ಬಿ.ಎಸ್ ಯಡಿಯೂರಪ್ಪ 
ರಾಜಕೀಯ

ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ; ಬಿಜೆಪಿ ಋಣ ತೀರಿಸಲು ರಾಜ್ಯಾದ್ಯಂತ ಸಂಚಾರ: ಬಿ.ಎಸ್.ಯಡಿಯೂರಪ್ಪ

ನನಗೀಗ 80 ವರ್ಷ, ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಳಗಾವಿ: ನನಗೀಗ 80 ವರ್ಷ, ಯಾವುದೇ ಕಾರಣಕ್ಕೂ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಬಿ.ಎಸ್‌.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಬಂದಿದ್ದೇನೆ. ನನಗೀಗ 80 ವರ್ಷ ವಯಸ್ಸಾಗುತ್ತಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದೇನೆ. ಆದರೆ, ಪಕ್ಷದ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ’ ಎಂದರು.

‘ಮಗ ರಾಘವೇಂದ್ರ ಸಂಸದ, ಮತ್ತೊಬ್ಬ ಮಗ ವಿಜಯೇಂದ್ರ ಕೂಡ ಬಿಜೆಪಿ ಗಟ್ಟಿಗೊಳಿಸಲು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ನಾನು ರಾಜಕೀಯದಿಂದ ನಿವೃತ್ತಿ ಹೊಂದಿಲ್ಲ. ಈ ಚುನಾವಣೆಯಲ್ಲಿ ಓಡಾಡುತ್ತೇನೆ. ದೇವರು ಶಕ್ತಿ ಕೊಟ್ಟರೆ ಮುಂದಿನ ಚುನಾವಣೆವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತೇನೆ’ ಎಂದು ಹೇಳಿದರು.

‘ರಾಜ್ಯದಲ್ಲಿ ಪಕ್ಷವೂ ನನಗೆ ಸ್ಥಾನಮಾನ, ಅಧಿಕಾರ ಮತ್ತು ಗೌರವ ಕೊಟ್ಟಿದೆ. ಹಾಗಾಗಿ ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ. ಬಿಜೆಪಿ ಋಣ ತೀರಿಸಲು ರಾಜ್ಯಾದ್ಯಂತ ಸಂಚರಿಸುತ್ತೇನೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಸೂರ್ಯಚಂದ್ರ ಇರುವುದು ಎಷ್ಟು ಸತ್ಯವೋ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ’ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಗ್ರೇಟರ್ ನೋಯ್ಡಾದಲ್ಲಿ ಪ್ರವಾಸಿ ಬಸ್‌ಗೆ ಬೆಂಕಿ: 9ಮಂದಿ ಸಜೀವ ದಹನ; ಜಿಗಿದು ಪ್ರಾಣ ಉಳಿಸಿಕೊಂಡ ಜನ

ಸ್ಪರ್ಧೆ ಇರಲಿ, ವೈರತ್ವ ಬೇಡ: Trump ಭೇಟಿಯಾಗುತ್ತಿದ್ದಂತೆ Xi Jinping ಶಾಂತಿ ಮಂತ್ರ; US-China ನಡುವೆ ಶುರುವಾಯ್ತಾ ಹೊಸ ಸ್ನೇಹ ಪರ್ವ?

ಮಧ್ಯಪ್ರಾಚ್ಯದಲ್ಲಿ ಹೆಚ್ಚಿದ ಆತಂಕ; ನಾವಿಕರು, ನಾಗರಿಕ ಮೂಲಸೌಕರ್ಯಗಳ ಮೇಲಿನ ದಾಳಿ ನಿಲ್ಲಲಿ: ಕ್ಷಿಪಣಿ ದಾಳಿ ಬೆನ್ನಲ್ಲೇ ವಿಶ್ವಕ್ಕೆ ಭಾರತ ಖಡಕ್ ಸಂದೇಶ..!

ಬರಗಾಲ ಕುರಿತು ಮುಗಿಯದ ಚರ್ಚೆ: ರಾಜ್ಯ ವಿಧಾನಸಭೆ ಅಧಿವೇಶನ ಒಂದು ದಿನ ವಿಸ್ತರಣೆ

ಪ್ರಧಾನಿ ಮೋದಿಗೆ ಸಿಎಂ ಡಿಕೆ ಶಿವಕುಮಾರ್ ಪತ್ರ: ಬರ ನಿರ್ವಹಣೆಗಾಗಿ ಶೇ. 50ರಷ್ಟು ಮಧ್ಯಂತರ ಪರಿಹಾರ ಬಿಡುಗಡೆಗೆ ಒತ್ತಾಯ!