ವಿ ಸೋಮಣ್ಣ 
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ಮಾಜಿ ಸಚಿವ ವಿ ಸೋಮಣ್ಣ ಕಣ್ಣು; ಕೇಸರಿ ಪಕ್ಷಕ್ಕೆ ಮತ್ತೊಂದು ಸಂಕಷ್ಟ!

ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು, ತನಗೆ ಸ್ಥಾನ ನಿರಾಕರಿಸಿದರೆ, ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋತಿರುವುದರಿಂದ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಚಿವ ವಿ. ಸೋಮಣ್ಣ ಅವರು, ತನಗೆ ಸ್ಥಾನ ನಿರಾಕರಿಸಿದರೆ, ಬೆಂಬಲಿಗರೊಂದಿಗೆ ಸಮಾಲೋಚನೆ ನಡೆಸಿದ ನಂತರ ಮುಂದಿನ ಕ್ರಮದ ಬಗ್ಗೆ ನಿರ್ಧರಿಸುವುದಾಗಿ ಭಾನುವಾರ ಹೇಳಿದ್ದಾರೆ.

ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದು ಏಳುಬೀಳುಗಳನ್ನು ಅರಿತಿದ್ದೇನೆ. ನನ್ನನ್ನು ರಾಜ್ಯ ಬಿಜೆಪಿ ಅಧ್ಯಕ್ಷರನ್ನಾಗಿ ಮಾಡಿದರೆ, ಹಗಲಿರುಳು ಶ್ರಮಿಸಿ ಪಕ್ಷವನ್ನು ಸಂಘಟಿಸುತ್ತೇನೆ. ಇಲ್ಲವಾದಲ್ಲಿ ಬೆಂಬಲಿಗರ ಸಭೆ ನಡೆಸಿ, ಮುಂದಿನ ತೀರ್ಮಾನವನ್ನು ತೆಗೆದುಕೊಳ್ಳುತ್ತೇನೆ ಎಂದು ಬಿಜೆಪಿ ಹೈಕಮಾಂಡ್‌ಗೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ.

ಸದ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮೂರು ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ಆ ಸ್ಥಾನಕ್ಕೆ ಮತ್ತೊಬ್ಬರನ್ನು ಪಕ್ಷವು ಇನ್ನು ಘೋಷಿಸಿಲ್ಲ. ಇತ್ತೀಚೆಗಷ್ಟೇ ಸೋಮಣ್ಣ ಅವರು ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದರು.

ಎರಡು ದಶಕಗಳಿಂದ ಬೆಂಗಳೂರು ದಕ್ಷಿಣದಿಂದ ಒಂದು ನಿರ್ದಿಷ್ಟ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳನ್ನು ಪಕ್ಷವು ಯಾವಾಗಲೂ ಕಣಕ್ಕಿಳಿಸುತ್ತಿದೆ. ಆದ್ದರಿಂದ ಇತರ ಸಮುದಾಯಗಳ ನಾಯಕರಿಗೆ ಅವಕಾಶ ನೀಡಬೇಕು ಎಂದು ಸೋಮಣ್ಮ ಹೇಳಿದ್ದಾರೆ. 

ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಲೋಕಸಭೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. 72 ವರ್ಷದ ಲಿಂಗಾಯತ ಸಮುದಾಯದ ನಾಯಕರಾಗಿರುವ ಸೋಮಣ್ಣ ಅವರು ಮೇ 10ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ ವರುಣಾದಿಂದ ಸಿದ್ದರಾಮಯ್ಯ ವಿರುದ್ಧ ಹಾಗೂ ಚಾಮರಾಜನಗರದಿಂದ ಮಾಜಿ ಸಚಿವ ಸಿ ಪುಟ್ಟರಂಗಶೆಟ್ಟಿ ವಿರುದ್ಧ ಸ್ಪರ್ಧಿಸಿ ಸೋಲು ಕಂಡಿದ್ದಾರೆ. ಉಭಯ ಕ್ಷೇತ್ರಗಳಲ್ಲಿನ ಸೋಲು ಅವರನ್ನು ಹತಾಶರನ್ನಾಗಿ ಮಾಡಿದೆ.

ರಾಜ್ಯದಲ್ಲಿನ ಪಕ್ಷದ ಪ್ರಮುಖ ನಾಯಕರಲ್ಲಿನ ಒಗ್ಗಟ್ಟಿನ ಕೊರತೆಯೇ ಸೋಮಣ್ಣ ಅವರ ಸೋಲಿಗೆ ಕಾರಣ ಎನ್ನಲಾಗುತ್ತಿದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಲು ಬೆಂಗಳೂರಿನ ಗೋವಿಂದರಾಜನಗರ ಕ್ಷೇತ್ರವನ್ನು 'ತ್ಯಾಗ' ಮಾಡಿದ್ದರಿಂದ, ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ನೇಮಿಸುವ ಮೂಲಕ ಪಕ್ಷವು ತನಗೆ ಈ ಮೂಲಕ ತನಗಾದ ನಷ್ಟವನ್ನು ತುಂಬಿಕೊಡಬೇಕು ಎಂದು ಸೋಮಣ್ಣ ಹೇಳಿದ್ದಾರೆ.

ವಿಧಾನಸಭೆ ಚುನಾವಣೆಗೂ ಮುನ್ನ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜತೆ ಮಾತುಕತೆ ನಡೆಸಿದ ಸೋಮಣ್ಣ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ವಲಯದಿಂದ ದಟ್ಟವಾಗಿದ್ದವು. ಆದರೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮಧ್ಯ ಪ್ರವೇಶಿಸಿ ಸೋಮಣ್ಣ ಅವರನ್ನು ಬಿಜೆಪಿಯಲ್ಲಿಯೇ ಇರುವಂತೆ ಮನವೊಲಿಸಲು ದೆಹಲಿಗೆ ಕರೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT