ಖಾಲಿ ಕುರ್ಚಿಗಳ ಚಿತ್ರ 
ರಾಜಕೀಯ

ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಮುಖ್ಯಮಂತ್ರಿ ಬೊಮ್ಮಾಯಿ: ಕಾಂಗ್ರೆಸ್ ವ್ಯಂಗ್ಯ

ಬಸವರಾಜ ಬೊಮ್ಮಾಯಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಮುಖ್ಯಮಂತ್ರಿ ಎಂದು ಪ್ರತಿಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ  ಚುನಾವಣೆ ಸನ್ನಿಹದಲ್ಲಿರುವಂತೆ, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ. ಇನ್ನೂ ಅಧಿಕೃತವಾಗಿ  ಚುನಾವಣೆ ಘೋಷಣೆಯಾಗದಿದ್ದರೂ ಪ್ರಮುಖ ರಾಜಕೀಯ ಪಕ್ಷಗಳು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿವೆ.

ಆಡಳಿತಾರೂಢ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಹವಣಿಸುತ್ತಿದ್ದರೆ, ಪ್ರತಿಪಕ್ಷ ಕಾಂಗ್ರೆಸ್ ಈ ಬಾರಿ ಗೆದ್ದು ಅಧಿಕಾರ ಹಿಡಿಯಲು ಹವಣಿಸುತ್ತಿದೆ. ಈ ನಿಟ್ಟಿನಲ್ಲಿ ವಾಕ್ ಸಮರ ಬಿರುಸಾಗಿ ಸಾಗಿದ್ದು, ಪರಸ್ಪರ, ಆರೋಪ- ಪ್ರತ್ಯಾರೋಪ, ಟೀಕೆ-ವ್ಯಂಗ್ಯಗಳು ಹೆಚ್ಚಾಗಿವೆ.

ಬಸವರಾಜ ಬೊಮ್ಮಾಯಿ ಖಾಲಿ ಕುರ್ಚಿಗಳಿಗೆ ಭಾಷಣ ಮಾಡುವ ಮುಖ್ಯಮಂತ್ರಿ ಎಂದು ಪ್ರತಿಪಕ್ಷ ಕಾಂಗ್ರೆಸ್ ವ್ಯಂಗ್ಯವಾಡಿದೆ.

ಈ ಕುರಿತ ವಿಡಿಯೋವೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್, ಕನಿಷ್ಠ ನಾಲ್ಕು ಜನಪರ ಕೆಲಸ ಮಾಡದ ಬಿಜೆಪಿ ಜನರ ವಿಶ್ವಾಸ ಕಳೆದುಕೊಂಡಿದೆ ಎನ್ನುವುದಕ್ಕೆ ಪ್ರತಿ ಸಮಾರಂಭದಲ್ಲೂ ಕಾಣುವ ಖಾಲಿ ಕುರ್ಚಿಗಳೇ ಸಾಕ್ಷಿ ಎಂದು ಅಣಕವಾಡಿದೆ.

ಕುರ್ಚಿಗಳಿಗೆ ಜೀವವಿದ್ದಿದ್ದರೆ ಬಿಜೆಪಿಯ ದುರಾಡಳಿತ, ಭ್ರಷ್ಟಾಚಾರಕ್ಕೆ ಬೇಸತ್ತು ಎದ್ದು ಹೊರಡುತ್ತಿದ್ದವು ಎಂದು ಟೀಕಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT