ವಿರೋಧ ಪಕ್ಷಗಳ ಸಭೆ 
ರಾಜಕೀಯ

ನಿತೀಶ್-ಲಾಲೂ ಇಲ್ಲಿ ಭಾಯಿ ಭಾಯಿ! ಭಾರತ ತುಂಡರಿಸುವಂತಹ ಹೇಳಿಕೆ ನೀಡುವ, ಪಾಕಿಸ್ತಾನ ಪ್ರೇಮಿ ಅಬ್ದುಲ್ಲಾಗೂ ಆಹ್ವಾನ!

ಮಹಾಘಟಬಂಧನ್ ಸಭೆಯ ಬಗ್ಗೆ ಬಿಜೆಪಿ ಟ್ವೀಟ್​ನಲ್ಲಿ ಕಾಲೆಳೆದಿದ್ದು, ಇದೊಂದು ಅವಕಾಶವಾದಿಗಳ ಸಭೆಯಾಗಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಎಲ್ಲರೂ ಒಂದಾಗುತ್ತಿದ್ದಾರೆ. ಮೋದಿ ಮೇಲೆ ದ್ವೇಷ ಕಾರುವುದಷ್ಟೇ ಇವರ ಅಜೆಂಡಾವಾಗಿದೆ ಎಂದಿದ್ದಾರೆ.

ಬೆಂಗಳೂರು: ಮಹಾಘಟಬಂಧನ್ ಸಭೆಯ ಬಗ್ಗೆ ಬಿಜೆಪಿ ಟ್ವೀಟ್​ನಲ್ಲಿ ಕಾಲೆಳೆದಿದ್ದು, ಇದೊಂದು ಅವಕಾಶವಾದಿಗಳ ಸಭೆಯಾಗಿದ್ದು, ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಎಲ್ಲರೂ ಒಂದಾಗುತ್ತಿದ್ದಾರೆ. ಮೋದಿ ಮೇಲೆ ದ್ವೇಷ ಕಾರುವುದಷ್ಟೇ ಇವರ ಅಜೆಂಡಾವಾಗಿದೆ ಎಂದಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ  ರಾಜಕಾರಣದಲ್ಲಿ ಇದುವರೆಗೂ ಇವರೆಲ್ಲಾ ಬದ್ಧತೆ ಪ್ರದರ್ಶಿಸಿಲ್ಲ, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತ ಇವರ ಸಿದ್ಧಾಂತವಾಗಿದೆ.ಈ ಸಭೆಯ ಆಯೋಜಕರು ಯಾರು? ಈ ಸಭೆಯ ಅಧ್ಯಕ್ಷರು ಯಾರು? ಈ ಸಭೆಯ ಸಂಯೋಜನೆ ಯಾವ ಪಕ್ಷದ್ದು? ಇದ್ಯಾವುದರ ಬಗ್ಗೆ ಸ್ವಲ್ಪವೂ ಸ್ಪಷ್ಟತೆ ಇಲ್ಲ.

ಯುನೈಟೆಡ್ ವಿ ಸ್ಟಾಂಡ್ ಎಂಬ ಈ ಕಿಟ್ಟಿ ಪಾರ್ಟಿಯ ಹೆಸರೇ ಇವರ ಮಧ್ಯೆ ಒಗ್ಗಟ್ಟು ದೂರದ ಬೆಟ್ಟ ಎಂಬುದನ್ನು ನಿರೂಪಿಸುತ್ತದೆ. ದಶಕಗಳಿಂದ ಪಶ್ಚಿಮ ಬಂಗಾಳದಲ್ಲಿ ಪರಸ್ಪರ ಕಚ್ಚಾಡುತ್ತಿರುವ ಮಮತಾ ಬ್ಯಾನರ್ಜಿಯ ಟಿಎಂಸಿ ಹಾಗೂ ಕಮ್ಯುನಿಸ್ಟರು ಇಂದು ಒಂದೇ ಟೇಬಲ್‌ನಲ್ಲಿ ಕುಳಿತು ಒಗ್ಗಟ್ಟು ಪ್ರದರ್ಶಿಸುತ್ತಾರಂತೆ.

ದಶಕಗಳಿಂದ ಪಶ್ಚಿಮ ಬಂಗಾಳದಲ್ಲಿ ಪರಸ್ಪರ ಕಚ್ಚಾಡುತ್ತಿರುವ ಮಮತಾ ಬ್ಯಾನರ್ಜಿಯ ಟಿಎಂಸಿ ಹಾಗೂ ಕಮ್ಯುನಿಸ್ಟರು ಇಂದು ಒಂದೇ ಟೇಬಲ್‌ನಲ್ಲಿ ಕುಳಿತು ಒಗ್ಗಟ್ಟು ಪ್ರದರ್ಶಿಸುತ್ತಾರಂತೆ, ಕೇರಳದಲ್ಲಿ ಅಧಿಕಾರಕ್ಕಾಗಿ ಹೊಡೆದಾಡುವ ಕಾಂಗ್ರೆಸ್ ಮತ್ತು ಕಮ್ಯುನಿಸ್ಟರು ಬೆಂಗಳೂರಿನಲ್ಲಿ ನಡೆಯುವ ಸಭೆಯಲ್ಲಿ ಕಾಮ್ರೇಡ್‌ಗಳಂತೆ. ಪಂಜಾಬ್‌ನಲ್ಲಿ ಬಾಯಿಗೆ ಬಂದಂತೆ ಪರಸ್ಪರ ಬೈದಾಡಿಕೊಳ್ಳುವ ಆಮ್ ಆದ್ಮಿ ಪಕ್ಷದವರು ಹಾಗೂ ಕಾಂಗ್ರೆಸ್‌ನವರು, ಇಲ್ಲಿ ಮಾತ್ರ ಬಾಂಧವರಂತೆ ಎಂದು ಲೇವಡಿ ಮಾಡಿದೆ.

ಸೋನಿಯಾ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನೀಡಬಾರದೆಂದು, ಕಾಂಗ್ರೆಸ್ ಪಕ್ಷವನ್ನೇ ತುಂಡರಿಸಿ ಹೊರ ಬಂದ ಎನ್.ಸಿ.ಪಿ ಸಹ ಇಲ್ಲಿ ಅತಿಥಿಯಂತೆ,  ಒಬ್ಬರಿಗೊಬ್ಬರು ಹೊಡೆದಾಡಿಕೊಂಡು ಬಿಹಾರವನ್ನು 'ಬಿಮಾರು'ಗೊಳಿಸಿದ್ದ ನಿತೀಶ್ ಕುಮಾರ್ & ಲಾಲೂ ಪ್ರಸಾದ್ ಯಾದವ್, ಇಲ್ಲಿ ಭಾಯಿ-ಭಾಯಿಗಳಂತೆ.  ಭಾರತವನ್ನು ತುಂಡರಿಸುವಂತಹ ಹೇಳಿಕೆಗಳನ್ನು ನೀಡುವ,  ಪಾಕಿಸ್ಥಾನ ಪ್ರೇಮಿ ಫಾರೂಕ್ ಅಬ್ದುಲ್ಲಾಗೂ ಸಹ ಇಲ್ಲಿಗೆ ಆಹ್ವಾನವಿದೆಯಂತೆ.

ಹಿಂದೂ ಧರ್ಮವನ್ನು ಸದಾ ಅವಹೇಳನ ಮಾಡುವ, ಹಿಂದೂಗಳನ್ನು ಅತ್ಯಂತ ಕೆಟ್ಟದಾಗಿ ನಿಂದಿಸುವ, ದ್ವೇಷಿಸುವ ತಮಿಳುನಾಡಿನ ತೋಳ್ ತಿರುಮಾವಳವನ್, ಮುಸ್ಲಿಂ ಲೀಗ್‌ಗೆ ಇಲ್ಲಿ ಪಾಲಿದೆಯಂತೆ. ಇಂತಹವರಿಂದ ಸಧೃಡ ಭಾರತ ಹಾಗೂ ಸಶಕ್ತ ಭಾರತವನ್ನು ನಿರ್ಮಿಸಲು ಸಾಧ್ಯವೇ..?  ತಿಂಡಿ ತಿನ್ನುವ ವೇಳೆ ಇರುವ ಇವರುಗಳ ಸ್ನೇಹ, ಊಟದ ವೇಳೆಗೆ ಮಾಯವಾದರೂ ಅಚ್ಚರಿ ಇಲ್ಲ ಎಂದಿದೆ ಟೀಕಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

SCROLL FOR NEXT