿದರು.
ಇದನ್ನೂ ಓದಿ: 'ಈ ಬಾರಿ ಚಾಮುಂಡೇಶ್ವರಿಯಲ್ಲಿ ಜಿ ಟಿ ದೇವೇಗೌಡಗೆ ತಕ್ಕ ಪಾಠ ಕಲಿಸಬೇಕು': ಸಿದ್ದರಾಮಯ್ಯ ಅಂಡ್ ಟೀಮ್ ಲೆಕ್ಕಾಚಾರ!
1999ರಲ್ಲಿ ಕೇವಲ 10, 2002ರಲ್ಲಿ 59 ಸ್ಥಾನ ಗಳಿಸಿದ್ದ ಜೆಡಿಎಸ್ ನಂತರದ ಚುನಾವಣೆಯಲ್ಲಿ 37 ಸ್ಥಾನ ಪಡೆದಿತ್ತು, 2003ರಲ್ಲಿ 59 ಸ್ಥಾನಗಳನ್ನು ಮಾತ್ರ ಗೆದ್ದಿದ್ದ ಜೆಡಿಎಸ್ 120 ಸ್ಥಾನಗಳೊಂದಿಗೆ ಮತ್ತೆ ಹೇಗೆ ಅಧಿಕಾರಕ್ಕೆ ಬರುತ್ತಾರೆ ಎಂದು ಪ್ರಶ್ನಿಸಿದರು.
ಜೆಡಿಎಸ್ ಅಸ್ತಿತ್ವ ಕೇವಲ ಎಂಟು ಜಿಲ್ಲೆಗಳಿಗೆ ಸೀಮಿತವಾಗಿದ್ದು, ಅವರು 20 ರಿಂದ 22 ಸ್ಥಾನಗಳನ್ನು ಗಳಿಸಬಹುದು ಎಂದು ಅವರು ಹೇಳಿದರು. ಕುಮಾರಸ್ವಾಮಿ ಅವರ ಆರೋಪಕ್ಕೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ತಪ್ಪಿನಿಂದಾಗಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಛಿದ್ರವಾಯಿತು.
ಅಮೆರಿಕಾದಲ್ಲಿ ವಾಸ್ತವ್ಯ ಮುಂದುವರಿಸುವ ಬದಲು ರಾಜ್ಯಕ್ಕೆ ಬಂದು ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದರೆ ಸಮ್ಮಿಶ್ರ ಸರ್ಕಾರ ಇನ್ನೂ ಒಂದು ವರ್ಷ ಮುಂದುವರಿಯುತ್ತಿತ್ತು ಎಂದು ಹೇಳಿದ್ದಾರೆ.
ಮಂಡಳಿ ಮತ್ತು ನಿಗಮಗಳಿಗೆ ಅಧ್ಯಕ್ಷರ ನೇಮಕ, ವರ್ಗಾವಣೆ ವಿಚಾರದಲ್ಲಿ ಜೆಡಿಎಸ್, ತನ್ನ ಪಾಲುದಾರ ಕಾಂಗ್ರೆಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಆರೋಪಿಸಿದರು.
ತಮ್ಮನ್ನು ಐದು ಬಾರಿ ಆಯ್ಕೆ ಮಾಡಿದ ಚಾಮುಂಡೇಶ್ವರಿ ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ ಅವರು, ಒಂದು ದಶಕದಿಂದ ಸಂವಹನದ ಕೊರತೆಯಿಂದ, ಹಿಂದಿನ ಚುನಾವಣೆಯಲ್ಲಿ ತಮ್ಮ ವಿರುದ್ಧ ಕೆಲಸ ಮಾಡಲಾಯಿತು. ಜಿ.ಟಿ.ದೇವೇಗೌಡರನ್ನು ಗೆಲ್ಲಿಸುವಂತೆ ಪಕ್ಷದ ಕಾರ್ಯಕರ್ತರನ್ನು ಸಿದ್ದರಾಮಯ್ಯ ಒತ್ತಾಯಿಸಿದರು.
ತಾವು ಸಿಎಂ ಆಗಿದ್ದಾಗ ಮಾಡಿದ ಸಾಮಾಜಿಕ ಕಾರ್ಯಕ್ರಮಗಳು, ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಮತ್ತು ಇತರ ಎಲ್ಲಾ ಸಮುದಾಯಗಳ ಬಡವರಿಗೆ ಅನುಕೂಲ ಮಾಡಿದ್ದಕ್ಕಾಗಿ ಅಹಿಂದ ನಾಯಕನಾದ ನನ್ನನ್ನು ಒಕ್ಕಲಿಗ ಮತ್ತು ಲಿಂಗಾಯತ ವಿರೋಧಿ ಎಂದು ಬ್ರಾಂಡ್ ಮಾಡಿದರು ಎಂದು ತಿರುಗೇಟು ನೀಡಿದರು.