ದಿನೇಶ್ ಗುಂಡೂರಾವ್ 
ರಾಜಕೀಯ

ಬಿಜೆಪಿಯ ಬಿ ಟೀಂ ಜೆಡಿಎಸ್ ಎಂಬುದನ್ನು ಸಾಬೀತುಪಡಿಸಲು ಹೆಚ್ ಡಿಕೆ ಹೊರಟಿದ್ದಾರೆ: ದಿನೇಶ್ ಗುಂಡೂರಾವ್

ಲೋಕಸಭೆ ಚುನಾವಣೆಯ 2024ರಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿವಿದಿದ್ದಾರೆ.

ಬೆಂಗಳೂರು: ಲೋಕಸಭೆ ಚುನಾವಣೆಯ 2024ರಲ್ಲಿ ಬಿಜೆಪಿ, ಜೆಡಿಎಸ್​ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿವಿದಿದ್ದಾರೆ.

‘ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು, ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೆಚ್ ಡಿಕೆ ಹೊರಟಿದ್ದಾರೆ. ಜೆಡಿಎಸ್​​ಗೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ ಎಂದಿದ್ದಾರೆ.

ಸರಣಿ ಟ್ವೀಟ್ ಮೂಲಕ ಟೀಕಿಸಿರುವ ಅವರು, ಮೈತ್ರಿ ಮಾಡಿಕೊಳ್ಳುವ ಬದಲು ಬಿಜೆಪಿ ಜೊತೆ ಜೆಡಿಎಸ್ ವಿಲೀನವಾಗಲಿ, ಆಗ ಅವರೇ ವಿಪಕ್ಷ ನಾಯಕರಾಗಬಹುದು, ಈ ಮೂಲಕವಾದರೂ HDKಯವರ ಸುಳ್ಳು ಜಾತ್ಯಾತೀತತೆಯ ನಕಲಿ‌ ಶ್ಯಾಮನ ಅವತಾರ ಕೊನೆಯಾಗಲಿ‌ ಎಂದು ಟೀಕಿಸಿದ್ದಾರೆ. 

JDS ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ BJP ಜೊತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ HDK ಎಳ್ಳು‌ ನೀರು ಬಿಟ್ಟಿದ್ದರು. ಆಗಲೇ JDSನ ಅವನತಿ ಶುರುವಾಗಿದ್ದು. 2004ರಲ್ಲಿ 59 ಸ್ಥಾನ ಗೆದ್ದಿದ್ದ JDS ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!