ಹೆಚ್ ಡಿಕೆ, ಡಿಕೆಶಿ ಸಾಂದರ್ಭಿಕ ಚಿತ್ರ 
ರಾಜಕೀಯ

ಕಾಸಿಗಾಗಿ ಪೋಸ್ಟಿಂಗ್ ಆರೋಪ: ದಾಖಲೆ ಕೊಡಲು ಸಿದ್ಧ ಎಂದ ಹೆಚ್ ಡಿಕೆಗೆ ಡಿಸಿಎಂ ಡಿಕೆಶಿ ತಿರುಗೇಟು!

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಂದ ಮೇಲೆ ನಡೆಯುತ್ತಿರುವ ವರ್ಗಾವಣೆ ದಂಧೆ ಹಾಗೂ ಕಾಸಿಗಾಗಿ ಪೋಸ್ಟಿಂಗ್ ಬಗ್ಗೆ ದಾಖಲೆ ಕೊಡಲು ಸಿದ್ಧನಿದ್ದೇನೆ. ತನಿಖೆ ನಡೆಸುವ ದಮ್ಮು ತಾಕತ್ತು ಸರಕಾರಕ್ಕೆ ಇದೆಯಾ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಸವಾಲು ಹಾಕಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾರೋ ಒಬ್ಬರು ತಾಖತ್ತು ಇದ್ದರೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳಿದ್ದಾರೆ. ಅದಕ್ಕೆ ಇದೇ ನನ್ನ ಉತ್ತರ. ನನ್ನ ಹತ್ತಿರ ದಾಖಲೆಗಳೂ ಇವೆ ಎಂದರು. ದಾಖಲೆ ಕೊಡುವ ದಮ್ಮು, ತಾಖತ್ತು ನನಗೆ ಇದೆ. ತನಿಖೆ ಮಾಡುವ ದಮ್ಮು, ತಾಖತ್ತು ಇವರಿಗೆ ಇದೆಯಾ? ಎಂದು ಅವರು ಖಾರವಾಗಿ ಪ್ರಶ್ನಿಸಿದರು.

ಈ ಸರಕಾರ ಇನ್ನೂ ಹನಿಮೂನ್ ಪೀರಿಯಡ್ ನಲ್ಲಿ ಇದೆ ಎಂದು  ಕಾಂಗ್ರೆಸ್‌ ನವರು ಹೇಳುತ್ತಿದ್ದಾರೆ. ಸರಕಾರಕ್ಕೆ ಐದು ಆರು ತಿಂಗಳಾದರೂ ಸಮಯ ಕೊಡಬೇಡವೇ ಎಂದು ಕೆಲವರು ಕೇಳುತ್ತಿದ್ದಾರೆ. ಹನಿಮೂನ್ ಪೀರಿಯಡ್ ನಲ್ಲಿದ್ದರೆ ಈಗೆಲ್ಲಾ ಮಾಡುತ್ತಾರೆಯೇ? ಹನಿಮೂನ್ ಪಿರಿಯಡ್ ನಲ್ಲೇ ಹೀಗಾದರೆ ಮುಂದಿರುವ ಪೀರಿಯಡ್ ಗಳ ಕಥೆ ಏನು? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ನಾಯಕರು ನನ್ನ ಆರೋಪಕ್ಕೆ ದಾಖಲೆ ಕೇಳ್ತಿದ್ದಾರೆ, ಅವರ ಕನಸು ಈಡೇರಿಸುತ್ತೇನೆ. ದಾಖಲೆ ಕೊಟ್ಟರೆ ವರ್ಗಾವಣೆ ದಂಧೆ ನಡೆದಿದೆ ಎಂದು ಆರೋಪಿಸಲಾಗಿರುವ ಮಂತ್ರಿಯನ್ನು ವಜಾ ಮಾಡ್ತಿರಾ? ಆ ಮಂತ್ರಿಯನ್ನು ವಜಾ ಮಾಡುವ ತಾಕತ್ ಇವರಿಗೆ ಇದೆಯಾ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ, ದಾಖಲೆಯನ್ನು ಸದನದಲ್ಲಿಯೇ ಇಡುತ್ತೇನೆ. ಅದನ್ನು ಕೊಟ್ಟರೆ ಈ ಸರ್ಕಾರ ಎಲ್ಲಿರುತ್ತೊ ಗೊತ್ತಿಲ್ಲ. ಸುಮ್ಮನೆ ಸ್ವಲ್ಪ ದಿನ ಈ ಸರಕಾರ ನೆಮ್ಮದಿಯಾಗಿರಲಿ ಎಂದು ಬಿಟ್ಟಿದೀನಿ. ಸರಕಾರ ತಿದ್ದಿಕೊಂಡರೆ ಒಳ್ಳೆಯದು ಎಂದು ಬಿಟ್ಟಿದೀನಿ ಅಷ್ಟೇ ಎಂದರು. 

ಕಳೆದ  ಎರಡು ವರ್ಷಗಳಲ್ಲಿ ಕಾಂಗ್ರೆಸ್ ಪಕ್ಷದ ಕೊನೆಪಕ್ಷ ಒಂದು ದಾಖಲೆಯನ್ನೂ ಬಿಡುಗಡೆ ಮಾಡಿಲ್ಲ. ಮಂತ್ರಿಯೊಬ್ಬರು ನಾನು ದಾಖಲೆ ಸಮೇತ ಆರೋಪ ಮಾಡಿದ್ದೆ ಎಂದು ಹೇಳಿಕೆ ನೀಡಿದ್ದಾರೆ. ಅದು ಯಾವ ದಾಖಲೆ ಕೊಟ್ಟಿದ್ದಾರೆ, ಯಾವ ತನಿಖೆ ನಡೆದಿದೆ ನಡೆದಿದೆ ಎನ್ನುವುದರ ಬಗ್ಗೆ ಮಾಹಿತಿ ಕೊಡಲಿ. ಚುನಾವಣೆ ಸಮಯದಲ್ಲಿ ಇವರು  ಭ್ರಷ್ಟಾಚಾರದ ಬಗ್ಗೆ ಪುಟಗಟ್ಟಲೆ ಜಾಹಿರಾತು ಕೊಟ್ಟರು. ಆದರೆ, ಒಂದು ದಾಖಲೆಯನ್ನಾದರೂ ಬಿಡುಗಡೆ ಮಾಡಿದಾರಾ? ಸುಳ್ಳು ದಾಖಲೆ ಹೇಳಿ ಅಧಿಕಾರಕ್ಕೆ ಬಂದಿದೀರಾ? ಎಂದು ಅವರು ಪ್ರಶ್ನಿಸಿದರು.

ನನ್ನ ಅವಧಿಯಲ್ಲಿ ನಡೆದ ವರ್ಗಾವಣೆಗಳ ಬಗ್ಗೆಯೂ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ನನ್ನ ಕಾಲದಲ್ಲಿ ನಡೆದ ವರ್ಗಾವಣೆಯನ್ನು ತನಿಖೆ ಮಾಡಲಿ. ಐದು ವರ್ಷ ಕಾಂಗ್ರೆಸ್ ಪಕ್ಷದ ಪೂರ್ಣ ಸರಕಾರ ಇತ್ತಲ್ಲ, ಆ ಸರಕಾರದ ಅವಧಿಯಲ್ಲಿ ನಡೆದ ವರ್ಗಾವಣೆಗಳ ಕುರಿತು ತನಿಖೆ ನಡೆಸಲಿ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಕಾಂಗ್ರೆಸ್ ನವರು ಹಗಲು ದರೋಡೆ ಗೆ ಇಳಿದಿದ್ದಾರೆ. ವರ್ಗಾವಣೆ ದಂಧೆಗೆ ಹಣ ನಿಗದಿ ಮಾಡಿದ್ದಾರೆ ಅಂತ ಗೊತ್ತು. ಪ್ರತಿ ಹುದ್ದೆಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ದಾರೆ. ಸಮಯ ಬಂದಾಗ ದಾಖಲೆ ಕೊಟ್ಟೆ ಕೊಡುತ್ತೇನೆ. ನಾನು ಎಲ್ಲಿಯೂ ಓಡಿ ಹೋಗುವುದಿಲ್ಲ ಎಂದರು.

ನಾನು ಕೊಡುವ ದಾಖಲೆ ನೋಡಿದ ಮೇಲೆ ಯಾವ ರೀತಿ ಕ್ರಮ ಕೈಗೊಳ್ಳುತ್ತೀರಿ ಅಂತ ಮೊದಲು ಅವರು ಹೇಳಲಿ. ಈ ಬಗ್ಗೆ ಪ್ರಶ್ನೆ ಎತ್ತಿದವರು ಉತ್ತರ ಕೊಡಲಿ ಎಂದ ಅವರು; ಕೆಲವರು ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ. ಈಗಾಗಲೇ ಡಿಕೆ ಶಿವಕುಮಾರ್ ಅವರು ಟವೆಲ್ ಹಾಕಿದ್ದಾರೆ ಎಂದು ಅವರು ಟಾಂಗ್ ನೀಡಿದರು.

ಇನ್ನ ಕುಮಾರಸ್ವಾಮಿ ಆರೋಪ ಕುರಿತಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಚುನಾವಣೆಯಲ್ಲಿ ಕಡಿಮೆ ನಂಬರ್ ಬಂದಿದೆ ಎಂಬ ಬೇಸರದಲ್ಲಿ ಕುಮಾರಸ್ವಾಮಿಯವರು ಮಾತನಾಡುತ್ತಿದ್ದಾರೆ. ಹೀಗಾಗಿ ಅವರ ಮಾತುಗ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಅವರ ಆರೋಪ ಸತ್ಯಕ್ಕೆ ದೂರವಾದುದು. ಸರ್ಕಾರದ ಯಾವುದೇ ಕಚೇರಿಯಲ್ಲಿ ಹಣ ಪಡೆದು ಕೆಲಸ ನೀಡಲಾಗುತ್ತಿಲ್ಲ. ಅವರ ಬಳಿ ದಾಖಲೆ ಇದ್ದರೆ ಲೋಕಾಯುಕ್ತ ಅಧಿಕಾರಿಗಳಿಗೆ ದೂರು ನೀಡಲಿ ತನಿಖೆ ಮಾಡಿಸಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅದಕ್ಕೆ ಅವಕಾಶವಿದೆ" ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತಕ್ಷಣ ದಾಳಿ ನಿಲ್ಲಿಸುವಂತೆ ಟ್ರಂಪ್ ಆದೇಶಕ್ಕೆ ಡೋಂಟ್ ಕೇರ್: ಇಸ್ರೇಲ್ ದಾಳಿಗೆ ಇಬ್ಬರು ಮಕ್ಕಳು ಸೇರಿ ಏಳು ಮಂದಿ ಪ್ಯಾಲೆಸ್ತೀನಿಯರು ಬಲಿ

ಅಸ್ಥಿರಂಧ್ರತೆ (Osteoporosis) ಚಿಕಿತ್ಸೆಯಲ್ಲಿ ಹೊಸ ಬೆಳಕು: ಮೂಳೆ ಬಲದ ಮೂಲ ರಹಸ್ಯ ಪತ್ತೆ (ಕುಶಲವೇ ಕ್ಷೇಮವೇ)

1st test: ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ ಮತ್ತು 140 ರನ್ ಗಳ ಭರ್ಜರಿ ಜಯ

Israel -Gaza Conflict: ಒತ್ತೆಯಾಳುಗಳ ಬಿಡುಗಡೆಗೆ ಹಮಾಸ್‌ ಒಪ್ಪಿಗೆ; ಶಾಂತಿ ಒಪ್ಪಂದದಲ್ಲಿ ಮಹತ್ವದ ಬೆಳವಣಿಗೆ, ಟ್ರಂಪ್ ನಡೆಗೆ ಪ್ರಧಾನಿ ಮೋದಿ ಸ್ವಾಗತ

'ದುರ್ಗಾ ಪೂಜೆ ವೇಳೆ ನಟಿ Kajol ಖಾಸಗಿ ಭಾಗ ಮುಟ್ಟಿ ಅನುಚಿತ ವರ್ತನೆ'; ಸಾಮಾಜಿಕ ಜಾಲತಾಣದಲ್ಲಿ Video ವೈರಲ್, ಅಸಲೀಯತ್ತೇನು?

SCROLL FOR NEXT