ಪ್ರಮೋದ್ ಮುತಾಲಿಕ್ 
ರಾಜಕೀಯ

ವಿಧಾನಸಭಾ ಚುನಾವಣೆ: ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಪ್ರಮೋದ್ ಮುತಾಲಿಕ್ ಘೋಷಣೆ

ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಸುದ್ದಿಗೆ ಗ್ರಾಸವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಇದೀಗ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಕಾರ್ಕಳ: ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿ ಸುದ್ದಿಗೆ ಗ್ರಾಸವಾಗಿದ್ದ ಶ್ರೀರಾಮ ಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ಇದೀಗ ತಾವು ಸ್ಪರ್ಧಿಸುವ ಕ್ಷೇತ್ರದ ಕುರಿತು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುವುದಾಗಿ ಪ್ರಮೋದ್ ಮುತಾಲಿಕ್ ಅವರು ಘೋಷಣೆ ಮಾಡಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮುತಾಲಿಕ್ ಅವರು, ಯಾವುದೇ ಕಾರಣಕ್ಕೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ. ಯಾರು ಏನೇ ಒತ್ತಡ ಹಾಕಿದರೂ ಕಾರ್ಕಳ ಕ್ಷೇತ್ರದಲ್ಲೇ ಸ್ಪರ್ಧೆ ಮಾಡುವುದು ನಿಶ್ಚಿತ. ಸಾವಿರಾರು ಕಾರ್ಯಕರ್ತರ ನೋವಿನ ಧ್ವನಿಯಾಗಿ, ಅವರ ಒತ್ತಡದಿಂದ ನಾನು ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದರು.

ನಾನು ಬಿಜೆಪಿ ವಿರೋಧಿಯಲ್ಲ. ನಾನು ಮೋದಿ ಪರವಾಗಿ ಹಿಂದುತ್ವದ ಪರವಾಗಿದ್ದೇನೆ, ಗೆದ್ದ ನಂತರವೂ ನನ್ನ ಬೆಂಬಲ ಬಿಜೆಪಿಗೆ ಇರಲಿದೆ. ನನ್ನ ಸ್ಪರ್ಧೆ ಏನಿದ್ದರೂ ವ್ಯಕ್ತಿಗಳ ವಿರುದ್ಧ, ಭ್ರಷ್ಟರ ವಿರುದ್ದ, ಹಿಂದು ವಿರೋಧಿಗಳ ವಿರುದ್ಧವಾಗಿದೆ ಎಂದು ತಿಳಿಸಿದ್ದಾರೆ.

ಪ್ರಮೋದ್ ಮುತಾಲಿಕ್ ಅವರ ಈ ಘೋಷಣೆಯಿಂದ ಕಾರ್ಕಳ ವಿಧಾನಸಭೆ ಚುನಾವಣಾ ಕಣ ರಂಗೇರಿದೆ. ಇದರಂತೆ ಇಂಧನ ಸಚಿವ ವಿ ಸುನೀಲ್ ಕುಮಾರ್ ಅವರ ಕ್ಷೇತ್ರದಲ್ಲಿ ಇದೀಗ ತ್ರಿಕೋನ ಸ್ಪರ್ಧೆ ಏರ್ಪಟ್ಟಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಫೈನಲ್ ಫೈಟ್: ಸಿದ್ದರಾಮಯ್ಯ ಮನವೊಲಿಕೆಗೆ ರಾಹುಲ್ ಗಾಂಧಿ ಯತ್ನ: ಯತೀಂದ್ರಗೆ DCM ಸ್ಥಾನ, ರಾಜ್ಯಸಭೆ ಆಫರ್?

ಪಟ್ಟಕ್ಕಾಗಿ ಫೈನಲ್ ಫೈಟ್: ಮೂರು ಷರತ್ತುಗಳನ್ನು ಹೈಕಮಾಂಡ್ ಮುಂದಿಟ್ಟ ಡಿಕೆಶಿ; CM ಹುದ್ದೆಗಾಗಿ ಬಿಗಿಪಟ್ಟು!

Indian Stock Market: ಕಚ್ಚಾ ತೈಲ ದರ ಏರಿಕೆ, ರೂಪಾಯಿ ಮೌಲ್ಯ, Sensex ಕುಸಿತ

ರಾಜ್ಯ ಸರ್ಕಾರದ 'ದ್ವೇಷ ಭಾಷಣ' ಮಸೂದೆಗೆ ಅಮಿತ್ ಶಾ ಅಡ್ಡಗಾಲು; ಅಸ್ತಿತ್ವದಲ್ಲಿರುವ ಕಾನೂನೇ ಸಾಕು: ಕೇಂದ್ರ

Mekedatu row: ಕರ್ನಾಟಕದ DPR ತಿರಸ್ಕರಿಸಿ; ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಮನವಿ

SCROLL FOR NEXT