ಪ್ರಹ್ಲಾದ್ ಜೋಶಿ 
ರಾಜಕೀಯ

ರಾಜ್ಯವನ್ನು ಸಿದ್ದರಾಮಯ್ಯ ಸಾಲದ ಕೂಪಕ್ಕೆ ತಳ್ಳಿ ತಮ್ಮ ರಾಜಕೀಯ ಚಟ ತೀರಿಸಿಕೊಳ್ಳುತ್ತಿದ್ದಾರೆ: ಪ್ರಹ್ಲಾದ್ ಜೋಶಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿ ತನ್ನ ರಾಜಕೀಯ ಚಟವನ್ನು ತೀರಿಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. 

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿ ತನ್ನ ರಾಜಕೀಯ ಚಟವನ್ನು ತೀರಿಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. 

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಸಂಪೂರ್ಣ ತುಷ್ಟಿಕರಣ ಬಜೆಟ್ ಆಗಿದ್ದು, ಇದು ಅಭಿವೃದ್ಧಿ ಪೂರಕವಾದ ಬಜೆಟ್ ಅಲ್ಲ, ಬದಲಾಗಿ ಮೂಲಭೂತ ಸೌಕರ್ಯಗಳನ್ನು ನೆಲಕಚ್ಚುವ ಬಜೆಟ್ ಇದಾಗಿದೆ. 

ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ್ದಾರಾ? ಅಥವಾ ಬಿಜೆಪಿಯನ್ನು ಟೀಕೆ ಮಾಡಿದ್ದಾರಾ ಅರ್ಥವಾಗುತ್ತಿಲ್ಲ, ಬಜೆಟ್ ಮಂಡನೆಗಿಂತ ಬಿಜೆಪಿಯನ್ನು ಟೀಕೆ ಮಾಡಿದ್ದೆ ಹೆಚ್ಚು. ದೇಶದಲ್ಲಿ ಕೊವಿಡ್ ವ್ಯಾಕ್ಸಿನ್ ತಯಾರಿಸಿ ಎಲ್ಲರಿಗೂ ನೀಡಿದ್ದೇವೆ.

ವಿದೇಶಗಳಿಗೂ ಕೊಟ್ಟಿದ್ದನ್ನು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡುತ್ತಾರೆ. ಸಿದ್ದರಾಮಯ್ಯ ಭಾರತ ದ್ವೇಷಿ ರಾಹುಲ್ ಗಾಂಧಿ ರೀತಿ ಮಾತನಾಡುತ್ತಿದ್ದಾರೆ. ಆಸ್ತಿ ದರ ಏರಿಕೆ ಮಾಡಿದ್ದಾರೆ, ಅಬಕಾರಿ ಟಾರ್ಗೆಟ್ ಕೊಟ್ಟಿದ್ದಾರೆ. ಎಲ್ಲರಿಗೂ ಮದ್ಯಪಾನ ಮಾಡಿಸಿ ಹಣ ತಂದುಕೊಡಿ ಅನ್ನುತ್ತಾರೆ.  ಎನ್​​ಇಪಿಗೆ ಮೊದಲು ಕಾಂಗ್ರೆಸ್ ಒಪ್ಪಿಗೆ ನೀಡಿತ್ತು ಆದರೆ ಇವತ್ತು ಕೈ ಬಿಟ್ಟಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಹಿಟ್ಲರ್ ರೀತಿಯಲ್ಲಿ ಆಡಳಿತ: ಯುವ ಶಕ್ತಿಗೆ ಬಜೆಟ್‌ನಲ್ಲಿ ನಯಾಪೈಸೆ ಹಣ ಇಟ್ಟಿಲ್ಲ, ಗೃಹಲಕ್ಷ್ಮಿಗೆ ಹಣ ಇಟ್ಟಿದ್ದಾರೆ. ‌ರೈಲ್ವೆ ಯೋಜನೆಗೆ ರಾಜ್ಯದ ಪಾಲಿನ ಅನುದಾನ ಮೀಸಲಿಟ್ಟಿಲ್ಲ. ಹತ್ತು ಕೆಜಿ ಅಕ್ಕಿ ಬಗ್ಗೆ ಬಜೆಟ್ನಲ್ಲಿ ಹೇಳಿದ್ದಾರೆ. ಈ ಪೈಕಿ ಐದು ಕೆಜಿ ಕೇಂದ್ರ ಸರ್ಕಾರದಿದೆ. ಅವರೇನು ಕೊಡುತ್ತಾರೆ ಎಂಬುವುದನ್ನು ಹೇಳುತ್ತಿಲ್ಲ. ಇದನ್ನು ನೋಡಿದರೇ ಸಿದ್ದರಾಮಯ್ಯ ಅವರು ಹಿಟ್ಲರ್ ರೀತಿಯಲ್ಲಿ ಆಡಳಿತ ಮಾಡಲು ತಿರ್ಮಾನ ಮಾಡಿದ್ದಾರೆ ಎಂದು ಹರಿಹಾಯ್ದರು.

ರಾಹುಲ್ ಗಾಂಧಿ ಅಪ್ರಬುದ್ದರು: ರಾಹುಲ್ ಗಾಂಧಿಗೆ ಕೋರ್ಟ್‌ನಲ್ಲಿ ಮತ್ತೊಂದು ಹಿನ್ನಡೆಯಾಗಿದೆ. ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಪ್ರಬುದ್ಧರಿದ್ದಾರೆ. ಟ್ರಯಲ್ ಕೋರ್ಟ್ ಶಿಕ್ಷೆ ನೀಡಿತ್ತು ನಂತರ ಜಿಲ್ಲಾ ಮತ್ತು ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದರು. ಆದರೆ ಹೈಕೋರ್ಟ್ ಶಿಕ್ಷೆ ರದ್ದುಗೊಳಿಸಲು ನಿರಾಕರಣೆ ಮಾಡಿದೆ. ಆದರೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ ಇವರ ಹೋರಾಟ ಯಾರ ವಿರುದ್ಧ ಹೈಕೋರ್ಟ್ ವಿರುದ್ಧನಾ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT