ಸಿಎಂ ಬಸವರಾಜ ಬೊಮ್ಮಾಯಿ-ಸಿದ್ದರಾಮಯ್ಯ 
ರಾಜಕೀಯ

'ನಿನ್ನ ಮನೆ ಹಾಳಾಗ..': ಕಾಂಗ್ರೆಸ್ ಸರ್ಕಾರದ ಯೋಜನೆ ಸ್ಥಗಿತಕ್ಕೆ ಸಿಎಂ ವಿರುದ್ಧ ಸಿದ್ದು ಗರಂ, ಸ್ವಪಕ್ಷೀಯರ ವೈಫಲ್ಯದ ಬಗ್ಗೆಯೂ ತೀವ್ರ ಅಸಮಾಧಾನ!

ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ನಾಯಕರ ವಿರುದ್ಧವೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಹಾಸನ: ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ತಮ್ಮ ಪಕ್ಷದ ನಾಯಕರ ವಿರುದ್ಧವೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ನಾಯಕರು ಜೆಡಿ(ಎಸ್) ಹಾಗೂ ಬಿಜೆಪಿ ನಾಯಕರನ್ನು ಟೀಕಿಸುವಲ್ಲಿ ವಿಫಲರಾಗುತ್ತಿದ್ದಾರೆ ಎಂಬುದು ಸಿದ್ದರಾಮಯ್ಯ ಅವರ ಅಸಮಾಧಾನಕ್ಕೆ ಕಾರಣವಾಗಿದೆ.
 
ಹಾಸನದಲ್ಲಿ ನಡೆದ ಪಕ್ಷದ ಪ್ರಜಾ ಧ್ವನಿ  ಯಾತ್ರೆಯಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ನಾಯಕರ ವೈಫಲ್ಯಗಳು ಹಾಗೂ ಅಕ್ರಮಗಳು ತಿಳಿದಿದ್ದರೂ ಬಹುತೇಕ ಕಾಂಗ್ರೆಸ್ ನಾಯಕರು ಸಾರ್ವಜನಿಕ ರ್ಯಾಲಿಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವುದಿಲ್ಲ ಎಂದು ಹೇಳಿದ್ದಾರೆ. 

ಯಾತ್ರೆಯಲ್ಲಿ ಕಾಂಗ್ರೆಸ್ ಉಸ್ತುವಾರಿ ರಣ್ದೀಪ್ ಸುರ್ಜೆವಾಲ, ಮಾಜಿ ಸಚಿವ ಹೆಚ್ಎಂ ರೇವಣ್ಣ, ಹಾಗೂ ಪರಿಷತ್ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಉಪಸ್ಥಿತರಿದ್ದರು. 

35 ನಿಮಿಷಗಳ ಭಾಷಣದಲ್ಲಿ ಸಿದ್ದರಾಮಯ್ಯ ನಿರಂತರವಾಗಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರನ್ನು ಟೀಕಿಸಿದರು. ತಾವು ಸಿಎಂ ಆಗಿದ್ದಾಗ ಜಾರಿಗೆ ತಂದಿದ್ದ ಯೋಜನೆಗಳನ್ನು ಸಿಎಂ ಬಸವರಾಜ ಬೊಮ್ಮಾಯಿ ಸ್ಥಗಿತಗೊಳಿಸಿದ್ದಾರೆ. ಬಿಜೆಪಿ ಬಡವರ, ರೈತ, ಯುವಕರು, ಮಹಿಳೆಯರು, ಕಾರ್ಮಿಕರು, ದಲಿತರ ವಿರೋಧಿ ಪಕ್ಷವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. 

ಸಿಎಂ ಬೊಮ್ಮಾಯಿ ವಿರುದ್ಧ ವಾಗ್ದಾಳಿ ನಡೆಸಿರುವ ಸಿದ್ದರಾಮಯ್ಯ, ತಮ್ಮ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಯೋಜನೆಗಳನ್ನು ಮುಂದುವರೆಸದ ಬೊಮ್ಮಾಯಿ ಸರ್ಕಾರಕ್ಕೆ "ನಿನ್ನ ಮನೆ ಹಾಳಾಗ" ಎಂದು ಶಪಿಸಿದ್ದು, ಶ್ರೀಮಂತ ಜನರ ಪರವಾಗಿ ಬಿಜೆಪಿ ಸರ್ಕಾರ ಭೂಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದಿದೆ ಎಂದು ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Video

ಮಳೆ, ಚಳಿಯಿಂದಾಗಿ ಕರ್ನಾಟಕದಲ್ಲಿ ಬಿಯರ್ ಮಾರಾಟದಲ್ಲಿ ಶೇ. 19.55ರಷ್ಟು ಕುಸಿತ: ಸಚಿವ ತಿಮ್ಮಾಪುರ

ಪೂಮಾದಿಂದ 300 ಕೋಟಿ ಆಫರ್ ಕೈಬಿಟ್ಟ ಕೊಹ್ಲಿ: ತನ್ನದೇ ಬ್ರ್ಯಾಂಡ್ ಗಾಗಿ ಹೊಸ ಡೀಲ್, 40 ಕೋಟಿ ರೂ. ಹೂಡಿಕೆ!

ಅಪ್ಪಿತಪ್ಪಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಅವರ ಸಂಪುಟಕ್ಕೆ ಸೇರಲ್ಲ: Congress ಶಾಸಕ ಕೆ.ಎನ್ ರಾಜಣ್ಣ

KPS ಶಾಲೆ ತೆರೆಯಲು ಕನ್ನಡ ಮಾಧ್ಯಮ ಶಾಲೆಗಳಿಗೆ ಬೀಗ ಆರೋಪ: 'ಕನ್ನಡ ನನ್ನ ರಕ್ತ'ದಲ್ಲಿದೆ ಎಂದ ಶಿಕ್ಷಣ ಸಚಿವ!

SCROLL FOR NEXT