ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

'ಪದೇ ಪದೇ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ?'

ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ.

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ.

ಅದರಂತೆ ಇಂದು ಸದನದಲ್ಲಿ ಪದೇ ಪದೇ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು.

ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.

ಸದನ ಆರಂಭವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಅಶೋಕ್​ಗೆ ಕಿಚಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

SCROLL FOR NEXT