ಸಂಗ್ರಹ ಚಿತ್ರ 
ರಾಜಕೀಯ

ವಿಧಾನಸಭಾ ಚುನಾವಣೆ: ಟಿಕೆಟ್ ಗಾಗಿ 6 ಮಂದಿ ಮಾಜಿ ಕಾರ್ಪೋರೇಟರ್ ಗಳಿಂದ ಲಾಬಿ!

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷದಿಂದ ಟಿಕೆಟ್ ಪಡೆದುಕೊಳ್ಳಲು 6 ಮಂದಿ ಬಿಬಿಎಂ ಮಾಜಿ ಕಾರ್ಪೋರೇಟರ್ ಗಳು ಎಲ್ಲಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಹತ್ತಿರಬರುತ್ತಿದ್ದು, ಈ ನಡುವಲ್ಲೇ ಪಕ್ಷದಿಂದ ಟಿಕೆಟ್ ಪಡೆದುಕೊಳ್ಳಲು 6 ಮಂದಿ ಬಿಬಿಎಂ ಮಾಜಿ ಕಾರ್ಪೋರೇಟರ್ ಗಳು ಎಲ್ಲಿಲ್ಲದ ಕಸರತ್ತುಗಳನ್ನು ನಡೆಸುತ್ತಿದ್ದಾರೆ.

ಜನರ ಮನವೊಲಿಸಲು ಹಾಗೂ ಪಕ್ಷದ ಗಮನವನ್ನು ತಮ್ಮತ್ತ ಸೆಳೆದುಕೊಳ್ಳಲು ಬ್ಯಾನರ್ ಗಳ ಹಾಕುವುದು, ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜಿಸುವುದು, ಭಕ್ತರ ತೀರ್ಥಯಾತ್ರೆಗೆ ಬಸ್ ಗಳ ವ್ಯವಸ್ಥೆ ಮಾಡುವುದು ಸೇರಿದಂತೆ ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ.

2010ರಿಂದ 2015ರ ವರೆಗೆ ಜೋಗುಪಾಳ್ಯ ವಾರ್ಡ್‌ ಪ್ರತಿನಿಧಿಸಿದ್ದ ಮಾಜಿ ಮೇಯರ್‌ ಗೌತಮ್‌ಕುಮಾರ್‌ ಜೈನ್‌ ಬಿಜೆಪಿಯಿಂದ ಟಿಕೆಟ್‌ ಪಡೆದುಕೊಳ್ಳಲು ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈ ಸಂಬಂಧ ಕೇಂದ್ರ ಸರ್ಕಾರದ ಪ್ರಭಾವಿ ಸಚಿವರೊಬ್ಬರನ್ನು ಸಂಪರ್ಕಿಸಿರುವ ಗೌತಮ್ ಕುಮಾರ್ ಜೈನ್ ಅವರು, ಟಿಕೆಟ್ ಗಾಗಿ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಹಲವು ವರ್ಷಗಳಿಂದ ನಾನು ಕ್ಷೇತ್ರದಲ್ಲಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಶಾಂತಿನಗರದ ನಿವಾಸಿಗಳ ಸಮಸ್ಯೆಗಳನ್ನು ಪರಿಹರಿಸುವ ಕೆಲಸ ಮಾಡುತ್ತೇನೆಂದು ಜೈನ್ ಹೇಳಿದ್ದಾರೆ.

ಗೌತಮ್ ಅವರಂತೆ ಜಯನಗರ ವಿಧಾನಸಭಾ ಕ್ಷೇತ್ರದ ಪಟ್ಟಾಭಿರಾಮ ನಗರ ವಾರ್ಡ್‌ನಿಂದ ಎರಡು ಬಾರಿ ಕಾರ್ಪೊರೇಟರ್ ಆಗಿರುವ ಸಿಎಂ ರಾಮಮೂರ್ತಿ ಕೂಡ ಪಕ್ಷದ ಟಿಕೆಟ್ ಗಾಗಿ ಲಾಬಿ  ನಡೆಸುತ್ತಿದ್ದಾರೆ.

ಮೂರು ವರ್ಷಗಳಿಂದ ವಿಧಾನಸಭಾ ಕ್ಷೇತ್ರದಲ್ಲಿ ರಾಮಮೂರ್ತಿಯವರು ಕೆಲಸ ಮಾಡುತ್ತಿದ್ದೇನೆ. 45 ಸಾವಿರ ಜನ ಒಂದೇ ಸಮುದಾಯಕ್ಕೆ ಸೇರಿದವರು ಕ್ಷೇತ್ರದಲ್ಲಿದ್ದು, ನನ್ನ ಜಾತಿ ನನಗೆ ಅನುಕೂಲ ಮಾಡಿಕೊಡಲಿದೆ ಎಂಬ ನಂಬಿಕೆ ಇದೆ ಎಂದು ರಾಮಮೂರ್ತಿಯವರು ಹೇಳಿದ್ದಾರೆ.

“ನಾನು ಜನರ ಮನೆ ಬಾಗಿಲಿಗೆ ಹೋಗುತ್ತಿದ್ದೇನೆ. ಸಾಂಸ್ಕೃತಿಕ. ಉತ್ಸವ ಕಾರ್ಯಕ್ರಮಗಳನ್ನು ನಡೆಸುತ್ತಿದ್ದೇನೆ. ಜತೆಗೆ ಶೇ.10ರಷ್ಟು ಮುಸ್ಲಿಮರು ನನಗೆ ಮತ ಹಾಕುತ್ತಾರೆ, ಒಕ್ಕಲಿಗ ಮತ್ತು ಕ್ರೈಸ್ತ ಸಮುದಾಯದವರಲ್ಲಿಯೂ ನಾನು ಜನಪ್ರಿಯತೆ ಗಳಿಸಿದ್ದೇನೆಂದು ತಿಳಿಸಿದ್ದಾರೆ.

ಸಾರಕ್ಕಿ ವಾರ್ಡ್‌ನಿಂದ ಮಾಜಿ ಮೇಯರ್ ಎಸ್‌ಕೆ ನಟರಾಜ್ ಮತ್ತು ಯಡಿಯೂರಿನಿಂದ ಎನ್‌ಆರ್ ರಮೇಶ್ ಕೂಡ ಜಯನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅದೇ ರೀತಿ ಮತ್ತೊಬ್ಬ ಮಾಜಿ ಮೇಯರ್ ಜಿ.ಪದ್ಮಾವತಿ ಕೂಡ ರಾಜಾಜಿನಗರ ಕ್ಷೇತ್ರಕ್ಕೆ ಲಾಬಿ ನಡೆಸುತ್ತಿದ್ದು, ಟಿಕೆಟ್ ಪಡೆದುಕೊಳ್ಳಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬೆಂಬಲ ನೀಡುತ್ತಿದ್ದಾರೆಂದು ತಿಳಿದುಬಂದಿದೆ.

2018ರ ಚುನಾವಣೆಯಲ್ಲಿ ಸೋಲು ಕಂಡಿದ್ದೆ. ಆದರೆ, ಕಳದ 4 ವರ್ಷಗಳಿಂದ ಜನರಪರವಾದ ಕೆಲಸ ಮಾಡಿದ್ದೇನೆ. ಇತ್ತೀಚೆಗೆ ಜನರಿಗಾಗಿ ತೀರ್ಥಯಾತ್ರೆಗೆ 15ಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆ ಮಾಡಿದ್ದೇನೆ. ಆಟೋರಿಕ್ಷಾಗಳ ಖರೀದಿಸಲು ಬಯಸಿದ್ದವರಿಗೆ ಸಾಲ ಕೊಡಿಸಿದ್ದೇನೆ. ಕಲ್ಯಾಣ ಕಾರ್ಯಕ್ರಮಗಳ ಕೈಗೊಂಡಿದ್ದೇನೆಂದು ಪದ್ಮಾವತಿ ಹೇಳಿದ್ದಾರೆ.

ಶಂಕರ ಮಠದ ವಾರ್ಡ್'ನ ಎನ್ ಶಿವರಾಜು ಅವರು, 2019 ರ ಡಿಸೆಂಬರ್‌ನಲ್ಲಿ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡ ಕೆ ಗೋಪಾಲಯ್ಯ ವಿರುದ್ಧ ಸೋತಿದ್ದ ಮಹಾಲಕ್ಷ್ಮಿ ಲೇಔಟ್‌ಗಾಗಿ ಲಾಬಿ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT