ಪ್ರಮುಖ ಆರೋಪಿ ಆರ್ ಡಿ ಪಾಟೀಲ್ 
ರಾಜಕೀಯ

ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಅಧಿಕಾರಿಗಳು 3 ಕೋಟಿ ಲಂಚ ಕೇಳಿದ್ದರು ಎಂದ ಆರ್ ಡಿ ಪಾಟೀಲ್!

ಪಿಎಸ್ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ಮೂರು ಕೋಟಿ ರೂಪಾಯಿ ಕೇಳಿದ್ದರು.

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರತಿಪಕ್ಷ ಕಾಂಗ್ರೆಸ್, "ಪಿಎಸ್ಐ ಹಗರಣ ಮುಚ್ಚಿಹಾಕಲು ಸಿಐಡಿ ಪೊಲೀಸ್ ಅಧಿಕಾರಿಗಳು ಮೂರು ಕೋಟಿ ರೂಪಾಯಿ ಕೇಳಿದ್ದರು. ನಾನು 76 ಲಕ್ಷ ಕೊಟ್ಟಿದ್ದೇನೆ" ಎಂದು ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ಗಂಭೀರ ಆರೋಪ ಮಾಡಿದ್ದಾನೆ ಎಂದು ಹೇಳಿದೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಪ್ರಾಮಾಣಿಕ, ಪಾರದರ್ಶಕ ತನಿಖೆ ಎಂದು ಡೈಲಾಗ್ ಹೊಡೆದಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರೇ, ನಿಮ್ಮ ಪಾರದರ್ಶಕತೆ ಇದೇನಾ? ಎಂದು ಪ್ರಶ್ನಿಸಿದೆ.

ಸರ್ಕಾರದ ತನಿಖೆಯಲ್ಲಿ ಸತ್ಯ ಸಮಾಧಿಯಾಗುತ್ತಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

PSI ಹಗರಣ, ಸ್ಯಾಂಟ್ರೋ ರವಿ ಹಗರಣಗಳನ್ನು ಮುಚ್ಚಿಹಾಕುವುದು ನಿಶ್ಚಿತ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಳ್ ಅವರೇ ಹೇಳಿದ್ದರು. ಅವರ ಹೇಳಿಕೆಗೆ ಪೂರಕವಾಗಿಯೇ ಘಟನೆಗಳು ನಡೆಯುತ್ತಿವೆ.

ಬೊಮ್ಮಾಯಿ ಅವರ "ಪಾರದರ್ಶಕ, ಪ್ರಾಮಾಣಿಕ" ತನಿಖೆಯ ಅಸಲಿಯತ್ತು ಈಗ ಬಯಲಾಗಿದೆ.

ಸಿಎಂಗೆ ದಮ್ಮು, ತಾಕತ್ತು ಇದ್ದರೆ PSI ಹಗರಣವನ್ನು ನ್ಯಾಯಾಂಗ ತನಿಖೆಗೆ ನೀಡಲಿ ಎಂದು ಕಾಂಗ್ರೆಸ್ ಮತ್ತೊಂದು ಟ್ವೀಟ್ ಮಾಡಿದೆ.

ಪಿಎಸ್‌ಐ ಹಗರಣದ ಪಾರದರ್ಶಕತೆ ಹೇಗಿದೆ ಎಂದು ಹಗರಣದ ಆರೋಪಿಯಿಂದಲೇ ಬೆತ್ತಲಾಗಿದೆ. ನ್ಯಾಯಾಂಗ ತನಿಖೆಗೆ ವಹಿಸಿ ಎಂದು ಕಾಂಗ್ರೆಸ್ ಆಗ್ರಹಿಸಿದಾಗ ಪ್ರಾಮಾಣಿಕ ತನಿಖೆ ನಡೆಯುತ್ತಿದೆ ಎಂಬ ಸೋಗಲಾಡಿ ಸಮರ್ಥನೆ ಮಾಡಿಕೊಳ್ಳುತ್ತಿದ್ದ ಗೃಹ ಸಚಿವ ಆರಗ ಜ್ಞಾನೇಂದ್ರ, ಸಿಐಡಿ ಅಧಿಕಾರಿಗಳ 3 ಕೋಟಿ ಡೀಲಿಂಗ್ ಬಗ್ಗೆ ಈಗ ಮಾತಾಡುತ್ತಿಲ್ಲವೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel