ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ 
ರಾಜಕೀಯ

ಧಾರವಾಡದಲ್ಲಿ ಆಪರೇಷನ್ ಹಸ್ತ ಚುರುಕು: ಯಡಿಯೂರಪ್ಪ ಸಂಬಂಧಿಗೆ ಜಗದೀಶ್ ಶೆಟ್ಟರ್ ಗಾಳ!

ಲೋಕಸಭೆ ಚುನಾವಣೆ ಹಿನ್ನೆಲೆ ಸದ್ದಿಲ್ಲದೆ ಆಪರೇಷನ್ ಆರಂಭಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್​ನತ್ತ ಸೆಳೆಯುತ್ತಿದ್ದಾರೆ

ಧಾರವಾಡ: ಲೋಕಸಭೆ ಚುನಾವಣೆ ಹಿನ್ನೆಲೆ ಸದ್ದಿಲ್ಲದೆ ಆಪರೇಷನ್ ಆರಂಭಿಸಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ಪ್ರಮುಖ ನಾಯಕರನ್ನು ಕಾಂಗ್ರೆಸ್​ನತ್ತ ಸೆಳೆಯುತ್ತಿದ್ದಾರೆ. ಶೆಟ್ಟರ್ ಜೊತೆ ಒಂದು ಸುತ್ತಿನ ಮಾತುಕತೆ ಮಾಡಿರುವ ಮಾಜಿ ಶಾಸಕ ಚಿಕ್ಕನಗೌಡರ್, ನಿನ್ನೆ ತಮ್ಮ ನಿವಾಸದಲ್ಲಿ ಕರೆದ ಆಪ್ತರ ಸಭೆಯಲ್ಲಿ ಕಾಂಗ್ರೆಸ್ ಸೇರುವುದಾಗಿ ಘೋಷಣೆ ಮಾಡಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಸಂಬಂಧಿ ಚಿಕ್ಕನಗೌಡರ್‌ಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿತ್ತು‌. ಹೀಗಾಗಿ ಬಿಜೆಪಿಗೆ ಗುಡ್‌ಬೈ ಹೇಳಿದ್ದ ಅವರು ಪಕ್ಷೇತರರಾಗಿ ಸ್ಪರ್ಧಿಸಿ ಸೋಲನ್ನಪ್ಪಿದ್ದರು. ಈಗ ಬಿಜೆಪಿಗೆ ಶಾಕ್ ಕೊಡಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಇದು ಧಾರವಾಡ ಜಿಲ್ಲೆಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅಪಾರ ಬೆಂಬಲಿಗರೊಂದಿಗೆ ಕೈ ಹಿಡಿಯುವುದಾಗಿ ಘೋಷಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಆಪರೇಷನ್ ಹಸ್ತ ಚುರುಕು ಪಡೆದಿದ್ದು ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಸಂಚಲನ ಮೂಡಿಸಿದೆ.

ಈಗ ತಮ್ಮೆಲ್ಲಾ ಬೆಂಬಲಿಗರ ಜೊತೆ ಕಾಂಗ್ರೆಸ್ ಸೇರ್ಪಡೆಯಾಗಲು ಸಜ್ಜಾಗಿದ್ದಾರೆ. ಅದರಗುಂಚಿಯಲ್ಲಿ ಬೆಂಬಲಿಗರ ಸಭೆ ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ. ಸಭೆಯನ್ನು ಉದ್ದೇಶಿಸಿ ಮಾತನಾಡಿರುವ ಅವರು, ನಾನು ಸ್ವಾಭಿಮಾನದಿಂದ ಪಕ್ಷೇತರವಾಗಿ ಚುನಾವಣೆ ಸ್ಪರ್ಧಿಸಿದ್ದೆ.

ಹಣದ ಮುಂದೆ ಸ್ವಾಭಿಮಾನ ಸೋತಿದೆ. ಕಾದು ನೋಡಿ ಕುಂದಗೋಳದಲ್ಲಿ ಮಧ್ಯಂತರ ಚುನಾವಣೆ ಆಗುತ್ತೆ. ಮುಂಬರುವ ಚುನಾವಣೆಗಳಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡೋಣ ಎನ್ನುವ ಮೂಲಕ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಮೂಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್