ಹೆಚ್ ಡಿ ಕುಮಾರಸ್ವಾಮಿ 
ರಾಜಕೀಯ

ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ, ಆ ಬಗ್ಗೆ ತಲೆ ಕೆಡಿಸಿಕೊಳ್ಳೋದು ಇಲ್ಲ, ನೋಡೋಣ ಮುಂದೇನಾಗುತ್ತದೆ: ಹೆಚ್ ಡಿ ಕುಮಾರಸ್ವಾಮಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ನಮಗೆ ಆಹ್ವಾನವನ್ನು ನೀಡಿಲ್ಲ, ನಾಳೆಯ ಎನ್ ಡಿಎ ಮೈತ್ರಿಕೂಟ ಸಭೆಗೂ ಆಹ್ವಾನವಿಲ್ಲ, ನೋಡೋಣ ಮುಂದೆ ಏನಾಗುತ್ತದೆ ಎಂದು, ನಾವು ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ ಎಂದಿದ್ದಾರೆ.

ಬೆಂಗಳೂರು: ಎನ್ ಡಿಎ ಮೈತ್ರಿಕೂಟವನ್ನು ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮಣಿಸಲು ಮಹಾ ಘಟಬಂಧನ ಹೆಸರಿನಲ್ಲಿ ರಾಷ್ಟ್ರಮಟ್ಟದ ಮತ್ತು ರಾಜ್ಯಗಳ ಘಟಾನುಘಟಿ ನಾಯಕರ ಸಭೆ ಇಂದು ಮತ್ತು ನಾಳೆ ಬೆಂಗಳೂರಿನ ಪ್ರತಿಷ್ಠಿತ ಹೊಟೇಲ್ ನಲ್ಲಿ ನಡೆಯುತ್ತಿದ್ದು ಸಭೆಗೆ ಕರ್ನಾಟಕದ ಪ್ರಾದೇಶಿಕ ಪಕ್ಷ ಜಾತ್ಯತೀತ ಜನತಾದಳ(JDS) ಭಾಗವಹಿಸುತ್ತಿಲ್ಲ, ಅದಕ್ಕೆ ಆಹ್ವಾನ ನೀಡಿಲ್ಲ ಎಂದೆಲ್ಲ ಸುದ್ದಿಯಾಗಿತ್ತು.

ಈ ಬಗ್ಗೆ ಸ್ವತಃ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಇಂದು ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಪಕ್ಷಗಳ ಸಭೆಗೆ ನಮಗೆ ಆಹ್ವಾನವನ್ನು ನೀಡಿಲ್ಲ, ನಾಳೆಯ ಎನ್ ಡಿಎ ಮೈತ್ರಿಕೂಟ ಸಭೆಗೂ ಆಹ್ವಾನವಿಲ್ಲ, ನೋಡೋಣ ಮುಂದೆ ಏನಾಗುತ್ತದೆ ಎಂದು, ನಾವು ಯಾವುದಕ್ಕೂ ತಲೆ ಕೆಡಿಸಿಕೊಂಡಿಲ್ಲ ಎಂದಿದ್ದಾರೆ.

ಮಹಾಘಟಬಂಧನ್​​ ನಮ್ಮ ಪಕ್ಷವನ್ನು ಲೆಕ್ಕಕ್ಕೇ ಇಟ್ಟಿಲ್ಲ ಅವರು. ಮಹಾಘಟಬಂದನ್ ವ್ಯವಸ್ಥಾಪಕರು ಜೆಡಿಎಸ್ ಮುಳುಗಿಹೋಗಿದೆ ಅನ್ನುವ ಭ್ರಮೆಯಲ್ಲಿದ್ದಾರೆ. ಆಹ್ವಾನ ಕೊಟ್ಟರೊ, ಇಲ್ಲವೋ ಅನ್ನೊದಕ್ಕೆ ತಲೆ ಕೂಡ ಕೆಡಿಸಿಕೊಂಡಿಲ್ಲ. ನಮಗೆ ಎಲ್ಲೂ ಕೂಡ ಆಹ್ವಾನ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ ಹೇಳಿದರು.

ನಮ್ಮ ಪಕ್ಷದ ಸಂಘಟನೆ ಹೇಗೆ ಮಾಡಬೇಕು, ನಾಡಿನ ಜನತೆ ಸಮಸ್ಯೆಯನ್ನು ಯಾವ ರೀತಿ ಬಗೆಹರಿಸಬೇಕೋ ಅದರ ಬಗ್ಗೆ ಚಿಂತಿಸಿ ಕಾರ್ಯಪ್ರವೃತ್ತರಾಗುತ್ತೇವೆ. ಈಗಾಗಲೇ 42 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಾಧ್ಯಮಗಳಿಂದ ತಿಳಿದುಕೊಂಡೆ. ಅದರ ಬಗ್ಗೆ ಸರ್ಕಾರಕ್ಕೆ ಚಿಂತೆಯಿಲ್ಲ, ಮಹಾಘಟ ಬಂಧನ ಎಂದು ರಸ್ತೆಯುದ್ಧಕ್ಕೂ ದೊಡ್ಡ ದೊಡ್ಡ ಕಟೌಟ್, ಬ್ಯಾನರ್ ಹಾಕಿ ಕೋಟಿಗಟ್ಟಲೆ ಹಣ ಖರ್ಚು ಮಾಡಿ ಯಾರೂ ಮಾಡದ ಸಾಧನೆ ಮಾಡಿದ್ದೇವೆ ಎಂದು ತೋರಿಸುತ್ತಿದ್ದಾರೆ. ಇದರಿಂದ ಜನಸಾಮಾನ್ಯರಿಗೆ ಏನಾದರೂ ಪ್ರಯೋಜನವಿದೆಯೇ ಎಂದು ಕುಮಾರಸ್ವಾಮಿ ಕೇಳಿದರು.

ರೈತರಿಗೆ ಏನು ಸಂದೇಶ ಕೊಡುತ್ತಿದ್ದಾರೆ?: ಇವತ್ತಿನವರೆಗೆ ರಾಜ್ಯದಲ್ಲಿ 42 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ರೈತರ ಸಂಕಷ್ಟಕ್ಕೆ ಮಿಡಿಯುವ ಬಗ್ಗೆ ಸರ್ಕಾರ ಒಂದಾದರೂ ಸಂದೇಶ ಕೊಟ್ಟಿದೆಯೇ? ರೈತರ ಬಗ್ಗೆ ಸರ್ಕಾರ ಯಾವುದೇ ಹೇಳಿಕೆಯನ್ನೂ ನೀಡಿಲ್ಲ, ಇದು ಇಂದಿನ ಪರಿಸ್ಥಿತಿಯಾಗಿದೆ ಎಂದರು.

ನಮ್ಮ ಪಕ್ಷಕ್ಕೆ ಕಾರ್ಯಕರ್ತರಿದ್ದಾರೆ. ಒಂದೊಂದು ಚುನಾವಣೆಯಲ್ಲಿ ಒಂದೊಂದು ರೀತಿ ನಾಡಿನ ಜನತೆ ತೀರ್ಮಾನ ತೆಗೆದುಕೊಳ್ಳುತ್ತಾರೆ. ನಮ್ಮ ಪಕ್ಷ ಮೊದಲಿನಿಂದಲೂ ಹೋರಾಟ ನಡೆಸಿಕೊಂಡು ಬಂದಿದೆ. ಇಂತಹ ಸಭೆಗಳೆಲ್ಲ ಪ್ರಿಮೆಚ್ಯೂರ್ ಆಗಿದ್ದು, ಇನ್ನೂ ಏಳೆಂಟು ತಿಂಗಳು ಚುನಾವಣೆಗೆ ಬಾಕಿಯಿದೆ, ನೋಡೋಣ ಏನೆಲ್ಲಾ ಆಗುತ್ತದೆ ಎಂದು ಹೇಳಿದ ಕುಮಾರಸ್ವಾಮಿ ಎನ್ ಡಿಎ ಸಭೆಯಲ್ಲಿ ಪಾಲ್ಗೊಳ್ಳುವ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಟ್ಟಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT