ಪ್ರೀತಂ ಜೆ ಗೌಡ 
ರಾಜಕೀಯ

ಹಾಸನದ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ: ಪ್ರೀತಂ ಜೆ ಗೌಡ

ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಹಾಸನ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಮಂಗಳವಾರ ಹೇಳಿದ್ದಾರೆ.

ಹಾಸನ: ಪಕ್ಷದ ಹೈಕಮಾಂಡ್ ತೀರ್ಮಾನದಂತೆ ಹಾಸನ ಜಿಲ್ಲೆಯ ಯಾವುದೇ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಿದ್ಧ ಎಂದು ಹಾಸನದ ಬಿಜೆಪಿ ಶಾಸಕ ಪ್ರೀತಂ ಜೆ ಗೌಡ ಮಂಗಳವಾರ ಹೇಳಿದ್ದಾರೆ.

ಒಬಿಸಿ ನೌಕರರ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ನಾಲ್ಕೂವರೆ ವರ್ಷಗಳಲ್ಲಿನ ನನ್ನ ಸಾಧನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ಜಿಲ್ಲೆಯ ಜನರು ಅವರನ್ನು ಬೆಂಬಲಿಸುತ್ತಾರೆಂಬ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಕಳೆದ ಆರು ತಿಂಗಳ ಹಿಂದೆ ಹೇಳಿಕೆ ನೀಡಿದ್ದ ಪ್ರೀತಂ ಅವರು, ತಮ್ಮ ವಿರುದ್ಧ ಸ್ಥಳೀಯ ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ರೇವಣ್ಣ ಸ್ಪರ್ಧಿಸಿದರೂ ಗೆಲ್ಲಬಲ್ಲೆ ಎಂದು ಹೇಳಿದ್ದರು.

ಜೆಡಿಎಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಾಗಿದ್ದು, ಅಲ್ಲಿ ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಹಲವು ವರ್ಷಗಳಿಂದ ಸಮುದಾಯಗಳನ್ನು ನಿರ್ಲಕ್ಷಿಸಿರುವ ಜೆಡಿಎಸ್ ಮುಖಂಡರು ಚುನಾವಣೆ ಹತ್ತಿರ ಬಂದಾಗ ಮಾತ್ರ ಕ್ಷೇತ್ರಗಳಿಗೆ ಭೇಟಿ ನೀಡುತ್ತಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಾಬಲ್ಯ ಹೊಂದಿರುವುದರಿಂದ ಇದು ಸಿಂಗಲ್ ಲಿಮಿಟೆಡ್ ಕಂಪನಿಯಾಗಿದೆ. ಕಾಂಗ್ರೆಸ್ ಕೂಡ ರಾಜ್ಯದಲ್ಲಿ ಒಬಿಸಿ, ಎಸ್‌ಸಿ/ಎಸ್‌ಟಿ ಮತ್ತು ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಉಪ ಚುನಾವಣೆ ಫಲಿತಾಂಶ| ಅಸ್ಸಾಂ, ಪ.ಬಂಗಾಳ, ತಮಿಳುನಾಡು, ಪುದುಚೇರಿಯ ಆರು ಕ್ಷೇತ್ರಗಳಲ್ಲಿ ಮತ ಎಣಿಕೆ ಪ್ರಗತಿಯಲ್ಲಿ

ಬಾಲಿವುಡ್ ನಟ ನಾನಾ ಪಾಟೇಕರ್ ನಿಧನಕ್ಕೆ ಬಿಗ್ ಟ್ವಿಸ್ಟ್: ಅಸಹಜ ಸಾವು ಕೇಸ್ ದಾಖಲಿಸಿದ ಗೋವಾ ಪೊಲೀಸರು!

ರೈಲಿನಲ್ಲಿ 'ನನ್ನ ಸುತ್ತಲೂ ಬರೀ ಪುರುಷರೇ ಇದ್ದಾರೆ': ಆಂಧ್ರದಲ್ಲಿ ಶವವಾಗಿ ಪತ್ತೆಯಾದ ಡ್ಯಾನ್ಸರ್‌ ಕೊನೆಯ ಸಂದೇಶ!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ