ಪ್ರತಿಪಕ್ಷಗಳ ಮೈತ್ರಿಕೂಟ ಸುದ್ದಿಗೋಷ್ಟಿ 
ರಾಜಕೀಯ

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ 'I.N.D.I.A' ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲಯನ್ಸ್(I.N.D.I.A) ಎಂದು ನಾಮಕರಣ ಮಾಡಲಾಗಿದೆ.

ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಶನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲಯನ್ಸ್(I.N.D.I.A) ಎಂದು ನಾಮಕರಣ ಮಾಡಿರುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ ಪ್ರತಿಪಕ್ಷಗಳ ಸಭೆಯ ನಂತರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಭಾರತದ ಪ್ರಜಾಪ್ರಭುತ್ವ ಉಳಿವಿಗೆ ನಮ್ಮ ಹೋರಾಟ ನಡೆಯುತ್ತಿದೆ. ಒಂದೇ ಧ್ವನಿಯಲ್ಲಿ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು,

26 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗಿಯಾಗಿ ನಾವು ಈ ನಿರ್ಧಾರಕ್ಕೆ ಬಂದಿದ್ದೇವೆ. 11 ಜನರ ಸಮಿತಿ ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಈ 11 ಜನರ ಹೆಸರು ಸದ್ಯದಲ್ಲೇ ಘೋಷಣೆ ಮಾಡುತ್ತೇವೆ. ಮಹಾರಾಷ್ಟ್ರ, ಮುಂಬೈನಲ್ಲಿ ಮತ್ತೆ ಸಭೆ ಸೇರಲಿದ್ದೇವೆ. ಕ್ಯಾಂಪೇನ್ ಮ್ಯಾನೇಜ್ಮೆಂಟ್​​ಗೆ ಕಾರ್ಯದರ್ಶಿ ನೇಮಕ ಮಾಡಲಾಗುವುದು. ದೆಹಲಿಯಲ್ಲಿ ಈ ಬಗ್ಗೆ ನಾವು ನಿರ್ಧಾರ ಕೈಗೊಳ್ಳಲಿದ್ದೇವೆ. ಮುಂಬೈನಲ್ಲಿ ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಖರ್ಗೆ ತಿಳಿಸಿದರು.

ಇದೇ ವೇಳೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಸಂವಿಧಾನವನ್ನು ಕೂಡ ಹಾಳು ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರು.

ಎನ್​ಡಿಎ ಸಭೆಯಲ್ಲಿ ಭಾಗವಹಿಸಿದ ಕೆಲವು ಪಕ್ಷಗಳ ಹೆಸರು ಚುಣಾವಣಾ ಆಯೋಗದ ಪಟ್ಟಿಯಲ್ಲೇ ಇಲ್ಲ. ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ. ಅವರ ಜೊತೆಗಿರೋ ಪಕ್ಷಗಳು ತುಕಡೇ ತುಕಡೇ ಗ್ಯಾಂಗ್. ವಿಪಕ್ಷಗಳ ಸಭೆ ಮಾಡೋದನ್ನ ನೋಡಿ ಮೋದಿಗೆ ಭಯವಾಗಿದೆ. ಹೀಗಾಗಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!