ಎಚ್.ಡಿ ಕುಮಾರಸ್ವಾಮಿ ಮತ್ತು ಸಿ.ಟಿ ರವಿ 
ರಾಜಕೀಯ

ಭವಾನಿ ಅಕ್ಕ ಬಯಸಿದರೆ ಹಾಸನದಿಂದ ಟಿಕೆಟ್ ಕೊಡಲು ಬಿಜೆಪಿ ಸಿದ್ಧ- ಸಿ.ಟಿ ರವಿ: ದೇಶ ಒಡೆದಷ್ಟು ಸುಲಭವಲ್ಲ ದೇವೇಗೌಡರ ಮನೆ ಒಡೆಯುವುದು: ಎಚ್ ಡಿಕೆ

ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್​ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಹಾಸನ: ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಹಾಸನದಿಂದ ಟಿಕೆಟ್​ ಕೊಡಲು ತಮ್ಮ ಪಕ್ಷ ಸಿದ್ಧವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ.

ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್​ನಲ್ಲಿ ನಡೆಯುತ್ತಿರುವ ಟಿಕೆಟ್ ಫೈಟ್ ಬಗ್ಗೆ ಚಿಕ್ಕಮಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಿ.ಟಿ.ರವಿ ಭವಾನಿ ರೇವಣ್ಣ ಅವರು ಬಿಜೆಪಿಯಿಂದ ಸ್ಪರ್ಧಿಸಲು ಬಯಸಿದರೆ ಟಿಕೆಟ್​ ಕೊಡಲು ಸಿದ್ಧ. ಭವಾನಿ ಅಕ್ಕ ನಮ್ಮ ಪಕ್ಷದಿಂದ ಸ್ಪರ್ಧಿಸಬೇಕೆಂದು ಬಯಸಿದರೆ ಹೊಳೆನರಸೀಪುರ ಕ್ಷೇತ್ರದ ಅಭ್ಯರ್ಥಿಯಾಗಲಿ. ಆ ಕ್ಷೇತ್ರಕ್ಕೆ ಭವಾನಿ ಅವರಿಗಿಂತ ಉತ್ತಮ ಅಭ್ಯರ್ಥಿ ಸಿಗಲ್ಲ ಎಂದು ಹೇಳಿದ್ದಾರೆ.

ಸಿ.ಟಿ ರವಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಲು ಭವಾನಿ ರೇವಣ್ಣರಿಗೆ ಬಿಜೆಪಿ ಟಿಕೆಟ್ ಆಫರ್​ ನೀಡಿರುವ ಬಗ್ಗೆ ರಾಯಚೂರಿನಲ್ಲಿ ಪ್ರತಿಕ್ರಿಯಿಸಿದ ಎಚ್​ಡಿ ಕುಮಾರಸ್ವಾಮಿ ಬಿಜೆಪಿಯವರಿಗೆ ಮನೆ ಒಡೆಯೋ ಅಭ್ಯಾಸವಿದೆ. ಅವರು ದೇಶಾನೇ ಹೊಡೆದವರಿಗೆ ಮನೆ ಒಡೆಯೋದು ಸರಳ, ಆದರೆ ದೇವೇಗೌಡರ ಮನೆಯನ್ನು ಒಡೆಯೋದು ಸುಲಭ ಅಲ್ಲ. ಹೊಳೆ ನರಸೀಪುರದಲ್ಲಿ ಭವಾನಿ ಅವರಿಗೆ ಟಿಕೆಟ್ ಕೊಡಲಿ‌ ಸಂತೋಷ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

ದೇಶಾದ್ಯಂತ H1N1 ಪ್ರಕರಣಗಳ ಏರಿಕೆ: ಸೋಂಕಿನ ಲಕ್ಷಣಗಳು, ಸಾರ್ವಜನಿಕರು ಪಾಲಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳು, IMA ಸಲಹೆ ಏನು?

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

'ಟಾಕ್ಸಿಕ್' ಸಿನಿಮಾ ವಿರುದ್ಧ ಸುಳ್ಳು ಮಾಹಿತಿ ಪ್ರಕಟಿಸದಂತೆ ಕೋರ್ಟ್ ತಡೆಯಾಜ್ಞೆ!