ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಅಮಿತ್ ಶಾ ಮಾರ್ಗದರ್ಶನ: ವಿಜಯೇಂದ್ರ

Nagaraja AB

ಬೆಂಗಳೂರು: ರಾಜ್ಯ ವಿಧಾನಮಂಡಲದ ಬಜೆಟ್ ಅಧಿವೇಶನ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷಗಳ ನಡುವೆ ಜಂಗೀಕುಸ್ತಿಗೆ ವೇದಿಕೆಯಾಗಿ ಪರಿಣಮಿಸಿದ್ದು, ವಿಪಕ್ಷ ನಾಯಕನನ್ನು ಆಯ್ಕೆ ಮಾಡದಿರುವುದು ಬಿಜೆಪಿಗೆ ಮುಜುಗರದ ಪ್ರಶ್ನೆಯಾಗಿ ಉಳಿದಿದೆ. 

ಈ ನಡುವೆ  ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ಹಾಗೂ ಬಿಜೆಪಿ ಶಾಸಕ ಬಿ. ವೈ. ವಿಜಯೇಂದ್ರ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯ ಕುರಿತು ಚರ್ಚೆ ನಡೆಸಿದ್ದಾರೆ. 

ಈ ಕುರಿತ ಫೋಟೋಗಳನ್ನು ಟ್ವೀಟ್ ಮಾಡಿರುವ ವಿಜಯೇಂದ್ರ, ಅಮಿತ್ ಶಾ ಭೇಟಿ ಸಂದರ್ಭದಲ್ಲಿ ರಾಜ್ಯದಲ್ಲಿ ವೈಫಲ್ಯದ ಗ್ಯಾರಂಟಿ ಬೆನ್ನಿಗಂಟಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಹಾಗೂ ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರನ್ನು ಸಜ್ಜುಗೊಳಿಸುವ ಕುರಿತು ಮಾರ್ಗದರ್ಶನ ಪಡೆಯಲಾಯಿತು ಎಂದು ತಿಳಿಸಿದ್ದಾರೆ.

ವಿಧಾನ ಸಭೆ ಹಾಗೂ ಹೊರಗೆ ‘ಕಾಂಗ್ರೆಸ್ ವೈಫಲ್ಯ ಹಾಗೂ ಜನವಿರೋಧಿ ಕ್ರಮಗಳ’ ವಿರುದ್ಧ ಹೋರಾಟ ರೂಪಿಸುವ ಕುರಿತು ಜೆ.ಪಿ. ನಡ್ಡಾ ಅವರಿಂದ ಮಾರ್ಗದರ್ಶನ ಪಡೆದಿರುವುದಾಗಿ ಟ್ವೀಟ್ ಮಾಡಿದ್ದಾರೆ.

SCROLL FOR NEXT